ಬೆಂಗಳೂರು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿ, ಸಹೋದರಿ ವಿಜಯಲಕ್ಷ್ಮೀ ಮತ್ತು ಗೋಪಾಲ್ ಪುತ್ರ ಅಜಯ್ ವಿರುದ್ಧ 2 ಕೋಟಿ ರೂಪಾಯಿ ವಂಚನೆ ದೂರು ದಾಖಲಿಸಿದ್ದ ಮಹಿಳೆ ಈಗ ಪ್ರಕರಣ ವಾಪಸ್ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಹಿನ್ನೆಲೆಯಲ್ಲಿ ರಾಜಿ ಸಂಧಾನ ಸಕ್ಸಸ್ ಆಗಿದ್ದು, ಯಶವಂತಪುರ ನಿವಾಸಿ ಸುನೀತಾ ಎಂಬುವವರು ಪ್ರಕರಣವನ್ನು ಹಿಂಪಡೆದಿದ್ದಾರೆ ಎನ್ನಲಾಗುತ್ತಿದೆ.
ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿತ್ತು. ಅಲ್ಲದೇ ಪೊಲೀಸರು ಮತ್ತೋರ್ವ ಆರೋಪಿ ಗೋಪಾಲ್‌ಗಾಗಿ ಶೋಧ ನಡೆಸುತ್ತಿದ್ದರು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದರು.
ಇದೆಲ್ಲಾ ಬೆಳವಣಿಗೆಗಳ ನಡುವೆ ಸುನೀತಾ ಅವರು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ್ದು, ಸಮಸ್ಯೆ ಬಗೆಹರಿದಿದ್ದರಿಂದ ಯಾರನ್ನೂ ಬಂಧಿಸಲಾಗಿಲ್ಲ ಎಂದು ಹೇಳಿದ್ದಾರೆ.
ಇನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ತುಂಬಾ ಒಳ್ಳೆಯ ಮನುಷ್ಯ. ಅವರ ಬಗ್ಗೆ ನನಗೆ ಯಾವುದೇ ದೂರುಗಳಿಲ್ಲ. ಈಗ ಪ್ರಕರಣ ಬಗೆಹರಿದಿದೆ. ಹೀಗಾಗಿ ಪ್ರಕರಣ ವಾಪಸ್ ಪಡೆಯುತ್ತೇನೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…