ಬಳ್ಳಾರಿ: ಜಿಲ್ಲೆಯ ಸಂಡೂರು ತಾಲ್ಲೂಕಿನ ಕುರೇಕುಪ್ಪ ಫಾರ್ಮ್‌ನಲ್ಲಿ ಹಕ್ಕಿಜ್ವರ ಪತ್ತೆಯಾಗಿದ್ದು, ಸಾವಿರಾರು ಕೋಳಿಗಳು ಸಾವನ್ನಪ್ಪಿವೆ.
ಕುರೇಕುಪ್ಪ ಜಾನುವಾರು ಸಂವರ್ಧನೆ ಮತತು ತರಬೇತಿ ಕೇಂದ್ರದಲ್ಲಿನ ಕೋಳಿಗಳಲ್ಲಿ ಹಕ್ಕಿಜ್ವರ ಕಾಣಿಸಿಕೊಂಡಿದ್ದು, ಒಂದು ವಾರದ ಅಂತರದಲ್ಲಿ ಹಕ್ಕಿಜ್ವರದಿಂದ 2000 ಕೋಳಿಗಳು ಸಾವನ್ನಪ್ಪಿರುವುದು ದೃಢಪಟ್ಟಿದೆ.
ಕಳೆದ ಹತ್ತು ದಿನಗಳಿಂದ ಪ್ರತಿದಿನ ಮೂವತ್ತು ಕೋಳಿಗಳು ಸಾಯುತ್ತಿವೆ. ಈ ಹಿನ್ನೆಲೆಯಲ್ಲಿ ಅನುಮಾನಗೊಂಡ ಆರೋಗ್ಯ ಇಲಾಖೆಯು ಸಾವನ್ನಪ್ಪಿರುವ ಕೋಳಿಗಳ ಸ್ಯಾಂಪಲ್‌ನ್ನು ಭೋಪಾಲ್‌ನಲ್ಲಿನ ಲ್ಯಾಬ್‌ಗೆ ಕಳುಹಿಸಲಾಗಿತ್ತು. ಇದೀಗ ಕೋಳಿಗಳಲ್ಲಿ ಹಕ್ಕಿಜ್ವರ ಇರುವುದು ದೃಢಪಟ್ಟಿದೆ.
ಕೇಂದ್ರದ ಒಂದು ಕಿ.ಮೀ ವ್ಯಾಪ್ತಿಯಲ್ಲಿ ಯಾವುದೇ ಹಳ್ಳಿಗಳು, ಜನವಸತಿ ಪ್ರದೇಶಗಳು ಇಲ್ಲ. 10 ಕಿ.ಮೀ ವ್ಯಾಪ್ತಿಯಲ್ಲಿ ಯಾವುದೇ ಖಾಸಗಿ ಫಾರ್ಮ್‌ಗಳು ಸಹ ಇಲ್ಲ. ಇದರಿಂದ ಹಕ್ಕಿಜ್ವರ ಬೇರೆಡೆಗೆ ಹರಡುವ ಸಾಧ್ಯತೆ ಕಡಿಮೆಯಿದೆ ಎಂದು ಹೇಳಲಾಗುತ್ತಿದ್ದು, ಆದರೂ ಜನತೆ ಎಚ್ಚರಿಕೆ ವಹಿಸಬೇಕು ಎಂದು ಆರೋಗ್ಯ ಇಲಾಖೆ ಸೂಚನೆ ನೀಡಿದೆ.





