ರಾಜ್ಯ

ವಿಜಯಪುರ: ಕೊಳವೆ ಬಾವಿಗೆ ಬಿದ್ದಿದ್ದ 2 ವರ್ಷದ ಮಗು ರಕ್ಷಣೆ

ವಿಜಯಪುರ: ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಎಂಬ ಗ್ರಾಮದಲ್ಲಿ ಕೊಳವೆ ಬಾವಿಗೆ ಬಿದ್ದಿದ್ದ ಎರಡು ವರ್ಷದ ಮಗು ಸಾತ್ವಿಕ್‌ನನ್ನು ರಕ್ಷಣೆ ಮಾಡುವಲ್ಲಿ ಎನ್‌ಡಿಆರ್‌ಎಫ್‌, ಎಸ್‌ಡಿಆರ್‌ಎಫ್‌ ಹಾಗೂ ಅಗ್ನಿ ಶಾಮಕ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.

ನಿನ್ನೆ ಜಮೀನಿನಲ್ಲಿ ಆಟವಾಡುತ್ತಿದ್ದಾಗ ಜಮೀನಿಗೆ ಬಿದ್ದಿದ್ದ ಸಾತ್ವಿಕ್‌ಗಾಗಿ ತಾಯಿ ಸಾಕಷ್ಟು ಹುಡುಕಾಟ ನಡೆಸಿದ್ದರು. 500 ಅಡಿ ಆಳವಿರುವ ಕೊಳವೆ ಬಾವಿಗೆ ಬಿದ್ದು, 20 ಅಡಿ ಆಳದಲ್ಲಿ ಸಿಲುಕಿಕೊಂಡಿದ್ದ. ಮಗನಿಗಾಗಿ ಹುಡುಕಾಟ ನಡೆಸಿ ಕೊಳವೆ ಬಾವಿಗೆ ಲೈಟ್‌ ಬಿಟ್ಟು ನೋಡಿದಾಗ ಸಾತ್ವಿಕ್‌ ಕೊಳವೆ ಬಾವಿಯಲ್ಲಿ ಸಿಲುಕಿಕೊಂಡಿರುವುದು ತಿಳಿದುಬಂದಿದೆ.

ವಿಷಯ ತಿಳಿದ ಕೂಡಲೇ ಕಾರ್ಯಾಚರಣೆ ಆರಂಭವಾಗಿದೆ. ಎರಡು ಇಟಾಚಿ ಹಾಗೂ ಮೂರು ಜೆಸಿಬಿಗಳನ್ನು ಬಳಸಿ ಕೊಳವೆ ಬಾವಿ ಪಕ್ಕ ನೆಲವನ್ನು ಹಗೆದು ಮಗುವಿನ ರಕ್ಷಣಾಕಾರ್ಯವನ್ನು ಯಶಸ್ವಿಯಾಗಿ ಮಾಡಲಾಗಿದೆ. ಸತತವಾಗಿ 20 ಗಂಟೆಗಳ ಕಾರ್ಯಾಚರಣೆ ಬಳಿಕ ಮಗುವಿನ ರಕ್ಷಣೆ ಮಾಡುವಲ್ಲಿ ತಂಡಗಳು ಯಶಸ್ವಿಯಾಗಿವೆ. ಮಗುವನ್ನು ರಕ್ಷಿಸಿದ ಕೂಡಲೇ ಆಂಬುಲೆನ್ಸ್‌ ಮೂಲಕ ಇಂಡಿ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ.

andolana

Recent Posts

SIR ನೋಟಿಸ್: ವಿಚಾರಣೆಗೆ ತೆರಳುವಾಗ ಈ ದಾಖಲೆಗಳು ನಿಮ್ಮ ಬಳಿ ಇರಲಿ

ಬೆಂಗಳೂರು: SIR ನೋಟಿಸ್‌ಗಳ ವಿಚಾರಣೆ ಅಧಿಕೃತವಾಗಿ ಆರಂಭವಾಗಿದೆ. ವಿಚಾರಣೆಗೆ ಹಾಜರಾಗುವ ವೇಳೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಕೊಂಡೊಯ್ಯುವುದು ಮುಖ್ಯವಾಗಿದೆ. ನಿಮ್ಮ…

7 mins ago

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

5 hours ago

ಚಲನೆ ಕೇವಲ ವ್ಯಾಯಾಮವಲ್ಲ ಆರೋಗ್ಯದ ಶಕ್ತಿ

ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…

5 hours ago

ಒಂದು ಸೈನ್ಯದ ಆತ್ಮಾಹುತಿ ತಡೆದಿದ್ದರು ಅರಸು

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…

5 hours ago

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

16 hours ago