ರಾಜ್ಯ

ಪೋಷಕರಿಗೆ ಗುಡ್‌ನ್ಯೂಸ್:‌ 1ನೇ ತರಗತಿ ಮಕ್ಕಳ ದಾಖಲಾತಿ ವಯೋಮಿತಿ ಸಡಿಲ

ಬೆಂಗಳೂರು: ರಾಜ್ಯ ಸರ್ಕಾರ ಹಾಗೂ ಶಿಕ್ಷಣ ಇಲಾಖೆಯು ಪೋಷಕರಿಗೆ ಗುಡ್‌ನ್ಯೂಸ್‌ ನೀಡಿದೆ. 5 ವರ್ಷ 5 ತಿಂಗಳಾಗಿರುವ ಮಕ್ಕಳಿಗೆ ಇನ್ನು 1ನೇ ತರಗತಿಗೆ ದಾಖಲಾತಿ ಮಾಡಲು ಸಾಧ್ಯವಾಗಲಿದೆ.

ಈ ಕುರಿತು ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದು, ಶಾಲಾ ಮಕ್ಕಳ ವಯೋಮಿತಿ ಗೊಂದಲಕ್ಕೆ ತೆರೆ ಎಳೆದಿದ್ದಾರೆ.

1ನೇ ತರಗತಿಗೆ ವಯೋಮಿತಿ ಸಡಿಲಿಕೆ ಮಾಡುವ ಬಗ್ಗೆ ಸಾಕಷ್ಟು ವರದಿಗಳು ಬಂದಿದ್ದವು. 1ನೇ ತರಗತಿಗೆ 6 ವರ್ಷ ಕಡ್ಡಾಯ ನಿಯಮದಿಂದ ವಾರ್ಷಿಕವಾಗಿ 5 ಲಕ್ಷ ಮಂದಿ ಮಕ್ಕಳಿಗೆ ಶಾಲಾ ದಾಖಲಾತಿ ಮಾಡುವ ವೇಳೆ ಸಮಸ್ಯೆ ಆಗುತ್ತಿತ್ತು.

ಈ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ 5 ವರ್ಷ 5 ತಿಂಗಳು ಆಗಿರುವ ಮಕ್ಕಳಿಗೂ 1ನೇ ತರಗತಿಗೆ ದಾಖಲಾತಿ ಮಾಡಿಕೊಳ್ಳಲು ಅವಕಾಶ ನೀಡಿದೆ. ಈ ಮೂಲಕ ಪೋಷಕರಿಗೆ ಶಿಕ್ಷಣ ಇಲಾಖೆಯು ಗುಡ್‌ನ್ಯೂಸ್‌ ನೀಡಿದೆ.

ಇನ್ನು ಈ ಬಗ್ಗೆ ಮಾತನಾಡಿರುವ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು, ದೇಶದಲ್ಲಿ ಎಲ್ಲಾ ಕಡೆ ಕೂಡ 6 ವರ್ಷ ಕಡ್ಡಾಯ ಮಾಡಲಾಗಿದೆ. ಈ ವರ್ಷಕ್ಕೆ ಮಾತ್ರ ವಯಸ್ಸು ಸಡಿಲಿಕೆ ಮಾಡಿದ್ದೇವೆ. ಈ ವರ್ಷಕ್ಕೆ ಮಾತ್ರ ವಯೋಮಿತಿ ಸಡಿಲಿಕೆ ಅನ್ವಯವಾಗಲಿದೆ. ಮುಂದಿನ ವರ್ಷದಿಂದ 6 ವರ್ಷ ಕಡ್ಡಾಯ ಇರಲಿದೆ ಎಂದು ಮಾಹಿತಿ ನೀಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ

ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…

8 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ನಾಳೆ ಅಧಿಕೃತ ಚಾಲನೆ

ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…

9 hours ago

ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…

10 hours ago

ಅಭಿಜಿತ್ ದೀಪ್ಕೆ ಪೊಲೀಸ್ ವಶಕ್ಕೆ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಅಜಿಂಕ್ಯ ಶಿಂಧೆ ಸಾರಥ್ಯ

ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…

10 hours ago

ಓದುಗರ ಪತ್ರ: ಹೋರಾಟಗಳು ರಚನಾತ್ಮಕವಾಗಿರಲಿ, ಗಂಭೀರವಾಗಿರಲಿ

ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…

14 hours ago

ಓದುಗರ ಪತ್ರ: ಒಂದು ವರ್ಷ ಅಲೆದಾಡಿಸಿದ ನಂತರ… !

ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…

14 hours ago