ರಾಜ್ಯದಲ್ಲಿ ಕೊನೆಯ 24 ಗಂಟೆಗಳಲ್ಲಿ ಒಟ್ಟು 158 ಹೊಸ ಕೊವಿಡ್ ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಹಂಚಿಕೊಂಡಿದೆ. 69 ಜನ ಡಿಸ್‌ಚಾರ್ಜ್ ಆಗಿದ್ದು, ಸದ್ಯ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 568 ಇದೆ. ಕೊನೆಯ 24 ಗಂಟೆಗಳಲ್ಲಿ 8350 ಟೆಸ್ಟ್‌ಗಳು ನಡೆದಿವೆ, 6346 ಆರ್‌ಟಿಪಿಸಿಆರ್ ಟೆಸ್ಟ್‌ಗಳು ನಡೆದಿವೆ ಹಾಗೂ 2004 ರ್ಯಾಟ್ ಟೆಸ್ಟ್‌ಗಳು ನಡೆದಿವೆ. ರಾಜ್ಯದಲ್ಲಿ ಪಾಸಿಟಿವಿಟಿ ದರ 1.89% ಇದೆ. ಕಳೆದ 24 ಗಂಟೆಗಳಲ್ಲಿ ಯಾವುದೇ ಸಾವು ಸಂಭವಿಸಿಲ್ಲ.
ಒಟ್ಟು 568 ಸಕ್ರಿಯ ಪ್ರಕರಣಗಳ ಪೈಕಿ 514 ಸೋಂಕಿತರನ್ನು ಹೋಮ್ ಐಸೋಲೇಷನ್ ಮಾಡಲಾಗಿದ್ದು, 54 ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರ ಪೈಕಿ 14 ಸೋಂಕಿತರು ಐಸಿಯುನಲ್ಲಿದ್ದು, 40 ಸೋಂಕಿತರು ಸಾಮಾನ್ಯ ವಾರ್ಡ್‌ನಲ್ಲಿದ್ದಾರೆ.
ಕಳೆದ 24 ಗಂಟೆಗಳಲ್ಲಿ ಮೈಸೂರಿನಲ್ಲಿ 12, ಮಂಡ್ಯದಲ್ಲಿ 5 ಹಾಗೂ ಚಾಮರಾಜನಗರದಲ್ಲಿ 7 ಪ್ರಕರಣಗಳು ಪತ್ತೆಯಾಗಿವೆ. ಮೈಸೂರಿನಲ್ಲಿ ಒಟ್ಟು 35, ಮಂಡ್ಯದಲ್ಲಿ 16 ಹಾಗೂ ಚಾಮರಾಜನಗರದಲ್ಲಿ 7 ಸಕ್ರಿಯ ಪ್ರಕರಣಗಳಿವೆ.
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು…
ಮೈಸೂರು : ಜಿಲ್ಲೆಯ ಕೆ.ಆರ್.ನಗರದ ಅರ್ಕೇಶ್ವರ ದೇಗುಲದ ಬಳಿ ಕಾವೇರಿ ನದಿಯಲ್ಲಿ ಈಜಲು ತೆರಳಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ…
ರಾಣೇಬೆನ್ನೂರ : ಮಾನವ ಸಮಾಜ ನಿರ್ಮಾಣದಲ್ಲಿ ಎಲ್ಲರೂ ಪಾಲುದಾರರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅವರು ಇಂದು ರಾಣಿಬೆನ್ನೂರಿನ ನಿಟ್ಟೂರು…
ಕೊಲ್ಕತ್ತಾ : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ 28ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡವು ರಾಜಸ್ಥಾನ…
ವಿರುಧುನಗರ್ : ತಮಿಳುನಾಡಿನ ವಿರುಧುನಗರ್ ಜಿಲ್ಲೆಯ ಕಟ್ಟನಾರ್ ಪಟ್ಟಿ ಹಳ್ಳಿಯ ಸಮೀಪ ವನಜ್ ಪಟಾಕಿ ತಯಾರಿಕಾ ಘಟಕದಲ್ಲಿ ಭಾನುವಾರ ಮಧ್ಯಾಹ್ನ…
ಕೆ.ಆರ್.ನಗರ : ತಾಲೂಕಿನ ಅರ್ಕೇಶ್ವರ ಸ್ವಾಮಿ ದೇವಸ್ಥಾನದ ಬಳಿ ನಡೆದ ಹಜರತ್ ಖಾದರ್ ಲಿಂಗವಲ್ಲಿ ಉರುಸ್ ಕಾರ್ಯಕ್ರಮಕ್ಕೆ ಬಂದಿದ್ದವರು ಕಾವೇರಿ…