ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ವರ್ಚಸ್ಸಿನ ಮೂಲಕ ಮತದಾರರನ್ನು ಸೆಳೆಯುವ ಪ್ರಯತ್ನಕ್ಕೆ ಮುಂದಾಗಿರುವ ಬಿಜೆಪಿಯು ನಾನು ಮೋದಿ ಪರಿವಾರ, ಮೋದಿಗಾಗಿ ಮೀಸಲು ಈ ಭಾನುವಾರ ಎಂಬ ಹೊಸ ಪ್ರಚಾರ ಅಭಿಯಾನಕ್ಕೆ ವೇದಿಕೆ ಸಜ್ಜಾಗಿದೆ.
ಈ ಕುರಿತು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕ ವಿ.ಸುನೀಲ್ ಕುಮಾರ್, ಬಿಜೆಪಿ ಕಾರ್ಯಕರ್ತರು, ಮುಖಂಡರು ಹಾಗೂ ಸ್ಟಾರ್ ಪ್ರಚಾರಕರನ್ನು ಹೊರತುಪಡಿಸಿ ಕೇವಲ ಮೋದಿ ಅಭಿಮಾನಿಗಳನ್ನಷ್ಟೇ ಬಳಸಿಕೊಂಡು ಅಭಿಯಾನ ಆಯೋಜಿಸಲಾಗುತ್ತಿದೆ. ಮೊದಲ ಹಂತದಲ್ಲಿ ಮತದಾನ ನಡೆಯುವ 14 ಕ್ಷೇತ್ರಗಳ ವ್ಯಾಪ್ತಿಯಲ್ಲಿ ಇದೇ 21 ಹಾಗೂ ಎರಡನೇ ಸುತ್ತಿನಲ್ಲಿ ಮತದಾನ ನಡೆಯುವ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಇದೇ 28ರಂದು ಅಭಿಯಾನ ನಡೆಯಲಿದೆ ಎಂದು ಹೇಳಿದರು.
ಏ.21ರ ಅಭಿಯಾನದಲ್ಲಿ ಬೆಂಗಳೂರು ಸೇರಿದಂತೆ ನಗರ ಪ್ರದೇಶ ವ್ಯಾಪ್ತಿಯ ಅಪಾರ್ಟ್‌ಮೆಂಟ್ ನಿವಾಸಿಗಳು, ನಿವೃತ್ತ ಅಧಿಕಾರಿಗಳು, ಚಿತ್ರನಟರು, ಕಲಾವಿದರು, ಐಟಿ ಸೇರಿದಂತೆ ನಾನಾ ವೃತ್ತಿಯವರು ಮೋದಿ ಪರಿವಾರದ ಭಾಗವಾಗಲು ಆಸಕ್ತಿ ತೋರಿದ್ದು, ಆನ್‌ಲೈನ್‌ನಲ್ಲಿ ನೋಂದಾಯಿಸಿಕೊಂಡಿದ್ದಾರೆ. ಅಭಿಮಾನಿಗಳು ವಾರಾಂತ್ಯದ ಒಂದು ದಿನವನ್ನು ಮೋದಿಯವರನ್ನು ಮೂರನೇ ಬಾರಿಗೆ ಪ್ರಧಾನಿಯಾಗಿಸುವ ಪ್ರಯತ್ನಕ್ಕೆ ತಮ್ಮ ಸಮಯ ವಿನಿಯೋಗಿಸುತ್ತಾರೆ ಎಂದು ತಿಳಿಸಿದರು.
ಮೈಸೂರಿನಲ್ಲಿ ಏಪ್ರಿಲ್ 14 ರಂದು ಮೈಸೂರಿನಲ್ಲಿ ಮೋದಿ ರ್ಯಾಲಿ ನಡೆಸಲಿದ್ದಾರೆ. ಮೈಸೂರಿನಲ್ಲಿ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ವೇದಿಕೆ ಹಂಚಿಕೊಳ್ಳುವ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸುವ ಸಾಧ್ಯತೆಯಿದೆ.
ದೇವೇಗೌಡರ ಉಪಸ್ಥಿತಿಯಿಂದ ಹಳೇ ಮೈಸೂರು ಭಾಗದಲ್ಲಿ ತಮ್ಮ ಪಕ್ಷಕ್ಕೆ ಬಲ ಬರಲಿದೆ, ಪಕ್ಷದ ಗೆಲುವಿಗೆ ಸಹಕಾರಿಯಾಗಲಿದೆ ಎಂದಿವೆ ಮೂಲಗಳು.
ಮಂಗಳೂರಿನ ನಾರಾಯಣ ಗುರು ವೃತ್ತದಿಂದ ಹಂಪನಕಟ್ಟೆ ವರೆಗೆ ಸುಮಾರು 2 ಕಿ.ಮೀ ವರೆಗೆ ಪ್ರಧಾನಿ ರೋಡ್ ಶೋ ನಡೆಸಲಿದ್ದಾರೆ ಎಂದು ದಕ್ಷಿಣ ಕನ್ನಡ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಹೇಳಿದರು. ಇದು ಬಲ್ಲಾಳ್‌ಬಾಗ್, ಪಿವಿಎಸ್ ಜಂಕ್ಷನ್ ಮತ್ತು ನವಭಾರತ ವೃತ್ತದ ಮೂಲಕ ಹಾದುಹೋಗುತ್ತದೆ. ರೋಡ್ ಶೋ ದೊಡ್ಡ ಮಟ್ಟದಲ್ಲಿ ಯಶಸ್ವಿಯಾಗಲು ಪಕ್ಷವು ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಲಿದೆ ಎಂದು ಹೇಳಿದರು. ಮಂಗಳೂರು ನಗರ ದಕ್ಷಿಣ, ಮಂಗಳೂರು ನಗರ ಉತ್ತರ, ಮಂಗಳೂರು, ಮೂಡುಬಿದಿರೆಯಿಂದ ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಅವರು ತಿಳಿಸಿದರು.
ನವದೆಹಲಿ: ಮದರ್ ಆಫ್ ಆಲ್ ಡೀಲ್ಸ್ ಎಂದೇ ಕರೆಯಲ್ಪಡುವ ಭಾರತ-ಯುರೋಪ್ ಒಕ್ಕೂಟವು ಮುಕಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು ಅಧಿಕೃತವಾಗಿ ಸಹಿ…
ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್‌ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ…
ಪಿರಿಯಾಪಟ್ಟಣ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ಪಿರಿಯಾಪಟ್ಟಣ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ…
ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…
ಮಂಡ್ಯ: ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಸಮಾಜದ ಮುಖ್ಯ ವಾಹಿನಿಗೆ ಬರಬೇಕು. ಸಮುದಾಯಗಳು ಮುಖ್ಯ ವಾಹಿನಿಗೆ ಬರಲು ಶಿಕ್ಷಣದಿಂದ ಮಾತ್ರ ಸಾಧ್ಯ…