ಬೆಂಗಳೂರು: ಜೆಡಿಎಸ್ ಕಾರ್ಯಕರ್ತನಿಗೆ ಅಸಹಜ ಲೈಂಗಿಕ ದೌರ್ಜನ್ಯ ನೀಡಿದ ಆರೋಪದಡಿ ಜೆಡಿಎಸ್ ಎಂಎಲ್‌ಸಿ ಡಾ.ಸೂರಜ್ ರೇವಣ್ಣನನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಲಾಗಿದೆ.
ತಮ್ಮ ವಿರುದ್ಧ ದಾಖಲಾಗಿರುವ ಅಸಹಜ ಲೈಂಗಿಕ ದೌರ್ಜನ್ಯ ಆರೋಪದ ಸಂಬಂಧ ವಿವರಣೆ ನೀಡಲು ನಿನ್ನೆ ಸೂರಜ್ ರೇವಣ್ಣ ಹಾಸನದ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ಆಗಮಿಸಿದ್ದರು. ವಿಚಾರಣೆ ನಡೆಸಿದ ಪೊಲೀಸರು ಸೂರಜ್ ರೇವಣ್ಣನನ್ನು ಬಂಧಿಸಿದ್ದರು.
ಇಂದು ಹಾಸನದ ಹಿಮ್ಸ್‌ನಲ್ಲಿ ಮೆಡಿಕಲ್ ಟೆಸ್ಟ್‌ಗೆ ಒಳಪಡಿಸಿದ ನಂತರ ಸೂರಜ್ ರೇವಣ್ಣನನ್ನು ಬೆಂಗಳೂರಿನ ಕೋರಮಂಗಲದಲ್ಲಿರುವ 42ನೇ ಎಸಿಎಂಎಂ ನ್ಯಾಯಾಧೀಶರಾದ ಶಿವಕುಮಾರ್ ಮುಂದೆ ಹಾಜರುಪಡಿಸಲಾಯಿತು. ನ್ಯಾಯಾಧೀಶರು ಸೂರಜ್ ರೇವಣ್ಣನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಪ್ರಕಟಿಸಿದ್ದಾರೆ.
ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಸರ್ಕಾರ ಸಿಐಡಿಗೆ ವಹಿಸಿ ಆದೇಶಿಸಿದೆ. ಪ್ರಕರಣ ಇನ್ನೂ ಅಧಿಕೃತವಾಗಿ ವರ್ಗಾವಣೆ ಆಗಿಲ್ಲ. ಹೀಗಾಗಿ ಇಂದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಇನ್ನು ಲೈಂಗಿಕ ದೌರ್ಜನ್ಯಕ್ಕೆ ಒಳಪಟ್ಟಿದ್ದಾರೆ ಎನ್ನಲಾದ ಸಂತ್ರಸ್ತನಿಗೂ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ.
ಬೆಂಗಳೂರು: ಕೆಪಿಎಸ್‌ಸಿಯಲ್ಲಿ ಹಗರಣಗಳು ಹೆಚ್ಚಿವೆ. ಇದನ್ನು ಕಾನೂನು ಚೌಕಟ್ಟಿನಲ್ಲಿ ಮುಚ್ಚುವ ಬಗ್ಗೆ ತಜ್ಞರ ಜೊತೆ ಚರ್ಚೆ ಮಾಡುತ್ತಿದ್ದೇನೆ ಎಂದು ಸಿಎಂ…
ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದ ಬಳಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಚಿರತೆ ಸೆರೆಯಾಗಿದೆ. ಸುಮಾರು…
ಬೆಂಗಳೂರು: ಸರ್ಕಾರಿ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶಕ್ಕೆ…
ಮದ್ದೂರು: ಮದ್ದೂರಿನಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ನಿವೃತ್ತ ಹಾಸ್ಟೆಲ್…
ಮಂಡ್ಯ: ನಗರದ ಗಾಂಧಿನಗರದಲ್ಲಿ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ಗಾಂಧಿನಗರ ನಿವಾಸಿ 47 ವರ್ಷದ ಪುರುಷೋತ್ತಮ್…
ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ…