ರಾಜ್ಯ

ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿಗೆ 1 ಸಾವಿರ ಕೋಟಿ ಕ್ರಿಯಾ ಯೋಜನೆ ರೂಪಿಸಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿಗೆ 1 ಸಾವಿರ ಕೋಟಿ ರೂಪಾಯಿ ಕ್ರಿಯಾ ಯೋಜನೆ ರೂಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ.

ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಸತಿ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದ ಸಿದ್ದರಾಮಯ್ಯ, ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿಗೆ 1 ಸಾವಿರ ಕೋಟಿ ರೂ. ಕ್ರಿಯಾ ಯೋಜನೆ ರೂಪಿಸಬೇಕು. ಕ್ರಿಯಾ ಯೋಜನೆ ತಯಾರಿಸುವ ಸಂದರ್ಭದಲ್ಲಿ ಅಲ್ಪಸಂಖ್ಯಾತರು ಹೆಚ್ಚಾಗಿ ನೆಲೆಸಿರುವ ಪ್ರದೇಶಗಳನ್ನು ಗುರುತಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಈ ಬಗ್ಗೆ ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿರುವ ಅವರು ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿಗೆ ಸಾವಿರ ಕೋಟಿ ರೂ. ಗಳ ಕ್ರಿಯಾ ಯೋಜನೆ ರೂಪಿಸಬೇಕು. ಈ ಕ್ರಿಯಾ ಯೋಜನೆ ತಯಾರಿಸುವ ಸಂದರ್ಭದಲ್ಲಿ ಅಲ್ಪಸಂಖ್ಯಾತರು ಹೆಚ್ಚಾಗಿ ನೆಲೆಸಿರುವ ಪ್ರದೇಶಗಳನ್ನು ಗುರುತಿಸಿ, ಅನುದಾನ ಹಂಚಿಕೆ ಮಾಡಬೇಕು.

ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರ ನೀಡುತ್ತಿದ್ದ ವಿದ್ಯಾರ್ಥಿ ವೇತನ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವೇ ಇದನ್ನು ಭರಿಸಲು ತೀರ್ಮಾನಿಸಿದ್ದು, 6.4 ಲಕ್ಷ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಬಿಡುಗಡೆಗೆ ಸಿದ್ಧವಾಗಿದೆ. ಆಯವ್ಯಯದಲ್ಲಿ 60 ಕೋಟಿ ರೂ. ನಿಗದಿಯಾಗಿದ್ದು, ಇಲಾಖೆಗೆ ಲಭ್ಯ ಅನುದಾನದಲ್ಲಿಯೇ ಮರುಹಂಚಿಕೆ ಮಾಡಿ ಹೆಚ್ಚುವರಿ 40 ಕೋಟಿ ಭರಿಸಬೇಕು.

ಅಲ್ಪಸಂಖ್ಯಾತರಿಗೆ ಸವಲತ್ತು ವಿತರಿಸುವ ವಿವಿಧ ಯೋಜನೆಗಳಿಗೆ ಆನ್‌ಲೈನ್‌ ಮೂಲಕ ಭಾರಿ ಪ್ರಮಾಣದಲ್ಲಿ ಅರ್ಜಿ ಸ್ವೀಕೃತವಾಗಿದ್ದು, ಮುಂದಿನ ವರ್ಷ ಇದಕ್ಕೆ ಹೆಚ್ಚಿನ ಅನುದಾನ ಒದಗಿಸಲಾಗುವುದು.

ವಿವಿಧ ವಸತಿ ಯೋಜನೆಗಳಡಿ ಪ್ರಸಕ್ತ ಸಾಲಿನಲ್ಲಿ 3 ಲಕ್ಷ ಮನೆಗಳ ನಿರ್ಮಾಣದ ಗುರಿಗೆದುರಾಗಿ ಈ ವರೆಗೆ 1.31 ಲಕ್ಷ ಮನೆಗಳ ನಿರ್ಮಾಣ ಪೂರ್ಣಗೊಂಡಿದೆ. ಮುಕ್ತಾಯದ ಹಂತದಲ್ಲಿರುವ 1.6 ಲಕ್ಷ ಮನೆಗಳನ್ನು ಮಾರ್ಚ್‌ ಒಳಗೆ ಪೂರ್ಣಗೊಳಿಸಬೇಕು.

ಈ ಬಗ್ಗೆ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಮತ್ತು ಸಂಬಂಧಿಸಿದ ಎಂಜಿನಿಯರುಗಳ ಸಭೆ ನಡೆಸಿ, ಲಿಂಟೆಲ್‌ ಮತ್ತು ಛಾವಣಿ ಹಂತದಲ್ಲಿರುವ ಸುಮಾರು ಒಂದೂವರೆ ಲಕ್ಷಕ್ಕೂ ಹೆಚ್ಚು ಮನೆಗಳನ್ನು ಮಾರ್ಚ್‌ ಅಂತ್ಯದೊಳಗೆ ಪೂರ್ಣಗೊಳಿಸಬೇಕು.

ಕೊಳೆಗೇರಿ ಅಭಿವೃದ್ಧಿ ಮಂಡಳಿಯ ವ್ಯಾಪ್ತಿಯಲ್ಲಿ ವಿವಿಧ ಯೋಜನೆಗಳಡಿ 1.8 ಲಕ್ಷ ಮನೆಗಳು ಪ್ರಗತಿಯಲ್ಲಿದೆ. ಫಲಾನುಭವಿಗಳ ವಂತಿಗೆ ಸೇರಿದಂತೆ 5 ಲಕ್ಷ ರೂ. ಗಳನ್ನು ಭರಿಸಲು ಹಾಗೂ ಇದಕ್ಕಾಗಿ ಮತ್ತು ಬಡಾವಣೆಗಳ ಮೂಲಸೌಕರ್ಯ ಅಭಿವೃದ್ಧಿಗಾಗಿ 500 ಕೋಟಿ ರೂ. ಬಿಡುಗಡೆ ಮಾಡಲು ಸಚಿವ ಸಂಪುಟ ತೀರ್ಮಾನಿಸಿರುವ ಹಿನ್ನೆಲೆಯಲ್ಲಿ ಮುಕ್ತಾಯದ ಹಂತದಲ್ಲಿರುವ 25 ಸಾವಿರ ಮನೆಗಳನ್ನು ಫೆಬ್ರುವರಿ ಅಂತ್ಯದ ವೇಳೆ ಪೂರ್ಣಗೊಳಿಸಬೇಕು.

ರಾಜೀವ್‌ ಗಾಂಧಿ ವಸತಿ ನಿಗಮದಡಿ ಮುಕ್ತಾಯದ ಹಂತದಲ್ಲಿರುವ ಮನೆಗಳನ್ನು ಪೂರ್ಣಗೊಳಿಸಲು ಅಗತ್ಯವಿರುವ ಅನುದಾನಕ್ಕೆ ಸಂಬಂಧಿಸಿದ ಪ್ರಸ್ತಾವನೆಯನ್ನು ಸಚಿವ ಸಂಪುಟದ ಮುಂದೆ ಮಂಡಿಸಬೇಕು.
ನಿಗಮದ ವ್ಯಾಪ್ತಿಯಲ್ಲಿ 2133 ಕೋಟಿ ರೂ. ಲಭ್ಯವಿದ್ದು, ವಿವಿಧ ಹಂತಗಳಲ್ಲಿ ಪ್ರಗತಿಯಲ್ಲಿರುವ ಮನೆಗಳನ್ನು ಪೂರ್ಣಗೊಳಿಸಬೇಕು ಎಂದು ಬರೆದುಕೊಂಡಿದ್ದಾರೆ.

https://x.com/CMofKarnataka/status/1740685020019454454?s=20

andolanait

Recent Posts

ಮುಡಾಗೆ ಆರ್ಥಿಕ ಸಂಕಷ್ಟ; 20 ಕೋಟಿ ರೂ ನಷ್ಟ

ಮೈಸೂರು: ಬದಲಿ ನಿವೇಶನ ಹಂಚಿಕೆ, ೫೦:೫೦ ಅನುಪಾತದಲ್ಲಿ ನಿವೇಶನ ಅಕ್ರಮ ಹಂಚಿಕೆ ಹಗರಣದಿಂದಾಗಿ ಇಡೀ ರಾಜ್ಯದ ಗಮನ ಸೆಳೆದಿರುವ ಮೈಸೂರು…

2 hours ago

ಆಂದೋಲನ ಫಲಶ್ರುತಿ: ಕೊನೆಗೂ ತೆರವಾಯ್ತು ಬೃಹತ್‌ ಮರದ ಕಾಂಡ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜುಂಬೂ ಸವಾರಿ ಸಾಗುವ ಮಾರ್ಗದಲ್ಲಿ ಕಳೆದ ಎರಡೂ ವರ್ಷಗಳಿಂದ ಬಿದ್ದಿದ್ದ ಬೃಹತ್ ಮರದ ಕಾಂಡವನ್ನು…

2 hours ago

ಜಂಬೂ ಸವಾರಿ ಮಾರ್ಗದಲ್ಲಿ ಸಣ್ಣ ಬದಲಾವಣೆ

ಮೈಸೂರು: ಈ ಬಾರಿಯ ದಸರಾ ಮಹೋತ್ಸವದ ಜಂಬೂ ಸವಾರಿಯನ್ನು ವೀಕ್ಷಿಸಲು ಆಗಮಿಸಿದ ಎಲ್ಲರಿಗೂ ಚಿನ್ನದ ಅಂಬಾರಿ ನೋಡುವ ಅವಕಾಶ ಸಿಗಬೇಕು…

2 hours ago

ಪೈಲ್ವಾನರ ಕಸರತ್ತಿಗೆ ಗರಡಿ ಮನೆಗಳು ಸಜ್ಜು

ಮೈಸೂರು: ಸಾಂಸ್ಕೃತಿಕ ರಾಜಧಾನಿ, ಅರಮನೆಗಳ ನಗರಿ ಎಂದು ಕರೆಯುವ ಮೈಸೂರನ್ನು ಗರಡಿ ಮನೆಗಳ ನಗರಿ ಎಂದೂ ಇತ್ತೀಚಿನ ವರ್ಷಗಳಲ್ಲಿ ಕರೆಯುವುದು…

2 hours ago

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

10 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

11 hours ago