ತುಮಕೂರು: ಇಂದು ಸಿದ್ಧಗಂಗಾ ಮಠದ ನಡೆದಾಡುವ ದೇವರು ಲಿಂಗೈಕ್ಯ ಶಿವಕುಮಾರ ಸ್ವಾಮೀಜಿಗಳ 118ನೇ ಜನ್ಮದಿನೋತ್ಸವದ ಸಂಭ್ರಮ ಮನೆಮಾಡಿದೆ.
ಇಂದು ಮುಂಜಾನೆಯಿಂದಲೇ ಶ್ರೀಗಳ ಗದ್ದುಗೆಯಲ್ಲಿ ಪೂಜಾ ಕೈಂಕರ್ಯ ನಡೆಯುತ್ತಿದ್ದು, ಸಾವಿರಾರು ಮಂದಿ ಸಾರ್ವಜನಿಕರು ಗದ್ದುಗೆಗೆ ಭೇಟಿ ನೀಡಿ ದರ್ಶನ ಪಡೆಯುತ್ತಿದ್ದಾರೆ.
ಸಿದ್ಧಗಂಗಾ ಮಠಾಧ್ಯಕ್ಷರಾದ ಸಿದ್ಧಲಿಂಗ ಸ್ವಾಮೀಜಿಗಳ ನೇತೃತ್ವದಲ್ಲಿ ಮಂತ್ರ ಘೋಷಗಳೊಂದಿಗೆ ಪೂಜಾ ಕೈಂಕರ್ಯಗಳು ನೆರವೇರುತ್ತಿವೆ.
ಜನ್ಮದಿನೋತ್ಸವದ ಅಂಗವಾಗಿ ಸಭಾ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಡಿಸಿಎಂ ಡಿ.ಕೆ.ಶಿವಕುಮಾರ್, ಗೃಹ ಸಚಿವ ಜಿ.ಪರಮೇಶ್ವರ್, ಕೇಂದ್ರ ಸಚಿವ ವಿ.ಸೋಮಣ್ಣ, ಸುತ್ತೂರು ಶ್ರೀ ಸೇರಿದಂತೆ ಹಲವು ಭಾಗಿಯಾಗಲಿದ್ದಾರೆ.