ರಾಮನಗರ : ಚಾರಣಕ್ಕೆ ಹೋಗಿದ್ದ ಆರು ಜನ ಯುವತಿಯರು ವಾಪಸ್ ಬರುವಾಗ ದಾರಿ ತಪ್ಪಿ ಕಾಡಿನಲ್ಲಿ ಅಲೆದಾಡಿ, ದಿಕ್ಕು ತೋಚದೆ ಕೊನೆಗೆ 112 ಸಹಾಯದ ಮೂಲಕ ಊರು ಸೇರಿದ ಘಟನೆ ರಾಮನಗರದಲ್ಲಿ ನಡೆದಿದೆ.
ಬೆಂಗಳೂರಿನಿಂದ ರಾಮನಗರದ ಹಂದಿಗೊಂದಿ ಬೆಟ್ಟಕ್ಕೆ ಚಾರಣಕ್ಕಾಗಿ ಬಂದಿದ್ದ ಆರು ಜನ ಹುಡುಗಿಯರು. ಚಾರಣ ಮುಗಿಸಿ ವಾಪಸ್ ಹೋಗುವಾಗ ಕಾಡಿನ ಮಧ್ಯೆ ದಾರಿ ತಪ್ಪಿದ್ದಾರೆ. ಹೊರಹೋಗಲು ದಾರಿ ಸಿಗದೆ ಕಾಡಿನಲ್ಲಿ ಅಲೆದಾಡಿದ್ದಾರೆ. ಕೊನೆಗೆ ತುರ್ತು ಸಂಖ್ಯೆ 112ಗೆ ಕರೆ ಮಾಡಿ ದಾರಿ ತಪ್ಪಿದ ಬಗ್ಗೆ ಪೊಲೀಸರಿಗೆ ಹುಡುಗಿರು ಮಾಹಿತಿ ನೀಡಿದ್ದಾರೆ.
ತಕ್ಷಣ ಕಾರ್ಯಪ್ರವೃತ್ತರಾಗಿ ಹುಡುಗಿರು ನೀಡಿದ ಮಾಹಿತಿಯ ಜಾಡು ಹಿಡಿದು ಹೊರಟ ರಾಮನಗರ ಐನೂರು ಪೊಲೀಸರು, ಹುಡುಗಿಯರ ರಕ್ಷಣೆಗೆ ಮುಂದಾದರು. ಬಸವನಪುರ ಗ್ರಾಮದ ಸುಮಾರು ಹತ್ತಕ್ಕೂ ಹೆಚ್ಚು ಜನರನ್ನು ಬಳಸಿಕೊಂಡು ಕಾರ್ಯಾಚರಣೆ ಮಾಡಿದ ಪೊಲೀಸರು ರಾತ್ರಿ ಸುಮಾರು 9 ಗಂಟೆಗೆ ಹುಡುಗಿಯರನ್ನು ಪತ್ತೆ ಮಾಡಿದರು. ದಾರಿ ತಪ್ಪಿದ್ದ ಹುಡುಗಿಯರ ರಕ್ಷಣೆ ಮಾಡಿ ಸುರಕ್ಷಿತ ಸ್ಥಳಕ್ಕೆ ಕರೆದೊಯ್ದು ಅವರನ್ನು ಬೆಂಗಳೂರಿಗೆ ಕಳುಹಿಸಿಕೊಟ್ಟರು.
ರಾಮನಗರ ವ್ಯಾಪ್ತಿ ಕಾಡುಪ್ರಾಣಿಗಳ ಹಾವಳಿಯೂ ಹೆಚ್ಚಾಗಿದೆ ಇಂಥ ಪರಿಸ್ಥಿತಿಯಲ್ಲಿ ಯುವತಿಯರು ದಾರಿ ತಪ್ಪಿದ್ದು ಪೊಲೀಸರಿಗೆ ಹೆಚ್ಚಿನ ತಲೆನೋವಾಗಿ ಪರಿಣಮಿಸಿದೆ. ಕೊನೆಗೆ ಗ್ರಾಮಸ್ಥರ ಸಹಾಯದಿಂದ ಹುಡುಗಿಯರನ್ನು ಹುಡುಕಿದ ಪೊಲೀಸರು, ಸುರಕ್ಷಿತವಾಗಿ ಬೆಂಗಳೂರಿಗೆ ಕಳಿಸಿಕೊಟ್ಟ ಬಳಿಕವೇ ನಿಟ್ಟುಸಿರು ಬಿಟ್ಟಿದ್ದಾರೆ.
ಮೈಸೂರು ವಿಶ್ವವಿದ್ಯಾನಿಲಯದ ಮಾನಸ ಗಂಗೋತ್ರಿಯಲ್ಲಿ ಸಾವಿರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ವಿವಿಯ ಆವರಣದಲ್ಲಿ ವಿದ್ಯಾರ್ಥಿ ನಿಲಯಗಳ ವ್ಯವಸ್ಥೆಯೂ ಇದೆ. ಸ್ಥಳೀಯ…
ಇತ್ತೀಚಿನ ದಿನಗಳಲ್ಲಿ ಅಲ್ಲಲ್ಲಿ ಜಾತಿ ಸಂಘರ್ಷ, ಧರ್ಮ ಸಂಘರ್ಷ, ಜನಾಂಗೀಯ ಸಂಘರ್ಷಗಳು ನಡೆಯುತ್ತಲೇ ಇವೆ. ‘ಸರ್ವ ಜನಾಂಗದ ಶಾಂತಿಯ ತೋಟ’…
ಹಿರಿಯ ಕಾರ್ಮಿಕ ಧುರೀಣ, ಕಮ್ಯುನಿಸ್ಟ್ ಪಕ್ಷದ ಹಿರಿಯ ನಾಯಕ ಅನಂತ ಸುಬ್ಬರಾವ್ ಕಳೆದ ಸುಮಾರು ೪-೫ ದಶಕಗಳಿಂದ ಕಾರ್ಮಿಕ ಚಳವಳಿಗಳಲ್ಲಿ…
ಕೆ.ಎಸ್. ಚಂದ್ರಶೇಖರ್ ಮೂರ್ತಿ ದುಸ್ಥಿತಿಯಲ್ಲಿ ದೇಶದ ಪ್ರಪ್ರಥಮ ತಗಡೂರು ಖಾದಿ ಕೇಂದ್ರ ಜ.೩೦, ೧೯೪೮ರಂದು ಅಹಿಂಸಾ ಪ್ರತಿಪಾದಕ, ಸ್ವಾತಂತ್ರ್ಯ ಹೋರಾಟಗಾರ…
ಹೊಸ ವರ್ಷದಲ್ಲಿ ಕನ್ನಡ ಚಿತ್ರರಂಗದ ಚಟುವಟಿಕೆಗಳು ಗರಿಗೆದರಿವೆ. ಒಂದೆಡೆ ನಿರ್ಮಾಪಕರ ಸಂಘ ಮತ್ತು ಚಲನಚಿತ್ರ ವಾಣಿಜ್ಯ ಮಂಡಳಿಗಳ ಚುನಾವಣೆಯ ಬಿರುಸು,…
ಚಾಮರಾಜನಗರ: ಚಳಿ ಇನ್ನೂ ದೂರ ಸರಿದಿಲ್ಲ. ಆದರೂ ಬಿಸಿಲು ಬೆವರು ಹರಿಯುವ ಮಟ್ಟಿಗೆ ಸುಡುತ್ತಿದೆ. ನೆಲ ದಿನೇ ದಿನೇ ಕಾದ…