ರಾಜ್ಯ

15ನೇ ಹಣಕಾಸು ಆಯೋಗ : ರಾಜ್ಯಕ್ಕೆ 80 ಸಾವಿರ ಕೋಟಿಗಳ ನಷ್ಟ : ಸಿಎಂ

ರಾಯಚೂರು : 14ನೇ ಹಣಕಾಸಿನ ಆಯೋಗದಿಂದ 15ನೇ ಹಣಕಾಸಿನ ಆಯೋಗಕ್ಕೆ ಹೋಲಿಸಿದರೆ, ರಾಜ್ಯಕ್ಕೆ ಅನುದಾನ ನೀಡಿಕೆಯಲ್ಲಿ ಸುಮಾರು 80 ಸಾವಿರ ಕೋಟಿಗಳ ನಷ್ಟವಾಗಿದೆ. ಈ ಬಗ್ಗೆ ಯಾವುದೇ ಬಿಜೆಪಿ ಸಂಸದರೂ ಧ್ವನಿ ಎತ್ತುತ್ತಿಲ್ಲ ಎಂದು ರಾಯಚೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಯವರು ಪ್ರದಾನಿ ಮೋದಿಯವರೊಂದಿಗೆ ನಿಕಟಸಂಪರ್ಕ ಹೊಂದಿರುವ ಪ್ರಭಾವಿ ಸಚಿವ ಎಂದು ಹೇಳಲಾಗುತ್ತದೆ. 11495 ಕೋಟಿ ರೂ.ಗಳನ್ನು ಹಣಕಾಸಿನ ಆಯೋಗದಲ್ಲಿ ವಿಶೇಷ ಅನುದಾನ ನೀಡಲು ಸಮ್ಮತಿ ನೀಡಲಾಗಿದ್ದರೂ, ಕೇಂದ್ರ ಸರ್ಕಾರ ಈ ಅನುದಾನವನ್ನು ರಾಜ್ಯಕ್ಕೆ ಬಿಡುಗಡೆ ಮಾಡಲು ಅವರು ಯಾವುದೇ ಸಹಾಯವನ್ನು ಮಾಡಿಲ್ಲ. ಕರ್ನಾಟಕದ ಬಗ್ಗೆ ಮಾತನಾಡಲು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಯವರಿಗೆ ಯಾವುದೇ ನೈತಿಕತೆ ಇಲ್ಲ. ರಾಜ್ಯಕ್ಕೆ 11495 ಕೋಟಿ ರೂ. ಇನ್ನೂ ಬಿಡುಗಡೆಯಾಗಿಲ್ಲ ಎಂದರು.

ಕಲ್ಯಾಣ ಕರ್ನಾಟಕಕ್ಕೆ ಕೇಂದ್ರದ ವಿಶೇಷ ಅನುದಾನ ಬಿಡುಗಡೆಗೆ ಒತ್ತಾಯ: ದೆಹಲಿ ಪ್ರವಾಸದ ವಿವರಗಳನ್ನು ಪತ್ರಕರ್ತರಿಗೆ ತಿಳಿಸುತ್ತಾ, ರಾಷ್ಟ್ರಪತಿಗಳ ಅಂಗಳಕ್ಕೆ ಹೋಗಿರುವ ಹಲವು ವಿಧೇಯಕಗಳ ಬಗ್ಗೆ ವಿವರಣೆ ನೀಡಲು ರಾಷ್ಟ್ರಪತಿಗಳನ್ನು ಭೇಟಿಯಾಗುವ ಸಮಯ ಕೋರಲಾಗಿದೆ. 16 ನೇ ಹಣಕಾಸಿನ ಆಯೋಗಕ್ಕೆ ಕರ್ನಾಟಕಕ್ಕೆ ಹೆಚ್ಚಿನ ಅನುದಾನ ನೀಡುವಂತೆ ಮನವಿ ಮಾಡಲಾಗಿತ್ತು. ಈ ಬಗ್ಗೆ ಚರ್ಚಿಸಲು ಪ್ರಧಾನಿಯವರನ್ನು, ಹಣಕಾಸಿನ ಸಚಿವರನ್ನು ಭೇಟಿ ಮಾಡುವ ಸಾಧ್ಯತೆಯಿದೆ. ಕಲ್ಯಾಣ ಕರ್ನಾಟಕ ಭಾಗಕ್ಕೆ ರಾಜ್ಯಸರ್ಕಾರ 5 ಸಾವಿರ ಕೋಟಿಗಳ ವಿಶೇಷ ಅನುದಾನವನ್ನು ಪ್ರತಿವರ್ಷ ನೀಡುತ್ತಿದ್ದು, ಇದೇ ರೀತಿ, ಈ ಭಾಗದ ಅಭಿವೃದ್ಧಿಗೆ ಕೇಂದ್ರ ಸರ್ಕಾರವು ಅನುದಾನ ನೀಡಬೇಕೆಂದು ಒತ್ತಾಯಿಸಲಾಗಿದೆ. ಈ ಭಾಗಕ್ಕೆ ಪ್ರತ್ಯೇಕ ಸಚಿವಾಲಯ ಮಾಡುವ ವಿಚಾರವನ್ನು ಪರಿಶೀಲಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಶಿಕ್ಷಕರ ನೇಮಕಾತಿಗೆ ಆದೇಶ: ಕಲ್ಯಾಣ ಕರ್ನಾಟಕ ಭಾಗದಲ್ಲಿ ಎಸ್‌ಎಸ್‌ಎಲ್‌ಸಿ  ಫಲಿತಾಂಶ ಕುಸಿಯಲು ಶಿಕ್ಷಕರ ಕೊರತೆ ಕಾರಣವಾಗಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಹೊಸ ಶಿಕ್ಷಕರ ನೇಮಕಾತಿಗೆ ಈಗಾಗಲೇ ಆದೇಶ ನೀಡಲಾಗಿದೆ. ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಉತ್ತಮ ಫಲಿತಾಂಶ ಹೊರಬರಲು ಸರ್ಕಾರ ಎಲ್ಲ ಪ್ರಯತ್ನಗಳನ್ನು ಕೈಗೊಳ್ಳಲಿದೆ ಎಂದರು.

ಸಚಿವ ಎಚ್.ಕೆ.ಪಾಟೀಲ್ ಪತ್ರ : ಅಕ್ರಮ ಗಣಿಗಾರಿಕೆ ತನಿಖೆಗೆ ವಿಶೇಷ ಕೋರ್ಟ್ ರಚನೆಗೆ ಮನವಿ: ರಾಜ್ಯದಲ್ಲಿ ನಡೆದ ಅಕ್ರಮ ಗಣಿಗಾರಿಕೆಯ ಬಗ್ಗೆ ಸಚಿವ ಎಚ್.ಕೆ.ಪಾಟೀಲ್ ಮುಖ್ಯಮಂತ್ರಿಗಳಿಗೆ ಬರೆದ ಪತ್ರದ ಬಗ್ಗೆ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿ, ಅಕ್ರಮ ಗಣಿಗಾರಿಕೆ ಪ್ರಕರಣಗಳು ಹಿಂದಿನ ಅವಧಿಯಲ್ಲಿ ನಡೆದಿದ್ದು, ಈ ಬಗ್ಗೆ ತ್ವರಿತ ತನಿಖೆ ನಡೆಸಲು ವಿಶೇಷ ಕೋರ್ಟ್ ರಚಿಸಿ, ಗಣಿಗಾರಿಕೆಯಲ್ಲಿರುವ ಬಾಕಿಯ ವಸೂಲಾತಿಗೆ ಶೀಘ್ರ ಕ್ರಮಗಳನ್ನು ತೆಗೆದುಕೊಳ್ಳಲು ಪತ್ರದಲ್ಲಿ ತಿಳಿಸಿದ್ದಾರೆ. ಸಚಿವ ಸಂಪುಟದಲ್ಲಿ ಸದರಿ ವಿಷಯವನ್ನು ಚರ್ಚಿಸಿ ವಿಶೇಷ ನ್ಯಾಯಾಲಯ ರಚಿಸಬೇಕೆಂಬ ಉದ್ದೇಶದಿಂದ ಸಚಿವರು ಪತ್ರ ಬರೆದಿದ್ದಾರೆ. ಅಂದಿನ ಲೋಕಾಯುಕ್ತ ಸಂತೋಷ್ ಹೆಗಡೆಯವರು ಅಕ್ರಮ ಗಣಿಗಾರಿಕೆ ಬಗ್ಗೆ ವರದಿಯನ್ನೂ ನೀಡಿದ್ದರು. ಈ ವರದಿಯ ಬಗ್ಗೆ ವಿಧಾನಸಭೆಯಲ್ಲಿ ನಾನು ಕೇಳಿದ ಪ್ರಶ್ನೆಗೆ ಸರ್ಕಾರದಿಂದ ಸಮರ್ಪಕ ಉತ್ತರ ಬಂದಿರಲಿಲ್ಲ. ಆಗ ಅಕ್ರಮ ಗಣಿಗಾರಿಕೆ ವಿರುದ್ಧ ಬಳ್ಳಾರಿಯಲ್ಲಿ ಪಾದಯಾತ್ರೆ ನಡೆಸಲಾಗಿತ್ತು ಎಂದರು.

ಶಾಸಕ ಬಿ.ಆರ್.ಪಾಟೀಲ್‌ಗೆ ಸಿಎಂ ಬುಲಾವ್‌ ಸುದ್ದಿ ಓದಿದ್ರಾ..?

ಕಾಂಗ್ರೆಸ್ ಶಾಸಕ ರಾಜು ಕಾಗೇ ಯವರು ತಮ್ಮ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳು ಪ್ರಾರಂಭವಾಗದಿರುವ ಬಗ್ಗೆ ಅಸಮಧಾನ ವ್ಯಕ್ತಪಡಿಸಿ ರಾಜೀನಾಮೆ ನೀಡುವ ಇಂಗಿತ ವ್ಯಕ್ತಪಡಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ಬಗ್ಗೆ ಅವರೊಂದಿಗೆ ಚರ್ಚಿಸಲಾಗುವುದು. ವಿಶೇಷ ಅನುದಾನವನ್ನು ಅಗತ್ಯವಿರುವ ವಿಧಾನಸಭಾ ಕ್ಷೇತ್ರಗಳಿಗೆ ನೀಡಲಾಗುತ್ತದೆ ಎಂದರು.

ಶಾಸಕ ಬೇಳೂರು ಗೋಪಾಲಕೃಷ್ಣ ಅವರು, ವಸತಿ ಸಚಿವರು ರಾಜಿನಾಮೆ ನೀಡಬೇಕು ಎಂದು ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ಬಗ್ಗೆ ಮಾಹಿತಿ ಪಡೆಯುತ್ತೇನೆ. ವಸತಿ ಇಲಾಖೆಯ ವಿಷಯದ ಕುರಿತು ಚರ್ಚಿಸಲು ಶಾಸಕ ಬಿ.ಆರ್.ಪಾಟೀಲ್ ರವರು ಇದೇ 25 ರಂದು ಭೇಟಿಯಾಗುವುದಾಗಿ ತಿಳಿಸಿದ್ದಾರೆ ಎಂದರು.

ಆಂದೋಲನದ ಅಂಕಣಗಳನ್ನು ಪತ್ರಿಕೆಯಲ್ಲಿ ಓದಲು ಮಿಸ್‌ ಮಾಡಿಕೊಂಡಿದ್ದರೆ ಇಲ್ಲಿ ಓದಿ.. 

ಆಂದೋಲನ ಡೆಸ್ಕ್

Recent Posts

ಕನ್ನಡಿಗರ ರಕ್ಷಣೆಗೆ ಕ್ರಮ ಕೈಗೊಳ್ಳಿ: ಪ್ರಧಾನಿ ಮೋದಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಇರಾನ್‌-ಇಸ್ರೇಲ್‌ ನಡುವಿನ ಸಂಘರ್ಷ ಏರ್ಪಟ್ಟಿರುವ ಪರಿಣಾಮ ಕನ್ನಡಿಗರ ರಕ್ಷಣೆಗೆ ತುರ್ತು ಕ್ರಮ ಕೈಗೊಳ್ಳಿ ಎಂದು ಪ್ರಧಾನಿ ನರೇಂದ್ರ ಮೋದಿ…

2 hours ago

ಕಾನೂನು ವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರ್ಕಾರ ವಿಫಲ: ಸಂಸದ ಯದುವೀರ್‌ ಒಡೆಯರ್‌

ನಾಪೋಕ್ಲು: ಕಾನೂನು ವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ವಾಗ್ದಾಳಿ…

3 hours ago

ಹನೂರು: ಶಾಲೆಗೆ ನೂತನ ಕಟ್ಟಡ ನಿರ್ಮಿಸುವಂತೆ ಆಗ್ರಹ: ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ ಶಿಕ್ಷಕ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೊಳಸಿಕೆರೆ ಗ್ರಾಮದ…

3 hours ago

ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ: ವಿಪಕ್ಷ ನಾಯಕ ಆರ್.‌ಅಶೋಕ್‌

ಬೆಂಗಳೂರು: ಈ ಬಾರಿಯ ಬಜೆಟ್‌ ಅಧಿವೇಶನದಲ್ಲಿ ಸರ್ಕಾರದ ಲೋಪದೋಷಗಳನ್ನು ಚರ್ಚಿಸಲಾಗುವುದು. ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ ಮಾಡಲಾಗುವುದು ಎಂದು…

3 hours ago

ನಾಳೆ ರಕ್ತ ಚಂದ್ರಗ್ರಹಣ: ಕೊಡಗಿನ ವಿವಿಧ ದೇವಾಲಯಗಳಲ್ಲಿ ಪೂಜಾ ಸಮಯ ಬದಲು

ಕೊಡಗು: ನಾಳೆ ವರ್ಷದ ಮೊದಲ ಚಂದ್ರಗ್ರಹಣ ಹೋಳಿ ಹುಣ್ಣಿಮೆಯ ದಿನದಂದು ಸಂಭವಿಸುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಹಲವು ದೇವಾಲಯಗಳ ಪೂಜಾ…

3 hours ago

ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ಎಚ್.ಡಿ.ಕುಮಾರಸ್ವಾಮಿ: ಕಾರಣ ಇಷ್ಟೇ.!

ಮಂಡ್ಯ: ಜಿಲ್ಲೆಯ ಮದ್ದೂರು ತಾಲ್ಲೂಕಿನ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ, ಸೋಮನಹಳ್ಳಿ ಸೇರಿದಂತೆ ವಿವಿಧ ಪ್ರದೇಶಗಳನ್ನು ಸ್ಥಳೀಯರ ಆಶಯಗಳಿಗೆ ವಿರುದ್ಧವಾಗಿ ಮದ್ದೂರು…

4 hours ago