ಬೆಂಗಳೂರು : ರಾಜ್ಯದಲ್ಲಿ 18 ಸಾವಿರ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದರು.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಉನ್ನತ ಶಿಕ್ಷಣ ಇಲಾಖೆ ವತಿಯಿಂದ ಹಮಿಕೊಂಡಿದ್ದ ಭಾರತರತ್ನ ಡಾ.ಸರ್ವಪಲ್ಲಿ ರಾಧಾಕೃಷ್ಣರವರ ಜನ ದಿನಾಚರಣೆ ಅಂಗವಾಗಿ ರಾಜ್ಯಮಟ್ಟದ ಶಿಕ್ಷಕರ ದಿನಾಚರಣೆ, ರಾಜ್ಯಪ್ರಶಸ್ತಿ ಪುರಸ್ಕೃತ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.
ಕಲಬುರಗಿ ಭಾಗದಲ್ಲಿ 5 ಸಾವಿರ ಶಿಕ್ಷಕರ ನೇಮಕಾತಿಗೆ ಅನುಮೋದನೆ ನೀಡಲಾಗಿದೆ. 800 ಕೆಪಿಎಸ್‌ಸಿ ಶಾಲೆಗಳನ್ನು ಪ್ರಾರಂಭಿಸಲಾಗಿದೆ. 5 ಸಾವಿರ ದ್ವಿಭಾಷಾ ಶಾಲೆಗಳನ್ನು ಮಂಜೂರು ಮಾಡಲಾಗಿದೆ ಎಂದು ಅವರು ತಿಳಿಸಿದರು.
1 ಸಾವಿರವಿದ್ದ ಎಲ್‌ಕೆಜಿ, ಯುಕೆಜಿ ಶಾಲೆಗಳನ್ನು 4 ಸಾವಿರಕ್ಕೆ ಹೆಚ್ಚಿಸಲಾಗಿದೆ. ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೂ ಅನುಮೋದನೆ ನೀಡಲಾಗಿದೆ. 6 ದಿನಗಳ ಕಾಲ ಮಕ್ಕಳ ಭೌತಿಕತೆ ಹೆಚ್ಚಲು ಮೊಟ್ಟೆ ಇಲ್ಲವೇ ಬಾಳೆಹಣ್ಣನ್ನು ನೀಡಲಾಗುತ್ತಿದೆ ಎಂದರು.
ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಶಾಲೆಗಳ ಮೂಲ ಸೌಕರ್ಯ ಕಲ್ಪಿಸಲಾಗುತ್ತಿದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಶಾಲಾ ಮಕ್ಕಳಿಂದ ಸಂವಿಧಾನ ಪೀಠಿಕೆಯನ್ನು ಶಿಕ್ಷಣ ಸಚಿವರು ಬೋಧಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಾಲಾ ಮಕ್ಕಳಿಗೆ ಶುಭ ಕೋರಿದರು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…