ಮಂಡ್ಯ: ಮುಂಬರುವ 2024ರ ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಿಂದಲೇ ಸ್ಪರ್ಧೆ ಮಾಡುವುದು ಖಚಿತ. ಮಂಡ್ಯ ಕ್ಷೇತ್ರ ಬಿಟ್ಟು ಎಲ್ಲಿಯೂ ಹೋಗುವುದಿಲ್ಲ ಎಂದು ಶನಿವಾರ ಸಂಸದೆ ಸುಮಲತಾ ಅಂಬರೀಶ್ ಹೇಳಿದರು.
ಮದ್ದೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು ಮುಂಬರುವ ಲೋಕಸಭಾ ಚುನಾವಣೆಯಲ್ಲಿಯೂ ಸ್ಪರ್ಧೆ ಮಾಡುತ್ತೇನೆ. ಈ ಬಗ್ಗೆ ಮುಂದೆ ಎಲ್ಲಾ ವಿಷಯವನ್ನೂ ತಿಳಿಸುತ್ತೇನೆ ಎಂದರು.
ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಹಾಗೂ ಕ್ಷೇತ್ರ ಹಂಚಿಕೆ ಕುರಿತು ಪ್ರತಿಕ್ರಿಯಿಸಿ ಮೈತ್ರಿ ವಿಚಾರ ನನಗೆ ಗೊತ್ತಿಲ್ಲ, ಆ ಬಗ್ಗೆ ನಾನು ಪ್ರತಿಕ್ರಿಯೆ ನೀಡಲ್ಲ ಎಂದು ಹೇಳಿದರು.
ಮಂಡ್ಯ ಸೇರಿದಂತೆ ರಾಜ್ಯದಲ್ಲಿನ ಬರ ಪರಿಸ್ಥಿತಿ ಕುರಿತು ಸಂಸತ್ ಅಧಿವೇಶನದ ಶೂನ್ಯವೇಳೆಯಲ್ಲಿ ಕೇಂದ್ರ ಸರ್ಕಾರದ ಗಮನ ಸೆಳೆಯುವ ಪ್ರಯತ್ನ ಮಾಡಿದ್ದೇನೆ. ಕಾವೇರಿ ವಿಚಾರ ಎಂದು ಬಂದಾಗ ನಾವು ಒಬ್ಬರನ್ನು ದೂಷಿಸುವುದು ಸರಿಯಲ್ಲ. ನ್ಯಾಯಾಲಯಗಳಲ್ಲಿ ಎಂದೂ ಕರ್ನಾಟಕಕ್ಕೆ ನ್ಯಾಯ ದೊರೆತಿಲ್ಲ. ಎರಡೂ ರಾಜ್ಯ ಸರ್ಕಾರಗಳು ಕುಳಿತು ಮಾತನಾಡಿ ಈ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…
ಬೆಳಗಾವಿ : ದ್ವೇಷ ಭಾಷಣಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದ್ದು, ಈ…