ಶಿವಮೊಗ್ಗ: ಶೀಘ್ರದಲ್ಲೇ ಸರ್ಕಾರಿ ಶಾಲೆಗಳಿಗೆ 12 ಸಾವಿರ ಮತ್ತು ಅನುದಾನಿತ ಶಾಲೆಗಳಿಗೆ 6 ಸಾವಿರ ಸೇರಿದಂತೆ ಒಟ್ಟು 18 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು.
ಈ ಕುರಿತು ಶಿವಮೊಗ್ಗದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಯಾವುದೇ ಶಿಕ್ಷಕರ ಕೊರತೆ ಆಗದಂತೆ ನೋಡಿಕೊಳ್ಳಲಾಗುತ್ತಿದೆ. ಸರ್ಕಾರಿ ಶಾಲೆಗಳಿಗೆ 12 ಸಾವಿರ, ಅನುದಾನಿತ ಶಾಲೆಗಳಿಗೆ 6 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ಮುಂದಿನ ಶೈಕ್ಷಣಿಕ ವರ್ಷದಲ್ಲಿ ಮಕ್ಕಳ ಸ್ವಾಗತಕ್ಕೆ ಈ ಶಿಕ್ಷಕರೇ ಉಪಸ್ಥಿತರಿರುತ್ತಾರೆ. ಅಲ್ಲಿನ ನಾವು ಒಟ್ಟು 32 ಸಾವಿರ ಶಿಕ್ಷಕರ ನೇಮಕ ಮಾಡಿದ ಹಾಗೆ ಆಗುತ್ತದೆ ಎಂದು ಹೇಳಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಯುದ್ಧಕಾಲದಲ್ಲಿ ಶಸ್ತ್ರಭ್ಯಾಸದ ಬದಲು ಈಗಿನಿಂದಲೇ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಪೂರಕವಾಗಿ ತಯಾರಿ ಮಾಡಲಾಗುತ್ತಿದೆ. ಈ ಹಿಂದಿನ ಸರ್ಕಾರದವರು ಕೇವಲ 5 ಸಾವಿರದೊಳಗೆ ಶಿಕ್ಷಕರ ನೇಮಕಾತಿ ಮಾಡಿದ್ದರು. ಮಕ್ಕಳ ಹಿತದೃಷ್ಟಿಯಿಂದ ಶಿಕ್ಷಕರ ನೇಮಕಾತಿ ಆದಷ್ಟು ಬೇಗನೇ ಮುಗಿಯಲಿದೆ ಎಂದು ಹೇಳಿದರು.





