ರಾಜ್ಯ

ಕರ್ನಾಟಕದಲ್ಲಿ ಕಳೆದ 24 ಗಂಟೆಗಳಲ್ಲಿ173 ಹೊಸ ಕೊವಿಡ್ ಪ್ರಕರಣ ಪತ್ತೆ

ರಾಜ್ಯದಲ್ಲಿ ಕೊನೆಯ 24 ಗಂಟೆಗಳಲ್ಲಿ ಒಟ್ಟು 173 ಹೊಸ ಕೊವಿಡ್ ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಹಂಚಿಕೊಂಡಿದೆ. 37 ಜನ ಡಿಸ್‌ಚಾರ್ಜ್‌ ಆಗಿದ್ದು, ಸದ್ಯ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 702 ಇದೆ. ಕೊನೆಯ 24 ಗಂಟೆಗಳಲ್ಲಿ 8349 ಟೆಸ್ಟ್‌ಗಳು ನಡೆದಿವೆ, 6400 ಆರ್‌ಟಿಪಿಸಿಆರ್‌ ಟೆಸ್ಟ್‌ಗಳು ನಡೆದಿವೆ ಹಾಗೂ 1949 ರ್ಯಾಟ್‌ ಟೆಸ್ಟ್‌ಗಳು ನಡೆದಿವೆ. ರಾಜ್ಯದಲ್ಲಿ ಪಾಸಿಟಿವಿಟಿ ದರ 2.07% ಇದೆ. ಕಳೆದ 24 ಗಂಟೆಗಳಲ್ಲಿ ಬೆಂಗಳೂರು ಮೂಲದ ಇಬ್ಬರು ಸೋಂಕಿತರು ಸಾವನ್ನಪ್ಪಿದ್ದಾರೆ.

ಒಟ್ಟು 702 ಸಕ್ರಿಯ ಪ್ರಕರಣಗಳ ಪೈಕಿ 649 ಸೋಂಕಿತರನ್ನು ಹೋಮ್‌ ಐಸೋಲೇಷನ್‌ ಮಾಡಲಾಗಿದ್ದು, 53 ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರ ಪೈಕಿ 12 ಸೋಂಕಿತರು ಐಸಿಯುನಲ್ಲಿದ್ದು, 41 ಸೋಂಕಿತರು ಸಾಮಾನ್ಯ ವಾರ್ಡ್‌ನಲ್ಲಿದ್ದಾರೆ.

ಕಳೆದ 24 ಗಂಟೆಗಳಲ್ಲಿ ಮೈಸೂರಿನಲ್ಲಿ 16, ಮಂಡ್ಯದಲ್ಲಿ 6, ಚಾಮರಾಜನಗರದಲ್ಲಿ 4 ಹಾಗೂ ಕೊಡಗಿನಲ್ಲಿ 1 ಪ್ರಕರಣಗಳು ಪತ್ತೆಯಾಗಿವೆ. ಮೈಸೂರಿನಲ್ಲಿ ಒಟ್ಟು 46, ಮಂಡ್ಯದಲ್ಲಿ 21, ಕೊಡಗಿನಲ್ಲಿ 2 ಹಾಗೂ ಚಾಮರಾಜನಗರದಲ್ಲಿ 12 ಸಕ್ರಿಯ ಪ್ರಕರಣಗಳಿವೆ.

andolana

Recent Posts

ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮಿಗಳಿಂದ ಈ ಬಾರಿ ದಸರಾ ಉದ್ಘಾಟನೆ

ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…

2 hours ago

ಕಾಡಾನೆ ದಾಳಿಗೆ 75 ತೆಂಗಿನ ಮರ ನಾಶ: ಬೆಳೆ ಪರಿಹಾರಕ್ಕೆ ರೈತ ಕುಟುಂಬದ ಮನವಿ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…

8 hours ago

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ

ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…

8 hours ago

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.…

9 hours ago

ಕೋಟೆ ಟಿಎಪಿಸಿಎಂಎಸ್: ನಾಳೆ ಮೈತ್ರಿ ಪಕ್ಷದ 8 ಸದಸ್ಯರ ರಾಜೀನಾಮೆ ಭವಿಷ್ಯ ನಿರ್ಧಾರ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…

10 hours ago

ಓದುಗರ ಪತ್ರ: ಸಿಗಲಿ ನ್ಯಾಯ!

ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…

16 hours ago