ರಾಜ್ಯ

ನಾಳೆಯಿಂದ 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ : ಈ ಬಾರಿ ಏನೆಲ್ಲಾ ವಿಶೇಷ

ಬೆಂಗಳೂರು : ಬೆಂಗಳೂರಿನ ಸಿನಿಮಾ ಪ್ರೇಮಿಗಳು ಕುತೂಹಲ ಮತ್ತು ನಿರೀಕ್ಷೆಯಿಂದ ಕಾಯುತ್ತಿರುವ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ 17ನೇ ಅವತರಣಿಕೆಗೆ ವೇದಿಕೆ ಸಜ್ಜಾಗಿದ್ದು, ಗುರುವಾರ ಸಂಜೆ 5 ಗಂಟೆಗೆ ವಿಧಾನಸೌಧದ ಮುಂಭಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಚಿತ್ರೋತ್ಸವಕ್ಕೆ ಚಾಲನೆ ನೀಡಲಿದ್ದಾರೆ.

ಕಾರ್ಯಕ್ರಮದಲ್ಲಿ ವಿಧಾನ ಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್, ವಿಧಾನಪರಿಷತ್‍ನ ಸಭಾಪತಿ ಬಸವರಾಜ ಹೊರಟ್ಟಿ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉಪಸ್ಥಿತರಿರಲಿದ್ದಾರೆ.

ಚಿತ್ರೋತ್ಸವದ ರಾಯಭಾರಿ ಬಹುಭಾಷಾ ನಟ ಪ್ರಕಾಶ್‍ರಾಜ್ ಮತ್ತು ನಟಿ ರುಕಿಣಿ ವಸಂತ್ ವಿಶೇಷ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷ ಸಾಧು ಕೋಕಿಲ ಉಪಸ್ಥಿತರಿರಲಿದ್ದಾರೆ.

ಸಂಜೆ 5.30ಕ್ಕೆ ಡಾ. ಜ್ಯೊತ್ಸ್ನಾ ಶ್ರೀಕಾಂತ್ ಅವರ ನೇತೃತ್ವದಲ್ಲಿ 35 ಕಲಾವಿದರಿಂದ ವಿಶ್ವ ಸಂಗೀತ ಸಂಭ್ರಮ ಕಾರ್ಯಕ್ರಮ ನಡೆಯಲಿದ್ದು, ಸಂಜೆ 6 ಗಂಟೆಗೆ ಸಭಾ ಕಾರ್ಯಕ್ರಮ ಪ್ರಾರಂಭವಾಗಲಿದೆ. ರಾತ್ರಿ 8ಕ್ಕೆ ಚಿತ್ರೋತ್ಸವದ ಉದ್ಘಾಟನಾ ವೇದಿಕೆಯಲ್ಲಿ ನೆದಲ್ಯಾರ್ಂಡ್ ದೇಶದ ಬ್ಯಾಗೇಜ್ ಚಿತ್ರವು ಉದ್ಘಾಟನಾ ಚಿತ್ರವಾಗಿ ಪ್ರದರ್ಶನವಾಗಲಿದೆ.

ಜ.30ರಿಂದ ಫೆಬ್ರವರಿ 6ರವರೆಗೂ ಈ ಚಿತ್ರೊ?ತ್ಸವದಲ್ಲಿ 65 ದೇಶಗಳ ಸುಮಾರು 225 ಅತ್ಯುತ್ತಮ ಚಲನಚಿತ್ರಗಳು ಪ್ರದರ್ಶನಗೊಳ್ಳಲಿದ್ದು ಆಯಾ ದೇಶದ ಸ್ಥಿತಿ-ಗತಿ, ಜನ ಜೀವನ ಮತ್ತು ಸಂಸ್ಕೃತಿಯನ್ನು ಬಿಂಬಿಸಲಿವೆ. ವಿಶ್ವದ ಪ್ರತಿಷ್ಠಿತ ಚಲನಚಿತ್ರೋತ್ಸವಗಳಲ್ಲಿ ಪಾಲ್ಗೊಂಡಿದ್ದ ಅತ್ಯುತ್ತಮ ಚಲನಚಿತ್ರಗಳು ಈ ಚಿತ್ರೊ?ತ್ಸವದಲ್ಲಿ ಬೆಂಗಳೂರಿನಲ್ಲಿ ಜಗತ್ತು ಎನ್ನುವ ಶೀರ್ಷಿಕೆಯಡಿ ಪ್ರದರ್ಶನಗೊಳ್ಳಲಿವೆ.

ಈ ಚಿತ್ರೋತ್ಸವವನ್ನು ಪ್ರತಿ ವರ್ಷವೂ ಅರ್ಥಪೂರ್ಣವಾದ ಧ್ಯೇಯವಾಕ್ಯದ ಮೂಲಕ ನಡೆಸಲಾಗುತ್ತಿದ್ದು, ಈ ಬಾರಿ ರಾಷ್ಟ್ರಕವಿ ಡಾ.ಜಿ.ಎಸ್. ಶಿವರುದ್ರಪ್ಪನವರ ಪ್ರಸಿದ್ಧ ಗೀತೆಯಾಗಿರುವ ಸ್ತ್ರಿ? ಎಂದರೆ ಅಷ್ಟೆ? ಸಾಕೆ ಎಂಬ ಸಾಲಿನೊಂದಿಗೆ ಸ್ತ್ರೀ ಸಂವೇದನೆ, ಸಮಾನತೆಯ ದನಿ ಎಂಬ ಟ್ಯಾಗ್ ಲೈನ್ ಹೊಂದಿರುವ ಧ್ಯೆ?ಯ ವಾಕ್ಯದೊಂದಿಗೆ ಆಚರಿಸಲಾಗುತ್ತಿದೆ.

ಇದಲ್ಲದೆ ಈ ಚಿತ್ರೋತ್ಸವವನ್ನು ಏಷಿಯನ್ ಸಿನಿಮಾ ಸ್ಪರ್ಧಾ ವಿಭಾಗ, ಚಿತ್ರ ಭಾರತಿ (ಭಾರತೀಯ ಸಿನಿಮಾ ಸ್ಪರ್ಧಾ ವಿಭಾಗ), ಕನ್ನಡ ಸಿನಿಮಾ ಸ್ಪರ್ಧಾ ವಿಭಾಗ, ಸಮಕಾಲೀನ ವಿಶ್ವ ಸಿನಿಮಾ, ಕನ್ನಡ ಜನಪ್ರಿಯ ಸಿನಿಮಾ, ಫಿಪ್ರೆಸ್ಕಿ – ವಿಮರ್ಶಕರ ವಾರ, ಜೀವನ ಕಥನ ಆಧಾರಿತ ಚಿತ್ರಗಳು, ದೇಶ ಕೇಂದ್ರಿತ ವಿಶೇಷ: ಫೋಲೆಂಡ್, ಭಾರತೀಯ ಉಪಭಾಷಾ ಚಲನಚಿತ್ರಗಳು, ಪುನರಾವಲೋಕನ ಮುಂತಾದ ವಿಭಾಗಗಳಡಿ ಹಲವು ಚಿತ್ರಗಳನ್ನು ಪ್ರದರ್ಶಿಸಲಾಗುತ್ತದೆ.
ಕನ್ನಡದ ಮೇರುನಟ ಪದಭೂಷಣ ಡಾ.ರಾಜಕುಮಾರ್ ಅಭಿನಯದ ಐದು ಮಹತ್ವದ ಕನ್ನಡ ಚಲನಚಿತ್ರಗಳ ಪ್ರದರ್ಶನ, ಪೋಲಂಡಿನ ಪ್ರಖ್ಯಾತ ನಿರ್ದೇಶಕ ಆಂದ್ರೆ ವಾಜ್ದಾ ಅವರ ನಿರ್ದೇಶನದ ಏಳು ಚಲನಚಿತ್ರಗಳ ಪ್ರದರ್ಶನ, ಖ್ಯಾತ ಅಭಿನೇತ್ರಿ ಸಿತಾ ಪಾಟೀಲ್ ಅವರ ಹೆಸರಾಂತ ಚಲನಚಿತ್ರಗಳ ಪ್ರದರ್ಶನ, ಥಾಯ್ಲೆಂಡಿನ ಖ್ಯಾತ ನಿರ್ದೇಶಕ ಅಚಿತಪಾಂಗ್ ವೀರಸೆಥಕುಲ್ ಅವರ ನಾಲ್ಕು ಪ್ರಮುಖ ಚಲನಚಿತ್ರಗಳ ಪ್ರದರ್ಶನ, ಪ್ರತಿಷ್ಠಿತ ಚಲನಚಿತ್ರೊ?ತ್ಸವಗಳಲ್ಲಿ ಜನಮನ್ನಣೆ ಪಡೆದ ಸಮಕಾಲೀನ ಭಾರತೀಯ ಚಲನಚಿತ್ರಗಳ ಪ್ರದರ್ಶನ, ಸಂರಕ್ಷಿಸಲ್ಪಟ್ಟ ಮಹತ್ವದ ಭಾರತೀಯ ಚಲನಚಿತ್ರಗಳ ಪ್ರದರ್ಶನ ಕೂಡಾ ನಡೆಯಲಿದೆ.

ಚಿತ್ರೋತ್ಸವ ನಡೆಯುವ ಎಂಟು ದಿನಗಳ ಕಾಲ ಪ್ರತಿ ದಿನ ಚಿತ್ರ ನಿರ್ಮಾಣ, ನಿರ್ದೇಶನ, ಚಿತ್ರಕತೆ, ತಂತ್ರಜ್ಞಾನ ಮತ್ತು ಉದ್ಯಮಕ್ಕೆ ಸಂಬಂಧಪಟ್ಟಂತೆ ತಜ್ಞರೊಂದಿಗೆ ಸಂವಾದ, ಉಪನ್ಯಾಸ, ಮಾಸ್ಟರ್ ಕ್ಲಾಸ್, ವಿಚಾರ ಸಂಕಿರಣ ಮೊದಲಾದ ಕಾರ್ಯಕ್ರಮಗಳಿರುತ್ತವೆ. ಚಿತ್ರೋತ್ಸವದ ರಾಯಭಾರಿ ಪ್ರಕಾಶ್ ರಾಜ್ ಅವರಿಂದ ನಾವು ಮತ್ತು ನಮ ಸಿನಿಮಾ ಎಂಬ ವಿಷಯದ ಕುರಿತು ಉಪನ್ಯಾಸ ನಡೆಯಲಿದೆ.

ಖ್ಯಾತ ಸಂಕಲನಕಾರ ಶ್ರೀಕರ್‍ಪ್ರಸಾದ್ ಅವರಿಂದ ಚಲನಚಿತ್ರದ ಸಂಕಲನದ ಮಹತ್ವ, ನಿರ್ದೇಶಕ ಮತ್ತು ಸಂಕಲನಕಾರ ಮಹೇಶ್ ನಾರಾಯಣನ್ ಅವರಿಂದ ಸಮಕಾಲೀನ ಚಲನಚಿತ್ರ ಕಥನ ನಿರೂಪಣೆ ಮತ್ತು ಶೈಲಿ, ಹೆಸರಾಂತ ಧ್ವನಿ ವಿನ್ಯಾಸಕರಾದ ಬಿಶ್ವದೀಪ್ ಚಟರ್ಜಿ ಅವರಿಂದ ದೃಶ್ಯಾತೀತ ಧ್ವನಿ- ಆಡಿಯೋಗ್ರಫಿಯ ಕಲೆ ಅನುರಾಗ್ ಕಶ್ಯಪ್‍ರವರಿಂದ ಸಾಂಪ್ರದಾಯಿಕ ಕಲ್ಪನೆಗಳಾಚೆಗಿನ ಚಲನಚಿತ್ರ ಕಥನಗಾರಿಕೆ ಕುರಿತ ಉಪನ್ಯಾಸ ನಡೆಯಲಿದೆ.

ಹೆಸರಾಂತ ಛಾಯಾಗ್ರಾಹಕ ವಿ.ಕೆ. ಮೂರ್ತಿ ಕುರಿತು ವಾರ್ಷಿಕ ಸಾರಕ ಉಪನ್ಯಾಸ ನಡೆಯಲಿದ್ದು, ಲೆನ್ಗಳ ಆಯ್ಕೆ, ಬೆಳಕಿನ ವಿನ್ಯಾಸ ಮತ್ತು ಛಾಯಾಗ್ರಹಣ ಕಲೆ ಕುರಿತು ಮಾತುಕತೆ ನಡೆಯಲಿದ್ದು, ಹಿರಿಯ ಛಾಯಾಗ್ರಾಹಕರಾದ ಜಿ.ಎಸ್.ಭಾಸ್ಕರ್ ಕಾರ್ಯಕ್ರಮ ನಿರ್ವಹಣೆ ಮಾಡಲಿದ್ದಾರೆ.

ಡಾ.ಗಿರೀಶ್ ಕಾಸರವಳ್ಳಿ, ಡಾ. ಸಾಧು ಕೋಕಿಲ, ಡಾ. ಜಯಮಾಲ ಹಾಗೂ ಇತರರೊಂದಿಗೆ ಕಳೆದ ನಾಲ್ಕು ದಶಕಗಳ ಕನ್ನಡ ಸಿನಿಮಾ ಬಗ್ಗೆ ಸಂವಾದ, ಗಿರೀಶ್ ಕಾಸರವಳ್ಳಿ ಅವರಿಂದ ಚಲನಚಿತ್ರ ಕಥನಗಳಲ್ಲಿ ನಮತನ ಮತ್ತು ನೈಜತೆ ಕುರಿತ ಉಪನ್ಯಾಸ ನಡೆಯಲಿದೆ. ಕರ್ನಾಟಕ ಲೇಖಕಿಯರ ಸಂಘದ ವತಿಯಿಂದ ಚಿತ್ರೋತ್ಸವದ ಧ್ಯೇಯವಾಕ್ಯ ಕೇಂದ್ರಿತ ಸಂವಾದ ಕಾರ್ಯಕ್ರಮ ಸೇರಿದಂತೆ ಹತ್ತು ಹಲವು ಕಾರ್ಯಕ್ರಮಗಳು ನಡೆಯಲಿವೆ.

ಈ ಪ್ರತಿಷ್ಠಿತ ಚಿತ್ರೋತ್ಸವವು ನಾಳೆಯಿಂದ ಫೆಬ್ರವರಿ 6ರವರೆಗೂ ನಡೆಯಲಿದ್ದು, ಬೆಂಗಳೂರಿನ ರಾಜಾಜಿನಗರದ ಲುಲು ಮಾಲ್‍ನ ಸಿನಿಪೊಲೀಸ್, ಮಲ್ಟಿಪ್ಲೆಕ್ ಅಲ್ಲದೆ, ಬನಶಂಕರಿ 2ನೇ ಹಂತದಲ್ಲಿರುವ ಸುಚಿತ್ರಾ ಫಿಲಂ ಸೊಸೈಟಿ ಮತ್ತು ಕರ್ನಾಟಕ ಚಲನಚಿತ್ರ ಕಲಾವಿದರ ಸಂಘದಲ್ಲಿ ಚಿತ್ರಗಳು ಪ್ರದರ್ಶನವಾಗಲಿವೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ವಾಜಮಂಗಲ ಬಳಿ ಘರ್ಜಿಸಿದ ಜೆಸಿಬಿ : ಅನಧಿಕೃತ ಕಟ್ಟಡ ನೆಲಸಮ ಮಾಡಿದ ಎಂಡಿಎ

ಮೈಸೂರು : ಹಲವಾರು ವರ್ಷಗಳಿಂದ ಕಣ್ತಪ್ಪಿನಿಂದ ಹಾಗೂ ಬೇನಾಮಿ ದಾಖಲೆಗಳನ್ನು ಸೃಷ್ಟಿಸಿ ಕಬಳಿಸಿರುವ ನಿವೇಶನಗಳನ್ನು ಗುರುತಿಸಿ ರಕ್ಷಣೆ ಮಾಡುವುದಕ್ಕೆ ಎಂಡಿಎ…

19 mins ago

ಮುಡಾ ಪ್ರಕರಣದಲ್ಲಿ ಸಿಎಂʼಗೆ ಬಿಗ್‌ ರಿಲೀಫ್‌ : ಬಿ ರಿಪೋರ್ಟ್‌ ಎತ್ತಿ ಹಿಡಿದ ಕೋರ್ಟ್‌

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮೂಡ)ದಲ್ಲಿ ನಿವೇಶನ ಪಡೆದ ಪ್ರಕರಣ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದವರಿಗೆ ಕಾನೂನು…

36 mins ago

ಒಳಚರಂಡಿ ನೀರು ಕಾಲುವೆ ಸೇರಿದಂತೆ ಕಾಮಗಾರಿಗೆ ಅಂದಾಜು ಪಟ್ಟಿ ತಯಾರಿಸಿ : ಶಾಸಕ ಜಿಟಿಡಿ ಸೂಚನೆ

ಲಿಂಗಾಂಬುದಿಕೆರೆಗೆ ಹರಿಯುವ ಯುಜಿಡಿ ನೀರು ತಡೆಗೆ ಶೀಘ್ರ ಶಾಶ್ವತ ಪರಿಹಾರ ಮೈಸೂರು : ಹಲವು ತಿಂಗಳುಗಳಿಂದ ಒಳಚರಂಡಿ ನೀರು ಹರಿಯುವ…

42 mins ago

ರಾಜ್ಯಪಾಲರಿಗೆ ದಿಲ್ಲಿಯಿಂದ ಫೋನ್‌? : ಫೋನ್‌ ಟ್ಯಾಪಿಂಗ್‌ ಬಗ್ಗೆ ವಿಧಾನಸಭೆಯಲ್ಲಿ ಗದ್ದಲ

ಬೆಂಗಳೂರು : ದೆಹಲಿಯಿಂದ ರಾಜಭವನಕ್ಕೆ ಫೋನ್ ಮಾಡಲಾಗಿದೆ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ್ ಮಾಡಿದ ಆರೋಪವು ವಿಧಾನಸಭೆಯಲ್ಲಿ ಆಡಳಿತ ಮತ್ತು…

2 hours ago

ನಾಳೆ ಸಾರಿಗೆ ನೌಕರರಿಂದ ಬೆಂಗಳೂರು ಚಲೋ: ಬೇಡಿಕೆ ಈಡೇರದಿದ್ದರೆ ಸಾಮೂಹಿಕ ರಾಜೀನಾಮೆ ಎಚ್ಚರಿಕೆ

ಬೆಂಗಳೂರು: ವೇತನ ಹಿಂಬಾಕಿ ಮತ್ತು ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಎಸ್‌ಆರ್‌ಟಿಸಿ ಸೇರಿದಂತೆ ನಾಲ್ಕು ಸಾರಿಗೆ…

3 hours ago

ಐಎಎಸ್‌ ಅಧಿಕಾರಿ ದಿ.ಮಹಾಂತೇಶ್‌ ಬೀಳಗಿ ಪುತ್ರಿಗೆ ಸರ್ಕಾರಿ ಉದ್ಯೋಗ: ನೇಮಕಾತಿ ಪತ್ರ ವಿತರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಇತ್ತೀಚೆಗೆ ಕಾರು ಅಪಘಾತದಲ್ಲಿ ಮೃತಪಟ್ಟ ಐಎಎಸ್‌ ಅಧಿಕಾರಿ ದಿ.ಮಹಾಂತೇಶ್‌ ಬೀಳಗಿ ಅವರ ಪುತ್ರಿಗೆ ಸರ್ಕಾರಿ ಉದ್ಯೋಗ ಲಭಿಸಿದೆ. ಸಿಎಂ…

3 hours ago