ಬೆಂಗಳೂರು: ನವೋದ್ಯಮ ಸ್ಥಾಪನೆಯಲ್ಲಿ ಕರ್ನಾಟಕ ರಾಜ್ಯ ಅತ್ಯುನ್ನತ ಸ್ಥಾನದಲ್ಲಿದ್ದು, ಮುಂದಿನ ಐದು ವರ್ಷಗಳಲ್ಲಿ 20 ಲಕ್ಷ ಉದ್ಯೋಗ ಸೃಷ್ಠಿಸುವ ಗುರಿ ಹೊಂದಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ನಗರದ ಅರಮನೆ ಮೈದಾನದಲ್ಲಿ ಕಳೆದ ಮೂರು ದಿನಗಳಿಂದ ನಡೆದ ಜಾಗತಿಕ ಹೂಡಿಕೆದಾರರ ಸಮಾವೇಶ ಮುಕ್ತಾಯ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.
ರಾಜ್ಯ ಸರ್ಕಾರದ ಹೊಸ ಕೈಗಾರಿಕೆ ನೀತಿಯೂ ಸುಮಾರು 7.5 ಲಕ್ಷ ಕೋಟಿ ರೂ. ಹೂಡಿಕೆಗಳನ್ನು ಅಕರ್ಷಿಸಲಿದೆ. ಸರ್ಕಾರದ 30ಕ್ಕೂ ಹೆಚ್ಚು ಇಲಾಖೆಗಳ ಮೂಲಕ 150ಕ್ಕೂ ಹೆಚ್ಚಿನ ವ್ಯಾಪಾರ ವೇದಿಕೆ ಸೃಷ್ಠಿಗೊಳ್ಳಲಿದ್ದು, ಉದ್ದಿಮೆ ಪ್ರೋತ್ಸಾಹಿಸುವ ಸಲುವಾಗಿ ಏಕಕಂಡಿ ಗವಾಕ್ಷಿ ಸೇವೆಯನ್ನು ಪರಿಚಯಿಸಲಾಗುವುದು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಕೈಗಾರಿಕಾ ಸಚಿವ ಎಂಬಿ ಪಾಟೀಲ್, ಕೇಂದ್ರ ಸಚಿವ ವಿ. ಸೋಮಣ್ಣ, ಕೇಂದ್ರದ ಮಾಜಿ ಸಚಿವ ಶಶಿ ತರೂರ್ ಸೇರಿದಂತೆ ಇನ್ನಿತರ ಸಚಿವರು ಶಾಸಕರು ಪಾಲ್ಗೊಂಡಿದ್ದರು.
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…
ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…
ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…
ಇತ್ತೀಚೆಗೆ ಮೈಸೂರಿನ ಪ್ರತಿಷ್ಠಿತ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ನಡೆದ ಅಂತರ ಕಾಲೇಜು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಭಾಗವಹಿಸಿದ್ದೆ. ನಗರದ ಸರ್ಕಾರಿ ಹಾಗೂ…