ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತಕ್ಕೆ ಸಿಲುಕಿ ಸಾವನ್ನಪ್ಪಿದವರ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ.
ಬೌರಿಂಗ್‌ನಲ್ಲಿ ಆರು ಹಾಗೂ ವಿಕ್ಟೋರಿಯಾದಲ್ಲಿ ಐದು ಮಂದಿ ಮರಣೋತ್ತರ ಪರೀಕ್ಷೆ ನಡೆಸಿ ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ. ವೈದ್ಯರ ಮರಣೋತ್ತರ ಪರೀಕ್ಷೆಯಲ್ಲಿ ಮೃತಪಟ್ಟವರ ಸಾವಿಗೆ ಕಾರಣ ಬಯಲಾಗಿದೆ. ಎಲ್ಲರೂ ಉಸಿರಾಟದ ಸಮಸ್ಯೆಯಿಂದ ಮೃತಪಟ್ಟಿರುವುದು ವರದಿಯಲ್ಲಿ ದೃಢಪಟ್ಟಿದೆ.
ಮೃತರ ಎದೆಯ ಭಾಗದಲ್ಲಿ ಹೆಚ್ಚು ಒತ್ತಡ ಬಿದ್ದು ಮೃತಪಟ್ಟಿದ್ದಾರೆ. ಮತ್ತೆ ಕೆಲವರು ಉಸಿರುಗಟ್ಟುವಿಕೆ ಆರಂಭ ಆಗಿ 15 ರಿಂದ 18 ನಿಮಿಷದಲ್ಲಿ ಸಾವನ್ನಪ್ಪಿದ್ದಾರೆ.
ಸದ್ಯ ಬೌರಿಂಗ್ ಆಸ್ಪತ್ರೆಯಲ್ಲಿ 9 ಜನರಿಗೆ ಚಿಕಿತ್ಸೆ ಮುಂದುವರಿದಿದ್ದು, ಇಬ್ಬರಿಗೆ ಕಾಲು ಮೂಳೆ ಮುರಿದಿದೆ. 15 ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, 9 ಜನರ ಆರೋಗ್ಯ ಸ್ಥಿರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.





