ಡಿಸೆಂಬರ್ 24 ರಾಜ್ಯದಲ್ಲಿ ಕೊನೆಯ 24 ಗಂಟೆಗಳಲ್ಲಿ ಒಟ್ಟು 106 ಹೊಸ ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಹಂಚಿಕೊಂಡಿದೆ. 33 ಜನ ಡಿಸ್‌ಚಾರ್ಜ್ ಆಗಿದ್ದು, ಸದ್ಯ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 344 ಇದೆ. ಕೊನೆಯ 24 ಗಂಟೆಗಳಲ್ಲಿ 1441 ಟೆಸ್ಟ್‌ಗಳು ನಡೆದಿವೆ, 1135 ಆರ್‌ಟಿಪಿಸಿಆರ್ ಟೆಸ್ಟ್‌ಗಳು ನಡೆದಿವೆ ಹಾಗೂ 306 ರ್ಯಾಟ್ ಟೆಸ್ಟ್‌ಗಳು ನಡೆದಿವೆ. ರಾಜ್ಯದಲ್ಲಿ ಪಾಸಿಟಿವಿಟಿ ದರ 7.35% ಇದೆ. ಕಳೆದ 24 ಗಂಟೆಗಳಲ್ಲಿ ಯಾವುದೇ ಸಾವು ಸಂಭವಿಸಿಲ್ಲ.
ಒಟ್ಟು 344 ಸಕ್ರಿಯ ಪ್ರಕರಣಗಳ ಪೈಕಿ 323 ಸೋಂಕಿತರನ್ನು ಹೋಮ್ ಐಸೋಲೇಷನ್ ಮಾಡಲಾಗಿದ್ದು, 21 ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರ ಪೈಕಿ 7 ಸೋಂಕಿತರು ಐಸಿಯುನಲ್ಲಿದ್ದು, 14 ಸೋಂಕಿತರು ಸಾಮಾನ್ಯ ವಾರ್ಡ್‌ನಲ್ಲಿದ್ದಾರೆ.
ಕಳೆದ 24 ಗಂಟೆಗಳಲ್ಲಿ ಮೈಸೂರಿನಲ್ಲಿ 6, ಮಂಡ್ಯದಲ್ಲಿ 1 ಹಾಗೂ ಚಾಮರಾಜನಗರದಲ್ಲಿ 1 ಪ್ರಕರಣಗಳು ಪತ್ತೆಯಾಗಿವೆ. ಮೈಸೂರಿನಲ್ಲಿ ಒಟ್ಟು 18, ಮಂಡ್ಯದಲ್ಲಿ 3 ಹಾಗೂ ಚಾಮರಾಜನಗರದಲ್ಲಿ 3 ಸಕ್ರಿಯ ಪ್ರಕರಣಗಳಿವೆ.
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ 21ನೇ ಘಟಿಕೋತ್ಸವದ ಸಂಭ್ರಮ ಮನೆಮಾಡಿದ್ದು, ಒಟ್ಟು 8 ಮಂದಿ ಗಣ್ಯರಿಗೆ ಗೌರವ ಡಾಕ್ಟರೇಟ್…
ಬೆಂಗಳೂರು: ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕು ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು ಶಾಲೆಗೆ…
ಬೀದರ್: ನಿಗೂಢ ವಸ್ತುವೊಂದು ಸ್ಫೋಟಗೊಂಡ ಪರಿಣಾಮ ಆರು ಮಕ್ಕಳಿಗೆ ಗಂಭೀರ ಗಾಯಗಳಾಗಿರುವ ಘಟನೆ ಹುಮನಾಬಾದ್ ತಾಲ್ಲೂಕಿನ ಮೋಳಕೇರಾ ಗ್ರಾಮದಲ್ಲಿ ನಡೆದಿದೆ.…
ಮೈಸೂರು: ಮಾಜಿ ಸಚಿವ ಸಿ.ಟಿ.ರವಿ ಅವರಿಂದು ಮೈಸೂರು ಮುಕ್ತ ವಿಶ್ವವಿದ್ಯಾನಿಲಯದಿಂದ ಪಿಎಚ್‌ಡಿ ಪದವಿ ಪಡೆದಿದ್ದಾರೆ. ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್…
ಮುಂಬೈ: ವಿಮಾನ ಪತನ ದುರಂತದಲ್ಲಿ ಸಾವನ್ನಪ್ಪಿದ ಡಿಸಿಎಂ ಅಜಿತ್ ಪವಾರ್ ಪತ್ನಿ ಸುನೇಂದ್ರ ಪವಾರ್ ಅವರನ್ನು ಉಪಮುಖ್ಯಮಂತ್ರಿ ಸ್ಥಾನಕ್ಕೆ ನೇಮಿಸಲು…
ಬೆಂಗಳೂರು: ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಪಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣದ ಬಗ್ಗೆ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ…