ರಾಜ್ಯ

143ನೇ ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿ ಸಭೆ : ₹6,407 ಕೋಟಿ ಬಂಡವಾಳ -128 ಯೋಜನೆಗಳ ಅನುಮೋದನೆ

ಬೆಂಗಳೂರು: ರಾಜ್ಯದಾದ್ಯಂತ ಕೈಗಾರಿಕಾ ಬೆಳವಣಿಗೆ ಉತ್ತೇಜಿಸಲು ಮತ್ತು ಉದ್ಯೋಗ ಸೃಷ್ಟಿಸಲು ಶಿಕ್ಷಣ – ಸಂಶೋಧನಾ ಸಂಸ್ಥೆಗಳ ಸ್ಥಾಪನೆ, ಉಗ್ರಾಣ, ಶೈತ್ಯಾಗಾರಗಳ ನಿರ್ಮಾಣ, ವಾಹನ ಬಿಡಿಭಾಗ, ಪಿವಿಸಿ ಪೈಪ್ ತಯಾರಿಕೆ ಸೇರಿದಂತೆ ಒಟ್ಟು ₹6,407.82 ಕೋಟಿ ಬಂಡವಾಳ ಮೊತ್ತದ ಹೂಡಿಕೆಯ ಪ್ರಸ್ತಾವಗಳಿಗೆ ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿಯು ಅನುಮೋದನೆ ನೀಡಿದೆ.

ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ 143 ನೇ ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿ ಸಭೆಯಲ್ಲಿ ಒಟ್ಟು ₹ 6407.82 ಕೋಟಿ ಬಂಡವಾಳ ಮೊತ್ತದ ಹೂಡಿಕೆಯ 128 ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಇವುಗಳಿಂದ 33,771 ಜನರಿಗೆ ಉದ್ಯೋಗ ಅವಕಾಶಗಳು ದೊರೆಯಲಿವೆ.

ಬೆಂಗಳೂರು ಗ್ರಾಮಾಂತರ, ಬೆಳಗಾವಿ, ರಾಮನಗರ ಮತ್ತು ಮೈಸೂರು ಜಿಲ್ಲೆಗಳಲ್ಲಿ ಬಂಡವಾಳ ಹೂಡಿಕೆಯ ವಿವಿಧ ಯೋಜನೆಗಳಿಗೆ ಒಪ್ಪಿಗೆ ನೀಡಲಾಗಿದೆ. ಈ ಯೋಜನೆಗಳಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ₹ 485 ಕೋಟಿ ಬಂಡವಾಳದ ಯಾಂತ್ರಿಕೃತ ಎರಕಹೊಯ್ಯುವ ಘಟಕ ಸ್ಥಾಪನೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ₹484.33 ಕೋಟಿ ಮೊತ್ತದ ವಿಜ್ಞಾನ , ತಂತ್ರಜ್ಞಾನ ಸಂಶೋಧನೆ ಹಾಗೂ ಕೌಶಲ ಅಭಿವೃದ್ಧಿ ಕೇಂದ್ರ ಸ್ಥಾಪನೆ, ಮೈಸೂರು ಜಿಲ್ಲೆಯಲ್ಲಿ ₹415 ಕೋಟಿ ಮೊತ್ತದ ರಾಷ್ಟ್ರೀಯ ಶಿಕ್ಷಣ ಸಮಿತಿ ಟ್ರಸ್ಟ್ ಶಿಕ್ಷಣ ವಿಶ್ವವಿದ್ಯಾಲಯ ಸ್ಥಾಪನೆ ಮುಂತಾದವು ಸೇರಿವೆ.

₹ 50 ಕೋಟಿಗೂ ಹೆಚ್ಚಿನ ಬಂಡವಾಳ ಹೂಡಿಕೆಯ 22 ಪ್ರಮುಖ ಬೃಹತ್ ಮತ್ತು ಮಧ್ಯಮ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಇವುಗಳಿಂದ ರಾಜ್ಯದಲ್ಲಿ ₹ 4230.64 ಕೋಟಿ ಮೊತ್ತದ ಬಂಡವಾಳ ಹೂಡಿಕೆಯೊಂದಿಗೆ 24,846 ಜನರಿಗೆ ಉದ್ಯೋಗ ಅವಕಾಶಗಳು ದೊರೆಯಲಿವೆ.

₹ 15 ಕೋಟಿಗಳಿಂದ ₹50 ಕೋಟಿ ಮೊತ್ತದ ಒಳಗಿನ ಬಂಡವಾಳ ಹೂಡಿಕೆಯ 104 ಹೊಸ ಯೋಜನೆಗಳಿಗೆ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಇವುಗಳಿಂದ ₹2056.68 ಕೋಟಿ ಮೊತ್ತದ ಬಂಡವಾಳ ಹೂಡಿಕೆಯೊಂದಿಗೆ 8,425 ಜನರಿಗೆ ಉದ್ಯೋಗಗಳು ಲಭ್ಯವಾಗಲಿವೆ.

ಹೆಚ್ಚುವರಿ ಬಂಡವಾಳ ಹೂಡಿಕೆಯ 2 ಯೋಜನೆಗಳಿಗೆ ಸಭೆಯು ಅನುಮೋದಿಸಿದ್ದು ಇದರಿಂದ ₹120.50 ಕೋಟಿ ಬಂಡವಾಳ ಹೂಡಿಕೆ ಆಗಲಿದ್ದು, 500 ಜನರಿಗೆ ಉದ್ಯೋಗ ಅವಕಾಶಗಳು ದೊರೆಯಲಿವೆ.

ಸಭೆಯಲ್ಲಿ ರಾಜ್ಯ ಸರ್ಕಾರದ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಮತ್ತು ಅಭಿವೃದ್ಧಿ ಆಯುಕ್ತರಾದ ಡಾ. ಶಾಲಿನಿ ರಜನೀಶ್, ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ಡಾ. ಎಸ್ ಸೆಲ್ವಕುಮಾರ್, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಆಯುಕ್ತರಾದ ಗುಂಜನ್ ಕೃಷ್ಣ, ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಹಾಗೂ ಕಾರ್ಯನಿರ್ವಾಹಕ ಸದಸ್ಯ ಡಾ. ಎನ್. ಮಹೇಶ್, ಕರ್ನಾಟಕ ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕ ದೊಡ್ಡ ಬಸವರಾಜು ಹಾಗೂ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಹಾಜರಿದ್ದರು.

ಅನುಮೋದನೆ ನೀಡಿರುವ ಪ್ರಮುಖ ಪ್ರಸ್ತಾವನೆಗಳು –  ₹ ಕೋಟಿಗಳಲ್ಲಿ ಉದ್ಯೋಗ ಅವಕಾಶ :
1. ಜಯಡಿ ಟೆಕ್ಮ್ಯಾಕ್ ಪ್ರೈವೇಟ್ ಲಿಮಿಟೆಡ್ ಬೆಳಗಾವಿ ಜಿಲ್ಲೆ 485 1025
2 ಗೋಕುಲ ಎಜುಕೇಷನ್ ಫೌಂಡೇಷನ್ (ವೈದ್ಯಕೀಯ) ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ̇484.33 660
3. ಧರಿವಾಲ್ ಇಂಡಸ್ಟ್ರೀಸ್ ಪ್ರೈವೇಟ್ ಲಿಮಿಟೆಡ್, ಪುಣೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ 465 1500
4. ರಾಷ್ಟ್ರೀಯ ಶಿಕ್ಷಣ ಸಮಿತಿ ಟ್ರಸ್ಟ್, ಬೆಂಗಳೂರು ಮೈಸೂರು ಜಿಲ್ಲೆ, ನಂಜನಗೂಡು ತಾಲ್ಲೂಕು 415 350
5. ಶಿವಾ ಆಂಡ್ ಶಿವಾ ಅರ್ಥೊಪೆಡಿಕ್ ಹಾಸ್ಪಿಟಲ್ ಪ್ರೈವೇಟ್ ಲಿಮಿಟೆಡ್ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ 255 3830
6. ಯುಆರ್ಸಿ ಕನ್ಸ್ಟ್ರಕ್ಷನ್ ಪ್ರೈವೇಟ್ ಲಿಮಿಟೆಡ್ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ 228.73 371
7. ಸೆಂಟ್ರಲ್ ವೇರ್ ಹೌಸಿಂಗ್ ಕಾರ್ಪೊರೇಷನ್ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದಾಬಸ್ಪೇಟೆ 155.50 206
8 ಮೆಟಲ್ ಸ್ಟ್ರೋರೇಸ್ ಸಿಸ್ಟಮ್ಸ್ ಪ್ರೈವೇಟ್ ಲಿಮಿಟೆಡ್ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದಾಬಸ್ಪೇಟೆ 96 530
9. ವೈರ್ಮನ್ ಇಂಡಸ್ಟ್ರೀಸ್ ಪ್ರೈವೇಟ್ ಲಿಮಿಟೆಡ್ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದಾಬಸ್ಪೇಟೆ 95 500

10. ಸ್ಟ್ರೇಪರವ ಇಂಡಿಯಾ ಪ್ರೈವೇಟ್ ಲಿಮಿಟೆಡ್ ರಾಮನಗರ ಜಿಲ್ಲೆ, ಹಾರೋಹಳ್ಳಿ 65 432
11. ಕಲ್ಕತ್ತಾ ಇಸ್ಪತ್, ಬೆಂಗಳೂರು ಬೆಂಗಳೂರು ಗ್ರಾಮಾಂತರ ಜಿಲ್ಲೆ, ದಾಬಸ್ಪೇಟೆ 60.34 100
12. ಔರೇಲಿಯಾ ಪ್ರಾಜಕ್ಟ್ಸ್ ಪ್ರೈವೇಟ್ ಲಿಮಿಟೆಡ್ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದಾಬಸ್ಪೇಟೆ 55 100
13. ಕ್ಲೌಡ್ ವೇವ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದಾಬಸ್ಪೇಟೆ 52 262
14. ಸುದರ್ಶನ ಎಕ್ಸ್ಟ್ರುಷನ್ಸ್ ಪ್ರೈವೇಟ್ ಲಿಮಿಟೆಡ್ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದಾಬಸ್ಪೇಟೆ 50 140

andolanait

Recent Posts

ಓದುಗರ ಪತ್ರ: ಕೆ.ಕೆ.ಮಹಮದ್ ಅವರ ಹೇಳಿಕೆ ಪ್ರಬುದ್ಧ ನಡೆ

ಕೇರಳದ ಕೋಯಿಕ್ಕೋಡಿನಲ್ಲಿ ಸುದ್ದಿಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿರುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್‌ಐ) ಮಾಜಿ ಪ್ರಾದೇಶಿಕ ನಿರ್ದೇಶಕರಾದ ಕೆ.ಕೆ. ಮಹಮ್ಮದ್…

6 mins ago

ಓದುಗರ ಪತ್ರ: ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ನಾಗರಿಕ ಸ್ನೇಹಿ

ಕಂದಾಯ ಇಲಾಖೆ ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ಜಾರಿಗೆ ದಿಟ್ಟ ಹೆಜ್ಜೆ ಇಟ್ಟಿದೆ. ಇದು ನಾಗರಿಕ ಸ್ನೇಹಿಯೂ ಆಗಿದೆ. ಇಂದಿಗೂ ತಾಲ್ಲೂಕು…

9 mins ago

ಓದುಗರ ಪತ್ರ: ದ್ವೇಷ ಭಾಷಣಕ್ಕೆ  ಕಾನೂನು ಕಡಿವಾಣ ಸಾಗತಾರ್ಹ

ರಾಜ್ಯದಲ್ಲಿ ಇನ್ನು ಮುಂದೆ, ಜಾತಿ, ಧರ್ಮ ಭಾಷೆ, ಧಾರ್ಮಿಕ ಮತ್ತು ಜನಾಂಗೀಯ ನಿಂದನೆ, ಲೈಂಗಿಕ ದೃಷ್ಟಿಕೋನ ಮತ್ತು ಜನ್ಮ ಸ್ಥಳದ…

23 mins ago

ಡಾ.ಬಿ.ಆರ್.ಅಂಬೇಡ್ಕರ್ ಎಂಬ ಅಮರ ಜಗತ್ತು…

ಮಲ್ಕುಂಡಿ ಮಹದೇವಸ್ವಾಮಿ ವಿಕಲ್ಪಗಳ ಅಲೆಯ ಮೇಲೆ ಸದಾ ತೇಲಿ ಬರುವ ಸಂಕಲ್ಪ  ಬಾಬಾ ಸಾಹೇಬರ ಪಾರ್ಥಿವ ಶರೀರ ಪ್ರಕೃತಿಯಲ್ಲಿ ಲೀನವಾಗುವ…

29 mins ago

ರೈಲ್ವೆ ಮೇಲ್ಸೇತುವೆ; ಭೂ ದರ ಕಗ್ಗಂಟು ಬಗೆಹರಿಯುವುದೇ?

ಚಾಮರಾಜನಗರ: ಚಾ.ನಗರ-ನಂಜನಗೂಡು ಹೆದ್ದಾರಿಯಲ್ಲಿರುವ ಪಣ್ಯದಹುಂಡಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸ್ವಾಧಿನಪಡಿಸಿಕೊಂಡಿರುವ ಭೂಮಿಯ ದರ ನಿಗದಿ ಕಗ್ಗಂಟಿನ ವಿಚಾರ ಅಂತಿಮ…

3 hours ago

ಜನವರಿಗೆ ಚಾ.ಬೆಟ್ಟದ ಅಭಿವೃದ್ಧಿ ಕಾಮಗಾರಿ ಶುರು

ಮೈಸೂರು: ಪ್ರಸಿದ್ಧ ಯಾತ್ರಾ ಸ್ಥಳ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಕಾಮಗಾರಿಯು ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಡಿ ಜನವರಿ ಮೊದಲ…

3 hours ago