Mysore
24
haze

Social Media

ಭಾನುವಾರ, 21 ಡಿಸೆಂಬರ್ 2025
Light
Dark

ಪ್ರಹ್ಲಾದ್ ಜೋಶಿ ಸಹೋದರನ ವಿರುದ್ಧದ 2 ಕೋಟಿ ವಂಚನೆ ಪ್ರಕರಣ ಹಿಂಪಡೆದ ಮಹಿಳೆ

ಬೆಂಗಳೂರು: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಸಹೋದರ ಗೋಪಾಲ್‌ ಜೋಶಿ, ಸಹೋದರಿ ವಿಜಯಲಕ್ಷ್ಮೀ ಮತ್ತು ಗೋಪಾಲ್‌ ಪುತ್ರ ಅಜಯ್‌ ವಿರುದ್ಧ 2 ಕೋಟಿ ರೂಪಾಯಿ ವಂಚನೆ ದೂರು ದಾಖಲಿಸಿದ್ದ ಮಹಿಳೆ ಈಗ ಪ್ರಕರಣ ವಾಪಸ್‌ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಹಿನ್ನೆಲೆಯಲ್ಲಿ ರಾಜಿ ಸಂಧಾನ ಸಕ್ಸಸ್‌ ಆಗಿದ್ದು, ಯಶವಂತಪುರ ನಿವಾಸಿ ಸುನೀತಾ ಎಂಬುವವರು ಪ್ರಕರಣವನ್ನು ಹಿಂಪಡೆದಿದ್ದಾರೆ ಎನ್ನಲಾಗುತ್ತಿದೆ.

ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿತ್ತು. ಅಲ್ಲದೇ ಪೊಲೀಸರು ಮತ್ತೋರ್ವ ಆರೋಪಿ ಗೋಪಾಲ್‌ಗಾಗಿ ಶೋಧ ನಡೆಸುತ್ತಿದ್ದರು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದ್ದರು.

ಇದೆಲ್ಲಾ ಬೆಳವಣಿಗೆಗಳ ನಡುವೆ ಸುನೀತಾ ಅವರು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ್ದು, ಸಮಸ್ಯೆ ಬಗೆಹರಿದಿದ್ದರಿಂದ ಯಾರನ್ನೂ ಬಂಧಿಸಲಾಗಿಲ್ಲ ಎಂದು ಹೇಳಿದ್ದಾರೆ.

ಇನ್ನು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಅವರು ತುಂಬಾ ಒಳ್ಳೆಯ ಮನುಷ್ಯ. ಅವರ ಬಗ್ಗೆ ನನಗೆ ಯಾವುದೇ ದೂರುಗಳಿಲ್ಲ. ಈಗ ಪ್ರಕರಣ ಬಗೆಹರಿದಿದೆ. ಹೀಗಾಗಿ ಪ್ರಕರಣ ವಾಪಸ್‌ ಪಡೆಯುತ್ತೇನೆ ಎಂದು ಸ್ಪಷ್ಟನೆ ನೀಡಿದ್ದಾರೆ.

Tags:
error: Content is protected !!