ರಾಜ್ಯ

ಕೆಲಸ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ಹಣ ಪಡೆದ ಕಾಂಗ್ರೆಸ್‌ ನಾಯಕಿ ವಿರುದ್ಧ ದೂರು ದಾಖಲು

ಕೆಲಸ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ಹಣ ಪಡೆದು ಮೋಸ ಮಾಡಿದ ಪ್ರಕರಣದಡಿಯಲ್ಲಿ ಕಾಂಗ್ರೆಸ್‌ ಯುವ ನಾಯಕಿ ಸಂದ್ಯಾ ಪವಿತ್ರ ನಾಗರಾಜ್‌ ವಿರುದ್ಧ ದೂರು ದಾಖಲಾಗಿದೆ.

ಕಾಂಗ್ರೆಸ್‌ ಪಕ್ಷದಲ್ಲಿ ಗುರುತಿಸಿಕೊಂಡಿರುವ ಸಂದ್ಯಾ ಪವಿತ್ರ ನಾಗರಾಜ್‌ ಕಾಂಗ್ರೆಸ್‌ನ ಡಿಕೆ ಶಿವಕುಮಾರ್‌, ಸಿದ್ದರಾಮಯ್ಯ, ಪ್ರಿಯಾಂಕ್‌ ಖರ್ಗೆ ಸೇರಿದಂತೆ ಇನ್ನೂ ಹಲವು ಪ್ರಮುಖ ನಾಯಕರ ಜತೆ ಫೋಟೊ ತೆಗೆಸಿಕೊಂಡಿದ್ದು, ಇದನ್ನು ಕಂಡ ಹಲವರು ಕೆಲಸ ಕೊಡಿಸಿ ಎಂದು ಸಾಮಾಜಿಕ ಜಾಲತಾಣದ ಮೂಲಕ ಸಂದ್ಯಾಗೆ ಸಂದೇಶ ಕಳುಹಿಸುತ್ತಿದ್ದರು. ಇದನ್ನೇ ಬಳಸಿಕೊಂಡ ಸಂದ್ಯಾ ಕೇಳಿದಷ್ಟು ಹಣ ಕೊಟ್ಟರೆ ಸರ್ಕಾರಿ ಕೆಲಸ ಕೊಡಿಸುವುದಾಗಿ ಹೇಳಿ ವಂಚಿಸಿದ್ದಾರೆ ಎಂದು ದೂರಲಾಗಿದೆ.

ಸಂದ್ಯಾ ಪವಿತ್ರ ನಾಗರಾಜ್‌ ವಿರುದ್ಧ ಎರಡು ಪ್ರಕರಣಗಳು ದಾಖಲಾಗಿವೆ. ಬೆಂಗಳೂರಿನ ಮಾರುತಿ ನಗರದ ನಿವಾಸಿ ವೀಣಾ ಎಂಬುವವರಿಗೆ ಫೇಸ್‌ಬುಕ್‌ ಮೂಲಕ ಪರಿಚಯವಾದ ಸಂದ್ಯಾ ವೀಣಾ ಕೆಲಸ ಹುಡುಕುತ್ತಿರುವುದನ್ನು ತಿಳಿದ ಬಳಿಕ ಎಂಎಸ್‌ ಬಿಲ್ಡಿಂಗ್‌ನಲ್ಲಿ ಸರ್ಕಾರಿ ಕೆಲಸ ಕೊಡಿಸುವುದಾಗಿ 20 ಲಕ್ಷ ರೂಪಾಯಿ ಹಣವನ್ನು ಪಡೆದಿದ್ದರು. ಆದರೆ ಈಗ ಸಂದ್ಯಾ ಕೆಲಸವನ್ನೂ ಕೊಡಿಸದೇ, ಹಣವನ್ನೂ ಸಹ ಹಿಂತಿರುಗಿಸದೇ ವಂಚಿಸಿದ್ದಾರೆ ಎಂದು ವೀಣಾ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇನ್ನು ಮತ್ತೊಂದು ಪ್ರಕರಣದಲ್ಲಿ ಸಂದ್ಯಾ ವಿರುದ್ಧ 14.70 ಲಕ್ಷ ವಂಚನೆ ಆರೋಪ ಕೇಳಿಬಂದಿದೆ. 2021ರಲ್ಲಿ ಬಾರ್‌ ಒಂದರಲ್ಲಿ ಕೆಲಸ ಮಾಡುತ್ತಿದ್ದ ರಂಗಸ್ವಾಮಿ ಎಂಬುವವರಿಗೆ ಭಾನುಪ್ರಕಾಶ್‌ ಎಂಬುವವರ ಪರಿಚಯವಾಗಿತ್ತು. ಭಾನುಪ್ರಕಾಶ್‌ ಮೂಲಕ ಹರೀಶ್‌ ಎಂಬ ವ್ಯಕ್ತಿಯ ಪರಿಚಯ ರಂಗಸ್ವಾಮಿಗೆ ಆಗಿತ್ತು. ಹೀಗೆ ಪರಿಚಯವಾದ ಹರೀಶ್‌ ಕೆಲಸ ಕೊಡಿಸುವುದಾಗಿ ರಂಗಸ್ವಾಮಿಯಿಂದ ಹಾಗೂ ರಂಗಸ್ವಾಮಿ ಸಹೋದರಿ ರೂಪಾ ಎಂಬುವವರಿಂದ ತಲಾ 3.5 ಲಕ್ಷ ರೂಪಾಯಿಗಳನ್ನು ಪಡೆದಿದ್ದ. ಬಳಿಕ ಕೆಲಸ ಕೊಡಿಸದ ಹರೀಶ್‌ನನ್ನು ವಿಚಾರಿಸಿದಾಗ ಹಣವನ್ನು ತಾನು ಸಂದ್ಯಾಗೆ ನೀಡಿರುವುದಾಗಿ ತಿಳಿಸಿದ್ದ. ಇದರ ಕುರಿತಾಗಿ ಸಂದ್ಯಾಳನ್ನು ಕೇಳಿದಾಗ ಮತ್ತೆ 7.70 ಲಕ್ಷ ಹಣಕ್ಕೆ ಬೇಡಿಕೆಯಿಟ್ಟ ಸಂದ್ಯಾ ರೂಪಾಳಿಂದಲೇ ಒಟ್ಟು 11.20 ಲಕ್ಷ ಪಡೆದಿದ್ದಾಳೆ. ಹೀಗೆ ಲಕ್ಷಾಂತರ ರೂಪಾಯಿ ಕೊಟ್ಟು ಕೆಲಸ ಸಿಗದೇ ಕೈಸುಟ್ಟುಕೊಂಡ ರೂಪಾ ಬೆಂಗಳೂರಿನ ಜಯನಗರದಲ್ಲಿ ಸಂದ್ಯಾ, ಭಾನುಪ್ರಕಾಶ್‌ ಹಾಗೂ ಹರೀಶ್‌ ವಿರುದ್ಧ ದೂರನ್ನು ದಾಖಲಿಸಿದ್ದಾರೆ.

ಇಷ್ಟು ಮಾತ್ರವಲ್ಲದೇ ಯಾದಗಿರಿಯ ಚಂದ್ರು ಎಂಬ ಯುವಕನಿಗೂ ಸಹ ಸಂದ್ಯಾ ಹಾಗೂ ತಂಡ ಕೆಲಸ ಕೊಡಿಸುವುದಾಗಿ ನಂಬಿಸಿ ಹಣದ ಮೋಸ ಮಾಡಿದ್ದು ಸದ್ಯ ಅನಾರೋಗ್ಯದಿಂದ ಹಾಸಿಗೆ ಹಿಡಿದಿರುವ ಯುವಕ ಹಣವನ್ನಾದರೂ ವಾಪಸ್‌ ಕೊಡಲಿ ಎಂದು ಗೋಳಿಟ್ಟಿದ್ದಾನೆ. 

andolana

Recent Posts

ಭಾರೀ ಮಳೆಗೆ ಕೊಚ್ಚಿ ಹೋದ ಚೆಕ್ ಡ್ಯಾಂ: 15 ಅಡಿಗೂ ಹೆಚ್ಚು ಪ್ರವಾಹ

ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…

3 hours ago

ಭಾರೀ ಮಳೆಗೆ ಮನೆ ಕುಸಿತ: ಲಕ್ಷಾಂತರ ರೂ. ನಷ್ಟ

ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…

4 hours ago

ಧರ್ಮಸ್ಥಳ ಸೌಜನ್ಯ ಪ್ರಕರಣ: ಮರು ತನಿಖೆಗೆ ಸುಪ್ರೀಂಕೋರ್ಟ್ ಮಹತ್ವದ ಆದೇಶ

ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…

5 hours ago

ಕಾಡಾನೆ ದಾಳಿ: ವ್ಯಕ್ತಿ ಸಾವು

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…

7 hours ago

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

11 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

11 hours ago