ಬೆಂಗಳೂರು: ಚಿತ್ರದುರ್ಗಾದ ರೇಣುಕಾಸ್ವಾಮಿ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಬಂಧನವಾಗಿದ್ದು, ದರ್ಶನ್ ಸೇರಿದಂತೆ 13 ಜನ ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿರುವ ಅನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆ ಸುತ್ತಾ ನಿಷೇಧಾಜ್ಞೆ ಹೊರಡಿಸಲಾಗಿದೆ.
ಈ ಸಂಬಂಧ ಆದೇಶ ಹೊರಡಿಸಿರುವ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ. ದಯಾನಂದ ಅನ್ನಪೂರ್ಣೇಶ್ವರಿ ಠಾಣೆ ಸುತ್ತಾ ಸಾರ್ವಜನಿಕರು ಗುಂಪು-ಗುಂಪಾಗಿ ಓಡಾಡುತ್ತಿದ್ದಾರೆ. ಇದರಿಂದಾಗಿ ಠಾಣೆಗೆ ಬರುವ ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿದೆ. ಆದ್ದರಿಂದ ಠಾಣಾ ಸುತ್ತಮುತ್ತಾ 200 ವ್ಯಾಪ್ತಿಯಲ್ಲಿ ಜೂನ್. 13ರಿಂದ ಜೂನ್. 17 ವರೆಗೆ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಹೊರಡಿಸಲಾಗಿದೆ ಎಂದು ತಿಳಿಸಿದ್ದಾರೆ.
ಇನ್ನು ಅತಿ ಹೆಚ್ಚು ಜನಸಂದಣಿ ಹಾಗೂ ಠಾಣಾ ವ್ಯಾಪ್ತಿಯಲ್ಲಿ ಹೆಚ್ಚಿನ ಬಿಗಿಭದ್ರತೆ ದೃಷ್ಠಿಯಿಂದ ಠಾಣಾ ಸುತ್ತಲೂ ಪೆಂಡಾಲ್ ಬಳಸಿ ಮುಚ್ಚಲಾಗಿದೆ.