ಬೆಂಗಳೂರು : ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಹುಮತ ಗಳಿಸಿ ಸ್ವಂತ ಶಕ್ತಿಯ ಮೇಲೆ ರಾಜ್ಯದ ಅಧಿಕಾರದ ಚುಕ್ಕಾಣಿ ಹಿಡಿಯಬೇಕು ಎಂಬ ಗುರಿ ಹೊಂದಿರುವ ಜೆಡಿಎಸ್ ಮೂರು ಹಂತಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲು ಉದ್ದೇಶಿಸಿದೆ.
ಮಳೆಯಿಂದಾಗಿ ಮುಂದೂಡಿದ್ದ ಬಹು ನಿರೀಕ್ಷಿತ ಪಂಚರತ್ನ ರಥಯಾತ್ರೆ ಪ್ರಾರಂಭದ ದಿನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲು ನಿರ್ಧರಿಸಿದೆ. ಸಂಭವನೀಯ ಅಭ್ಯರ್ಥಿಗಳಿಗೆ ಎರಡು-ಮೂರು ಹಂತದ ಕಾರ್ಯಗಾರ ನಡೆಸಿದ ಬಳಿಕ ಚುನಾವಣಾ ತಂತ್ರಗಾರಿಕೆ ಬಗ್ಗೆ ಪರಿಣಿತರಿಂದ ರಹಸ್ಯ ತರಬೇತಿಯನ್ನು ಈಗಾಗಲೇ ನೀಡಿದೆ.
ರಾಜ್ಯ ವಿಧಾನಸಭೆ ಚುನಾವಣೆಯ 126 ಸಂಭವನೀಯ ಅಭ್ಯರ್ಥಿಗಳಿಗೆ ರಹಸ್ಯ ತರಬೇತಿ ನೀಡಿ ಚುನಾವಣೆ ಸಿದ್ಧತೆಯ ಬಗ್ಗೆ ಮಾರ್ಗದರ್ಶನ ಮಾಡಿದ್ದರೂ ಮೊದಲ ಪಟ್ಟಿಯಲ್ಲಿ 80-90 ಅಭ್ಯರ್ಥಿಗಳ ಹೆಸರನ್ನ ಬಿಡುಗಡೆ ಮಾಡಲು ನಿರ್ಣಯಿಸಿದೆ.
ಎಲ್ಲಾ ರೀತಿಯಿಂದಲೂ ಸಮರ್ಥರಾಗಿರುವ ಅಭ್ಯರ್ಥಿಗಳಿಗೆ ಚುನಾವಣೆಯಲ್ಲಿ ಆದ್ಯತೆ ನೀಡಲಾಗುತ್ತದೆ. ಬಹಳಷ್ಟು ಕ್ಷೇತ್ರಗಳಲ್ಲಿ ಹೊಸಬರಿಗೆ ಅವಕಾಶ ಕಲ್ಪಿಸಲಾಗುದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.
2023ರ ವಿಧಾನಸಭೆ ಚುನಾವಣೆಯಲ್ಲಿ 123 ಕ್ಷೇತ್ರಗಳಲ್ಲಿ ಗೆಲ್ಲಬೇಕು ಎಂಬ ಗುರಿ ಹೊಂದಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ನಿರಂತರ ಸಭೆ, ಸಮಾಲೋಚನೆ ಮೂಲಕ ಚುನಾವಣೆ ಸಿದ್ಧತೆಯಲ್ಲಿ ತೊಡಗಿದ್ದಾರೆ.
ಹೀಗಾಗಿ ರಾಷ್ಟ್ರೀಯ ಪಕ್ಷಗಳಿಗೆ ಸರಿಸಮನಾದ ಪ್ರಚಾರ ಆರಂಭಿಸುವುದಲ್ಲದೆ, ಇತರೆ ರಾಜಕೀಯ ಪಕ್ಷಗಳಿಗಿಂತ ಮುಂಚೆಯೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಜೆಡಿಎಸ್ ಮುಂದಾಗಿದೆ. ಸಂಭವನೀಯ ಅಭ್ಯರ್ಥಿಗಳಿಗೆ ಚುನಾವಣೆ ಸಿದ್ಧತೆ ಹಾಗೂ ಪಕ್ಷ ಸಂಘಟನೆ ಕೈಗೊಳ್ಳುವಂತೆ ನಿರ್ದೇಶನ ನೀಡಲಾಗಿದೆ ಎಂದು ಪಕ್ಷದ ಮೂಲಗಳು ಹೇಳಿವೆ.
ಪೂರ್ವ ನಿಗದಿಯಂತೆ ಗಡಿನಾಡು ಕೋಲಾರ ಜಿಲ್ಲೆಯ ಮುಳಬಾಗಿಲು ವಿಧಾನಸಭಾ ಕ್ಷೇತ್ರದಿಂದ ಪಂಚರತ್ನ ರಥಯಾತ್ರೆಯು ನ.14ರಿಂದ ಆರಂಭಗೊಳ್ಳಲಿದೆ. ಅಂದು ಮಧ್ಯಾಹ್ನ ನಡೆಯುವ ಬಹಿರಂಗ ಸಮಾವೇಶದಲ್ಲಿ ವಿಧಾನಸಭೆ ಚುನಾವಣೆಯ ಸಂಭವನೀಯ ಅಭ್ಯರ್ಥಿಗಳಿಂದ ಪಕ್ಷಾಂತರ ಮಾಡುವುದಿಲ್ಲ ಎಂಬ ಪ್ರಮಾಣವನ್ನು ಮಾಡಿಸಲು ತೀರ್ಮಾನಿಸಲಾಗಿದೆ.
ಪಂಚರತ್ನ ಯೋಜನೆಗಳನ್ನು ಜನರ ಮುಂದಿಟ್ಟು ವಿಧಾನಸಭೆ ಚುನಾವಣೆಯ ಪ್ರಚಾರವನ್ನು ಕೈಗೊಳ್ಳಲಾಗುತ್ತದೆ. ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು, ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸೇರಿದಂತೆ ಪಕ್ಷದ ಎಲ್ಲ ನಾಯಕರು, ಮುಖಂಡರು ಹಾಗೂ ಶಾಸಕರು ಭಾಗವಹಿಸಲಿದ್ದಾರೆ.
ಈ ರಥಯಾತ್ರೆಯೂ ನ.14ರಿಂದ ಡಿಸೆಂಬರ್ 6ರವರೆಗೆ 23 ದಿನಗಳ ಕಾಲ ಮೊದಲ ಹಂತದಲ್ಲಿ ನಡೆಯಲಿದೆ. ಯಾತ್ರೆ ಸಂದರ್ಭದಲ್ಲಿ ಕುಮಾರಸ್ವಾಮಿ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ. ಜತೆಗೆ ಸರ್ಕಾರ ಯಾವ ರೀತಿಯ ಕಾರ್ಯಕ್ರಮ ಹಾಗೂ ಯೋಜನೆಗಳನ್ನು ರೂಪಿಸಬೇಕು ಎಂಬ ಬಗ್ಗೆ ಜನಾಭಿಪ್ರಾಯ ಪಡೆಯಲಾಗುತ್ತದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.
- ಮುಖಪುಟ
- ಮೈಸೂರು
- ಜಿಲ್ಲೆಗಳು
- ರಾಜ್ಯ
- ದೇಶ- ವಿದೇಶ
- ರಾಜಕೀಯ
- ಅಪರಾಧ
- ಮಹಿಳೆ
- ಕೃಷಿ
- ವಿಜ್ಞಾನ ತಂತ್ರಜ್ಞಾನ
- ಕ್ರೀಡೆ
- ವಾಣಿಜ್ಯ
- ಚಿತ್ರಸಂತೆ
- ವಿಶೇಷ
- ಆಂದೋಲನ ಪುರವಣಿ
- ಎಡಿಟೋರಿಯಲ್
- ಆಂದೋಲನ 50
- ಜಾಹೀರಾತು
- Cricket
Subscribe to Updates
Get the latest creative news from FooBar about art, design and business.
2023ರ ವಿಧಾನಸಭೆ ಚುನಾವಣೆಗೆ JDS ಭರ್ಜರಿ ತಯಾರಿ : ರಥಯಾತ್ರೆಯ ಮೊದಲ ದಿನವೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ನಿರ್ಧಾರ
Previous Articleಜೆಡಿಎಸ್ ಪಂಚರತ್ನ ರಥಯಾತ್ರೆಗೆ ಮಳೆ ಅಡ್ಡಿ : ನ.19ಕ್ಕೆ ಮುಂದೂಡಿಕೆ