ರಾಜ್ಯ

ಸರ್ಕಾರದ ಎಲ್ಲ ಇಲಾಖೆಗಳಲ್ಲಿ ಕ್ರೀಡಾಪಟುಗಳಿಗೆ ಶೇ2 ರಷ್ಟು ಮೀಸಲಾತಿ: ಸಿಎಂ ಘೋಷಣೆ!

ಬೆಂಗಳೂರು: ಸರ್ಕಾರದ ಎಲ್ಲಾ ಇಲಾಖೆಗಳಲ್ಲಿ ಕ್ರೀಡಾಪಟುಗಳಿಗೆ ಶೇ. 2 ರಷ್ಟು ಮೀಸಲಾತಿ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಭಾನುವಾರ ಘೋಷಣೆ ಮಾಡಿದ್ದಾರೆ.

ಕೋರಮಂಗಲದಲ್ಲಿರುವ ಕೆಎಸ್‌ಆರ್‌ಪಿ ಕ್ರೀಡಾಂಗಣದಲ್ಲಿ ನಡೆದ ಪೊಲೀಸ್‌ ಆರ್ಚರಿ ಚಾಂಪಿಯನ್‌ ಶಿಪ್‌ ಸಮಾರೋಪ ಸಮಾರಂಭದಲ್ಲಿ ವಿಜೇತ ಆರ್ಚರಿ ಕ್ರೀಡಾಪಟುಗಳಿಗೆ ಪ್ರಶಸ್ತಿ ಪ್ರಧಾನ ಮಾಡಿ ಮಾತನಾಡಿದರು.

ರಾಜ್ಯದಲ್ಲಿ ಮೊದಲ ಬಾರಿಗೆ ಆರ್ಚರಿ ಚಾಂಪಿಯನ್​ಶಿಪ್​ ಆಯೋಜಿಸಲಾಗಿದೆ. 24 ರಾಜ್ಯಗಳ ಪೊಲೀಸ್ ತಂಡ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದವು. ಸರ್ಕಾರದಿಂದ ‌ವಿಜೇತರಿಗೆ 25 ಲಕ್ಷ ರೂ. ಬಹುಮಾನ ನೀಡಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

(ಪ್ರಸ್ತುತ ಪೊಲೀಸ್ ಮತ್ತು ಅರಣ್ಯ ಇಲಾಖೆಗಳಲ್ಲಿ ಕ್ರೀಡಾ ಪಟುಗಳಿಗೆ ಶೇಕಡಾ ಮೂರರಷ್ಟು ಮೀಸಲಾತಿ ನೀಡಲಾಗುತ್ತಿದ್ದು, ಸರ್ಕಾರಿ ಇಲಾಖೆಗಳಲ್ಲಿ ಉದ್ಯೋಗಕ್ಕೆ ಶೇಕಡಾ ಎರಡರಷ್ಟು ನೀಡಲು ಸಕಾರಾತ್ಮಕವಾಗಿ ಪರಿಶೀಲಿಸಲಾಗುವುದು ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2023ರ ಅಕ್ಟೋಬರ್‌ 18 ರಂದು ಸಿಎಂ ಸಿದ್ದರಾಮಯ್ಯ ಹೇಳಿದ್ದರು. ಚೀನಾದಲ್ಲಿ ನಡೆದ 19ನೇ ಏಷ್ಯನ್ ಕ್ರೀಡಾಕೂಟದಲ್ಲಿ ಪದಕ ಗೆದ್ದ ರಾಜ್ಯದ ಕ್ರೀಡಾಪಟುಗಳು ತರಬೇತುದಾರರನ್ನು ಸನ್ಮಾನಿಸಿ, ನಗದು ಪುರಸ್ಕಾರ ನೀಡಿ ಮಾತನಾಡಿದ್ದರು.)

ಆರ್ಚರಿಯಲ್ಲಿ ಪುರುಷರ ಚಾಂಪಿಯನ್ ಶಿಪ್​​ನಲ್ಲಿ ITBP ತಂಡ 9 ಗೋಲ್ಡ್ ಮೆಡಲ್ ಪಡೆಯಿತು. ಆರ್ಚರಿಯಲ್ಲಿ ಮಹಿಳೆಯರ ಚಾಂಪಿಯನ್ ಶಿಪ್​​ನಲ್ಲಿ ರಾಜಸ್ಥಾನ ತಂಡ 7, ಆರ್ಚರಿಯಲ್ಲಿ ವೈಯಕ್ತಿಕ ಪುರುಷ ವಿಭಾಗದ ಚಾಂಪಿಯನ್- ರಜತ್ ಚೌಹಣ್ ರಾಜಸ್ಥಾನ ಡಿವೈಎಸ್ಪಿ (ಅರ್ಜುನ ಪ್ರಶಸ್ತಿ ವಿಜೇತ) 5 ಚಿನ್ನದ ಪದಕ, ಆರ್ಚರಿಯಲ್ಲಿ ವೈಯಕ್ತಿಕ ಮಹಿಳಾ ವಿಭಾಗದ ಚಾಂಪಿಯನ್ – ಅಮನ್ ದೀಪ್ ಕೌರ್- ರಾಜಸ್ಥಾನ 4 ಚಿನ್ನದ ಪದಕ ಗೆದ್ದುಕೊಂಡಿದ್ದಾರೆ.

ಸಮಾರಂಭದಲ್ಲಿ ಸಚಿವರಾದ ಡಾ.ಪರಮೇಶ್ವರ್, ​ರಾಮಲಿಂಗಾರೆಡ್ಡಿ, ನಾಗೇಂದ್ರ, ಡಿಜಿ&ಐಜಿಪಿ ಅಲೋಕ್ ಮೋಹನ್, ನಗರ ಪೊಲೀಸ್ ಆಯುಕ್ತ ದಯಾನಂದ‌ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಸಮಾರೋಪ ಸಮಾರಂಭದಲ್ಲಿ ಅಶ್ವದಳ, ಬಾಂಬ್ ನಿಷ್ಕ್ರೀಯ ದಳ, ಗರುಡ ಪಡೆಯಿಂದ ಅಣುಕು ಪ್ರದರ್ಶನ ನಡೆಯಿತು. ಬಾಂಬ್ ಇಟ್ಟಾಗ ಅದನ್ನ ಪತ್ತೆ ಮಾಡಿ ನಿಷ್ಕ್ರೀಯ ಮಾಡಿ ಅಜ್ಞಾತ ಸ್ಥಳದಲ್ಲಿ ಸ್ಪೋಟಿಸುವುದರ ಕುರಿತು, ಬಸ್ ಹೈಜಾಕ ಮಾಡಿದಾಗ ಐಎಸ್​​ಡಿ ಗರುಡ ಪಡೆಯ ಕ್ಷಿಪ್ರ ಕಾರ್ಯಚರಣೆ, ಬಸ್ ಹೈಜಾಕ್ ವೇಳೆ ಶ್ವಾನದಳವೂ ಹೇಗೆ ಕೆಲಸ ಮಾಡುತ್ತದೆ ಎಂಬುವುದರ ಬಗ್ಗೆ ಅಣುಕು ಪ್ರದರ್ಶನ ನಡೆಯಿತು.

andolanait

Recent Posts

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

20 mins ago

ಓದುಗರ ಪತ್ರ: ಬರ ಅಧ್ಯಯನ: ನೈಜ ಮೌಲ್ಯಮಾಪನ ನಡೆಯಲಿ

ರಾಜ್ಯದಲ್ಲಿ ಈ ಬಾರಿ ತೀವ್ರ ಬರ ಪರಿಸ್ಥಿತಿ ಇದೆ. ಮುಂಗಾರು ಮಳೆ ಕೈಕೊಟ್ಟಿದ್ದರಿಂದ ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಿದ…

21 mins ago

ಓದುಗರ ಪತ್ರ: ಗ್ರಾಹಕರಿಗೆ ಹೊರೆಯಾಗದಂತೆ ಹಾಲಿನ ದರ ಏರಿಸಿ

ರಾಜ್ಯ ಸರ್ಕಾರ ಹಾಲಿನ ದರವನ್ನು ಲೀಟರ್‌ಗೆ ೮ ರೂ. ಏರಿಕೆ ಮಾಡಲಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಹಾಲಿನ ದರವನ್ನು ಒಂದೇ…

23 mins ago

ಓದುಗರ ಪತ್ರ: ಅಂತರ್ಜಲ ಮರುಪೂರಣಕ್ಕೆ ನೈಜ ಯೋಜನೆ ಅಗತ್ಯ

ರಾಜ್ಯದಲ್ಲಿ ಬಳಕೆಯಲ್ಲಿರುವ ಒಟ್ಟು ೩೦ ಸಾವಿರ ಜಲಮೂಲಗಳಲ್ಲಿ ಕೇವಲ ಶೇ.೨೦ರಷ್ಟು ಮಾತ್ರ ಅಂತರ್ಜಲ ಮರುಪೂರಣಕ್ಕಾಗಿ ಬಳಕೆಯಾಗುತ್ತಿರುವುದು ಸರ್ಕಾರ ಹಾಗೂ ಸಾರ್ವಜನಿಕರ…

26 mins ago

ದಸರಾ ಸಂಭ್ರಮಕ್ಕೆ ಸುಗಮ ಸಂಚಾರದ ಸಾಥ್

ಟಿ. ಕೆ.ಹರೀಶ್, ಹಿರಿಯ ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಂಭ್ರಮದ ಜೊತೆಗೆ ಸ್ವಚ್ಛತೆ, ಸುರಕ್ಷತೆ ಮತ್ತು…

28 mins ago

ಮಳೆಯ ಕೊರತೆ ನಡುವೆಯೂ ಶೇ.75 ಬಿತ್ತನೆ ಸಾಧನೆ

ಕೆ.ಬಿ.ಶಂಶುದ್ದೀನ್ ಕುಶಾಲನಗರ ತಾಲ್ಲೂಕಿನಲ್ಲಿ ಭತ್ತ, ಮುಸುಕಿನ ಜೋಳ ಬೆಳೆಗೆ ರೈತರ ಒತ್ತು  ಕುಶಾಲನಗರ: ಮುಂಗಾರು ಮಳೆಯ ಪ್ರಮಾಣದಲ್ಲಿ ಕೊರತೆ ಕಂಡುಬಂದಿರುವುದರ…

46 mins ago