ಬೆಂಗಳೂರು: ಸರ್ಕಾರದ ಎಲ್ಲಾ ಇಲಾಖೆಗಳಲ್ಲಿ ಕ್ರೀಡಾಪಟುಗಳಿಗೆ ಶೇ. 2 ರಷ್ಟು ಮೀಸಲಾತಿ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಭಾನುವಾರ ಘೋಷಣೆ ಮಾಡಿದ್ದಾರೆ.
ಕೋರಮಂಗಲದಲ್ಲಿರುವ ಕೆಎಸ್‌ಆರ್‌ಪಿ ಕ್ರೀಡಾಂಗಣದಲ್ಲಿ ನಡೆದ ಪೊಲೀಸ್ ಆರ್ಚರಿ ಚಾಂಪಿಯನ್ ಶಿಪ್ ಸಮಾರೋಪ ಸಮಾರಂಭದಲ್ಲಿ ವಿಜೇತ ಆರ್ಚರಿ ಕ್ರೀಡಾಪಟುಗಳಿಗೆ ಪ್ರಶಸ್ತಿ ಪ್ರಧಾನ ಮಾಡಿ ಮಾತನಾಡಿದರು.
ರಾಜ್ಯದಲ್ಲಿ ಮೊದಲ ಬಾರಿಗೆ ಆರ್ಚರಿ ಚಾಂಪಿಯನ್ಶಿಪ್ ಆಯೋಜಿಸಲಾಗಿದೆ. 24 ರಾಜ್ಯಗಳ ಪೊಲೀಸ್ ತಂಡ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದವು. ಸರ್ಕಾರದಿಂದ ವಿಜೇತರಿಗೆ 25 ಲಕ್ಷ ರೂ. ಬಹುಮಾನ ನೀಡಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
(ಪ್ರಸ್ತುತ ಪೊಲೀಸ್ ಮತ್ತು ಅರಣ್ಯ ಇಲಾಖೆಗಳಲ್ಲಿ ಕ್ರೀಡಾ ಪಟುಗಳಿಗೆ ಶೇಕಡಾ ಮೂರರಷ್ಟು ಮೀಸಲಾತಿ ನೀಡಲಾಗುತ್ತಿದ್ದು, ಸರ್ಕಾರಿ ಇಲಾಖೆಗಳಲ್ಲಿ ಉದ್ಯೋಗಕ್ಕೆ ಶೇಕಡಾ ಎರಡರಷ್ಟು ನೀಡಲು ಸಕಾರಾತ್ಮಕವಾಗಿ ಪರಿಶೀಲಿಸಲಾಗುವುದು ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2023ರ ಅಕ್ಟೋಬರ್ 18 ರಂದು ಸಿಎಂ ಸಿದ್ದರಾಮಯ್ಯ ಹೇಳಿದ್ದರು. ಚೀನಾದಲ್ಲಿ ನಡೆದ 19ನೇ ಏಷ್ಯನ್ ಕ್ರೀಡಾಕೂಟದಲ್ಲಿ ಪದಕ ಗೆದ್ದ ರಾಜ್ಯದ ಕ್ರೀಡಾಪಟುಗಳು ತರಬೇತುದಾರರನ್ನು ಸನ್ಮಾನಿಸಿ, ನಗದು ಪುರಸ್ಕಾರ ನೀಡಿ ಮಾತನಾಡಿದ್ದರು.)
ಆರ್ಚರಿಯಲ್ಲಿ ಪುರುಷರ ಚಾಂಪಿಯನ್ ಶಿಪ್ನಲ್ಲಿ ITBP ತಂಡ 9 ಗೋಲ್ಡ್ ಮೆಡಲ್ ಪಡೆಯಿತು. ಆರ್ಚರಿಯಲ್ಲಿ ಮಹಿಳೆಯರ ಚಾಂಪಿಯನ್ ಶಿಪ್ನಲ್ಲಿ ರಾಜಸ್ಥಾನ ತಂಡ 7, ಆರ್ಚರಿಯಲ್ಲಿ ವೈಯಕ್ತಿಕ ಪುರುಷ ವಿಭಾಗದ ಚಾಂಪಿಯನ್- ರಜತ್ ಚೌಹಣ್ ರಾಜಸ್ಥಾನ ಡಿವೈಎಸ್ಪಿ (ಅರ್ಜುನ ಪ್ರಶಸ್ತಿ ವಿಜೇತ) 5 ಚಿನ್ನದ ಪದಕ, ಆರ್ಚರಿಯಲ್ಲಿ ವೈಯಕ್ತಿಕ ಮಹಿಳಾ ವಿಭಾಗದ ಚಾಂಪಿಯನ್ – ಅಮನ್ ದೀಪ್ ಕೌರ್- ರಾಜಸ್ಥಾನ 4 ಚಿನ್ನದ ಪದಕ ಗೆದ್ದುಕೊಂಡಿದ್ದಾರೆ.
ಸಮಾರಂಭದಲ್ಲಿ ಸಚಿವರಾದ ಡಾ.ಪರಮೇಶ್ವರ್, ರಾಮಲಿಂಗಾರೆಡ್ಡಿ, ನಾಗೇಂದ್ರ, ಡಿಜಿ&ಐಜಿಪಿ ಅಲೋಕ್ ಮೋಹನ್, ನಗರ ಪೊಲೀಸ್ ಆಯುಕ್ತ ದಯಾನಂದ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಸಮಾರೋಪ ಸಮಾರಂಭದಲ್ಲಿ ಅಶ್ವದಳ, ಬಾಂಬ್ ನಿಷ್ಕ್ರೀಯ ದಳ, ಗರುಡ ಪಡೆಯಿಂದ ಅಣುಕು ಪ್ರದರ್ಶನ ನಡೆಯಿತು. ಬಾಂಬ್ ಇಟ್ಟಾಗ ಅದನ್ನ ಪತ್ತೆ ಮಾಡಿ ನಿಷ್ಕ್ರೀಯ ಮಾಡಿ ಅಜ್ಞಾತ ಸ್ಥಳದಲ್ಲಿ ಸ್ಪೋಟಿಸುವುದರ ಕುರಿತು, ಬಸ್ ಹೈಜಾಕ ಮಾಡಿದಾಗ ಐಎಸ್ಡಿ ಗರುಡ ಪಡೆಯ ಕ್ಷಿಪ್ರ ಕಾರ್ಯಚರಣೆ, ಬಸ್ ಹೈಜಾಕ್ ವೇಳೆ ಶ್ವಾನದಳವೂ ಹೇಗೆ ಕೆಲಸ ಮಾಡುತ್ತದೆ ಎಂಬುವುದರ ಬಗ್ಗೆ ಅಣುಕು ಪ್ರದರ್ಶನ ನಡೆಯಿತು.
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಅವಿವಾಹಿತ ಯುವಕರ ವಿಚಿತ್ರ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಪಂಚಾಯಿತಿ ವತಿಯಿಂದ ನಮಗೆ ಮಠ ಕಟ್ಟಿಸಿಕೊಡುವಂತೆ…
ಚಿತ್ರದುರ್ಗ: ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ಸಮಾಧಿ ನಾಮಫಲಕ ಧ್ವಂಸ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಲೇಔಟ್ ನಿರ್ಮಾಣ ಮಾಡುವ ವೇಳೆ ರೇಣುಕಾಸ್ವಾಮಿ…
ಬೆಂಗಳೂರು: ರಾಜ್ಯದಲ್ಲಿ ದ್ವೇಷ ಭಾಷಣ ಮಾಡಿದರೆ 3 ವರ್ಷ ಜೈಲು ಶಿಕ್ಷೆ ಫಿಕ್ಸ್ ಆಗಿದೆ. ವಿಧಾನಸಭೆಯಲ್ಲಿ ಇಂದು ಮಸೂದೆ ಮಂಡನೆ…
ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ಚಿನ್ನಯ್ಯ ಆರೋಪಿಸಿದ್ದ ಹಿನ್ನೆಲೆಯಲ್ಲಿ ಎಸ್‌ಐಟಿ ತನಿಖೆ ವೇಳೆ ಸ್ಪೋಟಕ ಮಾಹಿತಿ ಬಯಲಾಗಿದೆ. ಹಣದ…
ಬೆಳಗಾವಿ: ಗ್ಯಾರಂಟಿಗಳ ಬಗ್ಗೆ ಸಿಎಲ್‌ಪಿಯಲ್ಲಿ ಚರ್ಚೆಯೇ ಆಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು. ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಗೆ ಶಾಸಕರು…
ಬೆಳಗಾವಿ: ನಿಜಲಿಂಗಪ್ಪನವರು ಒಬ್ಬ ದಕ್ಷ, ಪ್ರಾಮಾಣಿಕ ವ್ಯಕ್ತಿ. ಕರ್ನಾಟಕ ಕಂಡ ಅಪರೂಪದ ರಾಜಕಾರಣಿಯಾಗಿದ್ದು ಕೊನೆಯವರೆಗೂ ಪ್ರಾಮಾಣಿಕವಾಗಿ ಇದ್ದವರು ಎಂದು ಮುಖ್ಯಮಂತ್ರಿ…