Mysore
15
broken clouds

Social Media

ಗುರುವಾರ, 11 ಡಿಸೆಂಬರ್ 2025
Light
Dark

ಕಲ್ಯಾಣ ಕರ್ನಾಟಕಕ್ಕೆ 13 ಸಾವಿರ ಕೋಟಿ ಅನುದಾನ : ಸಿಎಂ

siddaramaiah

ಯಾದಗಿರಿ : ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳ ಅಭಿವೃದ್ಧಿಗೆ ಮೂರು ವರ್ಷದಲ್ಲಿ 13000 ಕೋಟಿ ರೂಪಾಯಿ ಅನುದಾನ ನೀಡಿದ್ದೇನೆ ಎಂದು ಸಿ.ಎಂ ಸಿದ್ದರಾಮಯ್ಯ ನುಡಿದರು.

ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಆಯೋಜಿಸಿರುವ “ಆರೋಗ್ಯ ಆವಿಷ್ಕಾರ” ಯೋಜನೆಯ ಅಡಿಯಲ್ಲಿ 440.63 ಕೋಟಿ ಮೊತ್ತದ ಕಾಮಗಾರಿಗಳನ್ನು ಉದ್ಘಾಟಿಸಿ, ಬಂಜಾರ ಭವನವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.

ವರ್ಷಕ್ಕೆ 5000 ಕೋಟಿ KKRDB ಗೆ ಕೊಡುವುದಾಗಿ ನಾವು ಚುನಾವಣೆ ವೇಳೆ ಭರವಸೆ ನೀಡಿದ್ದೆವು. ಕಾಂಗ್ರೆಸ್ ಕೊಟ್ಟ ನಮ್ಮ ಭರವಸೆಯಂತೆ ಇಲ್ಲಿಯವರೆಗೂ 13000 ಕೋಟಿ ರೂಪಾಯಿ ಹಣ ನೀಡಿದ್ದೇವೆ. ಇಲ್ಲಿಯವರೆಗೂ 5300 ಕೋಟಿ ಮೊತ್ತ ಖರ್ಚಾಗಿದ್ದು ಕಾಮಗಾರಿ ಜನರಿಗೆ ತಲುಪಿದೆ ಎಂದರು.

KKRDB ಗೆ ಕೊಡುವ ಈ ಅನುದಾನದ ಹೊರತಾಗಿ ಸರ್ಕಾರ ಇಲಾಖಾವಾರು ಕಾರ್ಯಕ್ರಮಗಳಿಗಾಗಿ ಅನುದಾನ ನೀಡುತ್ತಲೇ ಇದೆ ಎಂದರು.

ನಂಜುಂಡಪ್ಪ ಅವರ ವರದಿಯ ಆಶಯಗಳನ್ನು ನಮ್ಮ ಸರ್ಕಾರ ಈಡೇರಿಸುತ್ತಿದೆ. ಆರೋಗ್ಯ, ಶಿಕ್ಷಣ, ಉದ್ಯೋಗದಲ್ಲಿ ಕಲ್ಯಾಣ ಕರ್ನಾಟಕ ಪ್ರಗತಿ ಸಾಧಿಸುವ ಜೊತೆಗೆ ಮೂಲಭೂತ ಸೌಕರ್ಯಗಳ ಈಡೇರಿಕೆಗೆ ಹಣ ವಿನಿಯೋಗ ಮಾಡಲು ಸೂಚನೆ ನೀಡಿದ್ದೇನೆ. ಇದರ ಪ್ರಕಾರ ಅಕ್ಷರ ಆವಿಷ್ಕಾರ ನಡೆದು ಇಂದು 440.63 ಕೋಟಿ ವೆಚ್ಚದ ಆರೋಗ್ಯ ಆವಿಷ್ಕಾರ ಕಾರ್ಯಕ್ರಮ ಇಂದು ಉದ್ಘಾಟನೆ ಮಾಡಿದ್ದೇವೆ. ಕೊಲ್ಲೂರು ಮಲ್ಲಪ್ಪ ಅವರ ಸ್ಮಾರಕಕ್ಕೆ ಪುಕ್ಕಟೆಯಾಗಿ ಜಗ ಕೊಟ್ಟಿದ್ಸೇವೆ. ಮಲ್ಲಪ್ಪ ಅವರು ಕಲ್ಯಾಣ ಕರ್ನಾಟಕದ ಗಾಂಧಿ ಎಂದು ಕರೆಸಿಕೊಂಡಿದ್ದವರು. ಸ್ವಾತಂತ್ರ್ಯ ಹೋರಾಟಗಾರರಾದ ಇವರ ಸ್ಮಾರಕ ಕೂಡಲೇ ಆಗಬೇಕು ಎಂದು ಸಿಎಂ ಸೂಚನೆ ನೀಡಿದರು.

42 ಆಸ್ಪತ್ರೆಗಳನ್ನು ಮೇಲ್ದರ್ಜೆಗೆ ಏರಿಸುವುದು, ಹೊಸ ಆಸ್ಪತ್ರೆಗಳ ನಿರ್ಮಾಣ ಆಗುತ್ತಿದೆ. ಈ ಭಾಗದ ಆರೋಗ್ಯ ಸವಲತ್ತು ವಿಸ್ತರಿಸಲು ಒಟ್ಟು 847 ಕೋಟಿ ಕೊಡಲು ಸರ್ಕಾರ ಯೋಜನೆ ರೂಪಿಸಿದೆ ಎಂದರು.

ರಾಜ್ಯದಲ್ಲಿ ಅಭಿವೃದ್ಧಿಗೆ ಹಣ ಇಲ್ಲ ಎನ್ನುವ ಬಿಜೆಪಿ ಪರಿವಾರದ ಎಲ್ಲಾ ಸುಳ್ಳುಗಳಿಗೆ ಜನರೇ ಉತ್ತರ ನೀಡುತ್ತಿದ್ದಾರೆ. ಏಕೆಂದರೆ ನಾವು ಅಭಿವೃದ್ಧಿಗೆ ಕೊಟ್ಟಿರುವ ಹಣ ರಾಜ್ಯದ ಜನರ ಮನೆ ಬಾಗಿಲಿಗೆ ತಲುಪಿದೆ ಎಂದರು.

ಬೆಲೆ ಏರಿಕೆಗೆ ಕಾರಣವಾಗಿರುವುದು ಕೇಂದ್ರದ ಮೋದಿ ನೇತೃತ್ವದ ಬಿಜೆಪಿ ಸರ್ಕಾರ. ಮೋದಿ ಬರುವ ಮೊದಲು ಚಿನ್ನ, ಪೆಟ್ರೋಲ್, ಡೀಸೆಲ್, ಔಷಧ, ರಸಗೊಬ್ಬರ, ಅಡುಗೆ ಎಣ್ಣೆ, ಅಡುಗೆ ಅನಿಲದ ಬೆಲೆ ಎಷ್ಟಿತ್ತು ? ಮೋದಿ ಬಂದ ಬಳಿಕ ಎಷ್ಟು ಏರಿಕೆಯಾಗಿದೆ ನೋಡಿ. ಬೆಲೆ ಏರಿಕೆಯ ಸೃಷ್ಟಿಕರ್ತ ಪ್ರಧಾನಿ ಮೋದಿ ಎಂದರು.

ಸುಳ್ಳೇ ಬಿಜೆಪಿಯ ಮನೆ ದೇವರು. ಬಿಜೆಪಿಗೆ ಅಧಿಕಾರ ಇದ್ದಾಗಲೂ ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಮಾಡಲಿಲ್ಲ. ಬಿಜೆಪಿ 371 ಜೆ ಗೆ ವಿರುದ್ಧವಿತ್ತು. ಉಪ ಪ್ರಧಾನಿ ಆಗಿದ್ದ ಎಲ್.ಕೆ.ಅಡ್ವಾಣಿ ಅವರು 371ಜೆ ಜಾರಿ ಮಾಡುವುದಿಲ್ಲ ಎಂದು ಪತ್ರ ಬರೆದಿದ್ದರು. ಕೊನೆಗೆ ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿ ಖರ್ಗೆ, ಧರಂ‌ಸಿಂಗ್ ಅವ್ ಹೋರಾಟಕ್ಕೆ ಮಾನ್ಯತೆ ನೀಡಿ 371ಜೆ ಜಾರಿ ಮಾಡಿದರು ಎಂದು ವಿವರಿಸಿದರು.

ನಾವು ಬಸವಣ್ಣನವರ ಆಶಯದಂತೆ ನುಡಿದಂತೆ ನಡೆಯುವರು. ನಾವು ಚುನಾವಣೆಯಲ್ಲಿ ಕೊಟ್ಟ ಭರವಸೆಗಳಲ್ಲಿ ಐದು ಗ್ಯಾರಂಟಿಗಳು ಸೇರಿ 200 ಭರವಸೆಗಳು ಈಡೇರಿಸಿದ್ದೇವೆ. ಮುಂದಿನ ಮೂರು ವರ್ಷಗಳಲ್ಲಿ ಉಳಿದ ಎಲ್ಲಾ ಭರವಸೆಗಳನ್ನೂ ಈಡೇರಿಸಿ ಸಮಗ್ರ ಕರ್ನಾಟಕದ ಅಭಿವೃದ್ಧಿ ಸಾಧಿಸಿ ತೋರಿಸುತ್ತೇವೆ ಎಂದರು.

ಜಿಎಸ್ ಟಿ ಸಂಗ್ರಹದಲ್ಲಿ ರಾಜ್ಯ ಎರಡನೇ ಸ್ಥಾನದಲ್ಲಿರುವುದು ಆರ್ಥಿಕವಾಗಿ ರಾಜ್ಯ ಪ್ರಗತಿ ಪಥದಲ್ಲಿರುವುದಕ್ಕೆ ಸಾಕ್ಷಿ . ಕಲ್ಯಾಣ ಕರ್ನಾಟಕದ ಭಾಗದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೂ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ಮಲ್ಲಿಕಾರ್ಜುನ ಖರ್ಗೆ, ದಿವಂಗತ ಧರ್ಮ ಸಿಂಗ್ ಅವರ ಶ್ರಮ‌ ಮತ್ತು ಹೋರಾಟ 371ಜೆ ಜಾರಿ ಹಿಂದೆ ಕೆಲಸ ಮಾಡಿದೆ ಎಂದು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಶ್ಲಾಘಿಸಿದರು.

Tags:
error: Content is protected !!