ರಾಜ್ಯದಲ್ಲಿ ಕೊನೆಯ 24 ಗಂಟೆಗಳಲ್ಲಿ ಒಟ್ಟು 173 ಹೊಸ ಕೊವಿಡ್ ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಹಂಚಿಕೊಂಡಿದೆ. 37 ಜನ ಡಿಸ್‌ಚಾರ್ಜ್ ಆಗಿದ್ದು, ಸದ್ಯ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 702 ಇದೆ. ಕೊನೆಯ 24 ಗಂಟೆಗಳಲ್ಲಿ 8349 ಟೆಸ್ಟ್‌ಗಳು ನಡೆದಿವೆ, 6400 ಆರ್‌ಟಿಪಿಸಿಆರ್ ಟೆಸ್ಟ್‌ಗಳು ನಡೆದಿವೆ ಹಾಗೂ 1949 ರ್ಯಾಟ್ ಟೆಸ್ಟ್‌ಗಳು ನಡೆದಿವೆ. ರಾಜ್ಯದಲ್ಲಿ ಪಾಸಿಟಿವಿಟಿ ದರ 2.07% ಇದೆ. ಕಳೆದ 24 ಗಂಟೆಗಳಲ್ಲಿ ಬೆಂಗಳೂರು ಮೂಲದ ಇಬ್ಬರು ಸೋಂಕಿತರು ಸಾವನ್ನಪ್ಪಿದ್ದಾರೆ.
ಒಟ್ಟು 702 ಸಕ್ರಿಯ ಪ್ರಕರಣಗಳ ಪೈಕಿ 649 ಸೋಂಕಿತರನ್ನು ಹೋಮ್ ಐಸೋಲೇಷನ್ ಮಾಡಲಾಗಿದ್ದು, 53 ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರ ಪೈಕಿ 12 ಸೋಂಕಿತರು ಐಸಿಯುನಲ್ಲಿದ್ದು, 41 ಸೋಂಕಿತರು ಸಾಮಾನ್ಯ ವಾರ್ಡ್‌ನಲ್ಲಿದ್ದಾರೆ.
ಕಳೆದ 24 ಗಂಟೆಗಳಲ್ಲಿ ಮೈಸೂರಿನಲ್ಲಿ 16, ಮಂಡ್ಯದಲ್ಲಿ 6, ಚಾಮರಾಜನಗರದಲ್ಲಿ 4 ಹಾಗೂ ಕೊಡಗಿನಲ್ಲಿ 1 ಪ್ರಕರಣಗಳು ಪತ್ತೆಯಾಗಿವೆ. ಮೈಸೂರಿನಲ್ಲಿ ಒಟ್ಟು 46, ಮಂಡ್ಯದಲ್ಲಿ 21, ಕೊಡಗಿನಲ್ಲಿ 2 ಹಾಗೂ ಚಾಮರಾಜನಗರದಲ್ಲಿ 12 ಸಕ್ರಿಯ ಪ್ರಕರಣಗಳಿವೆ.
ನವೀನ್ ಡಿಸೋಜ ಜಿಲ್ಲೆಯಲ್ಲಿ ಸು.೧೭೪,೧೧೪ ಕುಟುಂಬಗಳು, ಗಣತಿ ಕಾರ್ಯಕ್ಕೆ ಗುರುತು, ೭,೩೭೯ ಕುಟುಂಬಗಳಿಂದ ಸ್ವಯಂ ಗಣತಿ ಮಡಿಕೇರಿ: ನಮ್ಮ ಗಣತಿ,…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆಯಲ್ಲಿ ೩೫ರಿಂದ ೪೦ ಡಿಗ್ರಿ ಉಷ್ಣಾಂಶ, ಬಿಸಿಗಾಳಿಗೆ ಹೈರಾಣಾದ ಜನರು ಗುಂಡ್ಲುಪೇಟೆ: ಬೇಸಿಗೆಯ ಬಿಸಿಲಿನ ತಾಪ ದಿನೇದಿನೇ…
ಮಧುಕರ ಮಳವಳ್ಳಿ (ಈ ಲೇಖನಕ್ಕೆ ಕೃತಕ ಬುದ್ಧಿಮತ್ತೆಯ ಚಿತ್ರ ಬಳಸಲಾಗಿದೆ) ಹಬ್ಬಕ್ಕೆ ಯಾರಿಗೆ ತಾನೆ ಹೊಸ ಬಟ್ಟೆ ಇಷ್ಟ ಇಲ್ಲ…
ಭಾರತಿ ಬಿ.ವಿ. ಅವನೆದುರು ಮಾನ ತೆಗೆದ ಸೈಕಲ್ಲಿನ ಸಹವಾಸ ನನಗೆ ಮತ್ತೆ ಬೇಕೆನ್ನಿಸಲಿಲ್ಲ ನಾವೆಲ್ಲ ‘ನಟರಾಜ ಸರ್ವೀಸ್’ನಲ್ಲೇ ಬದುಕು ಕಳೆದವರು.…
ಶುಭಾ ಖಟಾವಕರ ಮ್ಹೆತ್ರಸ್ ನೇಪಾಳದ ಕನಸುಗಣ್ಣಿನ ಯುವಜನಾಂಗದ ಈ ಹೊಸ ಸರ್ಕಾರ ಈಗ ಇಟ್ಟಿರುವ ಹೆಜ್ಜೆಗಳು ಯಶಸ್ವಿಯಾದರೆ ದಕ್ಷಿಣ ಏಷ್ಯಾದಲ್ಲಿ…
ಪಂಪ ಪ್ರಶಸ್ತಿ ಪಡೆಯುತ್ತಿರುವ ಮಹಾದೇವರಿಗೆ ಎಲ್ಲಾ ಮನೆಗಳ ಜೋತಮ್ಮದೀರು ಹರಸಲಿ ರಾಜೇಂದ್ರ ಚೆನ್ನಿ ೧ ತಮ್ಮ ಒಟ್ಟು ಬರಹಗಳು ಇಷ್ಟು ಕಡಿಮೆ…