ರಾಜ್ಯ

ಸಿಎಂ ಸೇರಿ 140 ಶಾಸಕರೂ ನನ್ನ ಬೆಂಬಲಕ್ಕಿದ್ದಾರೆ : ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು : ಮುಖ್ಯಮಂತ್ರಿ ಸೇರಿ ಕಾಂಗ್ರೆಸ್ ಪಕ್ಷದ 140 ಶಾಸಕರೂ ನನ್ನ ಬೆಂಬಲಕ್ಕೆ ಇದ್ದಾರೆ. ನಮ್ಮ ನಡುವೆ ಏನು ಚರ್ಚೆಯಾಗಿದೆ ಎಂದು ನಮಗೆ ಗೊತ್ತು. ಇದನ್ನು ಸಾರ್ವಜನಿಕವಾಗಿ ಚರ್ಚೆ ಮಾಡುವುದಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.

ಬೆಂಗಳೂರಿನಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು. ನಿಮ್ಮ ಬೆಂಬಲಿಗರು ಹೈಕಮಾಂಡ್ ತೀರ್ಮಾನದ ಬಗ್ಗೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ ಎಂದು ಕೇಳಿದಾಗ, ಯಾರು ಹೇಳಿದರು? 140 ಶಾಸಕರು ಕೂಡ ನನ್ನ ಬೆಂಬಲಿಗರೇ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ನನಗೆ ಬೆಂಬಲವಾಗಿದ್ದಾರೆ. ನಾನು ಹಾಗೂ ಸಿಎಂ ಅವರು ಏನು ಮಾತನಾಡಿದ್ದೇವೆ ಎಂದು ನಿಮಗೆ ಗೊತ್ತಿದೆಯಾ? ರಾಹುಲ್ ಗಾಂಧಿ ಸಮ್ಮುಖದಲ್ಲಿ ನಾವು ಏನು ಮಾತನಾಡಿಕೊಂಡಿದ್ದೇವೆ, ಹೈಕಮಾಂಡ್ ಸಮ್ಮುಖದಲ್ಲಿ ಏನು ಮಾತನಾಡಿದ್ದೇವೆ, ಎಲ್ಲ ಕೂತು ಏನು ತೀರ್ಮಾನ ಮಾಡಿದ್ದೇವೆ ಎಂದು ನಮಗೆ ಗೊತ್ತಿದೆ. ಈ ವಿಚಾರವನ್ನು ನಿಮ್ಮ ಮುಂದೆ ಬಹಿರಂಗವಾಗಿ ಚರ್ಚೆ ಮಾಡಲು ಸಾಧ್ಯವೇ? ಕಾಲವೇ ಎಲ್ಲದಕ್ಕೂ ಉತ್ತರ ನೀಡಲಿದೆ ಎಂದರು.

ಹೊಸದಿಲ್ಲಿ ಭೇಟಿ ಬಗ್ಗೆ ಕೇಳಿದಾಗ, ನಾವು ದಿಲ್ಲಿಗೆ ಹೋಗುವುದೇ ರಾಜಕೀಯ, ಪಕ್ಷ ಹಾಗೂ ಸರ್ಕಾರದ ಕೆಲಸಗಳಿಗೆ. ಮಾಧ್ಯಮಗಳು ರಾಹುಲ್ ಗಾಂಧಿ ಭೇಟಿಯಾಗಿಲ್ಲ ಎಂದು ಬರೆದಿದ್ದೀರಿ. ಒಂದು ದಿನ ನಾವು ಜೊತೆಯಲ್ಲಿ ಕೂತು ಚರ್ಚೆ ಮಾಡಿರುವ ಫೋಟೋ ವರದಿ ಮಾಡಿದ್ದೀರಿ, ಮರುದಿನ ಭೇಟಿಯೇ ಆಗಿಲ್ಲ ಎಂದು ಹೇಳುತ್ತಿದ್ದೀರಿ. ಈ ವಿಚಾರದಲ್ಲಿ ಕಾಲವೇ ಉತ್ತರ ನೀಡಲಿದೆ ಎಂದು ತಿಳಿಸಿದರು.

ಹೈಕಮಾಂಡ್ ಒಳ್ಳೆಯ ಸುದ್ದಿ ನೀಡಲಿದೆ ಎಂದು ನಿಮ್ಮ ಸಹೋದರ ಹೇಳಿದ್ದಾರೆ ಎಂದು ಕೇಳಿದಾಗ, ನನ್ನ ತಮ್ಮ, ನಮ್ಮ ಕಾರ್ಯಕರ್ತರು, ಮಾಧ್ಯಮಗಳು ಕೂಡ ಹೇಳುತ್ತಿವೆ ಎಂದರು.

ಡಿಜಿಪಿ ರಾಮಚಂದ್ರ ಅವರು ಮಹಿಳೆಯರ ಜೊತೆ ಕಚೇರಿಯಲ್ಲಿ ಅಶ್ಲೀಲವಾಗಿ ವರ್ತಿಸಿರುವ ಅನೇಕ ವಿಡಿಯೋ ವೈರಲ್ ಆಗಿವೆ ಎಂದು ಕೇಳಿದಾಗ, ನನಗೆ ಈ ಬಗ್ಗೆ ಮಾಹಿತಿ ಇಲ್ಲ. ಈ ಬಗ್ಗೆ ಗೃಹ ಸಚಿವರು ಹಾಗೂ ಮುಖ್ಯಮಂತ್ರಿಗಳನ್ನು ಕೇಳಿ ಎಂದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಡಿಜಿಪಿ ರಾಸಲೀಲೆ ವಿಡಿಯೋ ಪ್ರಕರಣಕ್ಕೆ ವಿಪಕ್ಷ ತೀವ್ರ ಟೀಕೆ : ಕ್ರಮಕ್ಕೆ ಸಿಎಂ ಸೂಚನೆ

ಬೆಂಗಳೂರು : ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ ವಿಡಿಯೋ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಕರ್ತವ್ಯದ ಸಮಯದಲ್ಲೇ ಬೆಂಗಳೂರಿನಲ್ಲಿರುವ ಡಿಜಿಪಿ…

12 mins ago

ಕೃಷಿಯಷ್ಟೆ ಪಾತ್ರ ವಹಿಸುವ ಮೀನುಗಾರಿಗೆ ಉತ್ತೇಜನ ನೀಡಿ : ಜಿಲ್ಲಾಧಿಕಾರಿ

ಮಂಡ್ಯ : ರೈತರ ಆದಾಯ ಹೆಚ್ಚಿಸುವಲ್ಲಿ ಕೃಷಿಯಷ್ಟೆ ಮಹತ್ವದ ಪಾತ್ರವನ್ನು ಮೀನುಗಾರಿಕೆಯು ವಹಿಸುತ್ತದೆ. ಮೀನು ಸಾಕಾಣಿಕೆ ಕುರಿತು ರೈತರಿಗೆ ತರಬೇತಿ…

2 hours ago

ಕೃಷಿ ಉತ್ಪನ್ನಗಳ ಮೌಲ್ಯವರ್ಧನೆಗೆ ಹೆಚ್ಚಿನ ಒತ್ತು ನೀಡಿ : ಸುರೇಶ್ ಕುಮಾರ್ ಜೈನ್

ಮೈಸೂರು : ರೈತರ ಕೃಷಿ ಉತ್ಪನ್ನಗಳನ್ನು ಕೈಗಾರಿಕೆಗಳ ಸಹಯೋಗದೊಂದಿಗೆ ಮೌಲ್ಯವರ್ಧನೆ ಮಾಡಿ ಮಾರುಕಟ್ಟೆಯಲ್ಲಿ ಮಾರಾಟ ಮಾಡಿದರೆ ಕೃಷಿ ಹಾಗೂ ಕೈಗಾರಿಕೆಗಳು…

2 hours ago

ಕಾಲೇಜಿ ವಿದ್ಯಾರ್ಥಿನಿಯರಿಗೂ ಮಧ್ಯಾಹ್ನದ ಬಿಸಿಯೂಟ : ಶಾಸಕ ಜಿ.ಟಿ.ದೇವೇಗೌಡ ಚಾಲನೆ

ಮೈಸೂರು : ಚಾಮುಂಡೇಶ್ವರಿ ಕ್ಷೇತ್ರದ ವ್ಯಾಪ್ತಿಯ ಬಡಾವಣೆಗಳು,ಹಳ್ಳಿಗಳಿಂದ ಆಗಮಿಸಿ ವ್ಯಾಸಂಗ ಮಾಡುವ ಬಡ ವಿದ್ಯಾರ್ಥಿನಿಯರು ಮಧ್ಯಾಹ್ನದ ಹೊತ್ತು ಹಸಿವಿನಿಂದ ಇರಬಾರದೆಂದು…

2 hours ago

ಕಚೇರಿಯಲ್ಲೇ DGP ರಾಮಚಂದ್ರರಾವ್‌ ರಾಸಲೀಲೆ ; ವಿಡಿಯೋ ವೈರಲ್‌

ಬೆಂಗಳೂರು : ರಾಜ್ಯದ ಗೃಹ ಇಲಾಖೆಯಲ್ಲಿ ಹಿಂದೆಂದೂ ಕಂಡು ಕೇಳರಿಯದ ರಾಸಲೀಲೆ ಪ್ರಕರಣ ಹೊರಬಂದಿದ್ದು, ಕಾನೂನು ರಕ್ಷಣೆ ಮಾಡಬೇಕಾದ ಹಿರಿಯ…

3 hours ago

ಲಕ್ಕುಂಡಿಯಲ್ಲಿ ಮುಂದುವರಿದ ಉತ್ಖನನ : ಪ್ರಾಚ್ಯಾವಶೇಷಗಳು ಪತ್ತೆ

ಲಕ್ಕುಂಡಿ : ಕಳೆದ ಮೂರು ದಿನಗಳಿಂದ ಗದಗ ಜಿಲ್ಲೆಯ ಲಕ್ಕುಂಡಿಯಲ್ಲಿ ನಿರಂತರವಾಗಿ ನಡೆಯುತ್ತಿರುವ ಉತ್ಖನನ ಕಾರ್ಯದಲ್ಲಿ ಈಗಾಗಲೇ ಶಿವಲಿಂಗ ಮತ್ತು…

3 hours ago