Mysore
29
clear sky

Social Media

ಶನಿವಾರ, 31 ಜನವರಿ 2026
Light
Dark

2026ರ ಐಪಿಎಲ್‌ ಬೆಂಗಳೂರಿನಲ್ಲೇ ಫಿಕ್ಸ್: ಡಿಸಿಎಂ ಡಿ.ಕೆ.ಶಿವಕುಮಾರ್‌ ಘೋಷಣೆ 

ಬೆಂಗಳೂರು: 2026ರ ಐಪಿಎಲ್‌ಗೆ ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಘೋಷಣೆ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಕೆಎಸ್‌ಸಿಎ ಚುನಾವಣೆ ಮತದಾನದ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಕ್ರಿಕೆಟ್‌ ಲವರ್.‌ ಆರ್‌ಸಿಬಿ ನಮ್ಮ ಹೆಮ್ಮೆ. ಯಾವುದೇ ಕಾರಣಕ್ಕೆ ನಮ್ಮಿಂದು ಐಪಿಎಲ್‌ ಕೈ ತಪ್ಪೋದಿಲ್ಲ. ಬೆಂಗಳೂರಿನಲ್ಲೇ ನಡೆಯುತ್ತದೆ ಎಂದು ಹೇಳಿದರು.

ಬೆಂಗಳೂರಿನಲ್ಲಿ ಏನು ಅನಾಹುತ ಆಗಿದೆ, ಅದೆಲ್ಲವನ್ನು ತಪ್ಪಿಸಿ ಬೆಂಗಳೂರು ಗೌರವ ಉಳಿಸುವ ಕೆಲಸ ಮಾಡುತ್ತೇವೆ. ಕಾನೂನು ಚೌಕಟ್ಟಿನಲ್ಲಿ ಕ್ರೌಡ್‌ ಮ್ಯಾನೇಜ್ಮೆಂಟ್‌ ಗಮನದಲ್ಲಿಟ್ಟುಕೊಂಡು ಸ್ಟೇಡಿಯಂ ಬಳಸುತ್ತೇವೆ. ಇದಕ್ಕೆ ಪರ್ಯಾಯವಾಗಿ ಬೇರೆ ದೊಡ್ಡ ಸ್ಟೇಡಿಯಂ ಮಾಡುತ್ತೇವೆ ಎಂದು ಹೇಳಿದರು.

ಇನ್ನು ಮುಂದಕ್ಕೆ ಯಾವುದೇ ಐಪಿಎಲ್‌ ಬೆಂಗಳೂರಿನಿಂದ ಶಿಫ್ಟ್‌ ಆಗೋದಕ್ಕೆ ಬಿಡಲ್ಲ. ಇಲ್ಲೇ ನಡೆಸುತ್ತೇವೆ. ಇದು ಬೆಂಗಳೂರಿನ ಗೌರವ. ಅದನ್ನು ಕಾಪಾಡಿಕೊಳ್ಳುತ್ತೇವೆ. ಮುಂದಕ್ಕೆ ಏನೇನಿದೆ ಎಲ್ಲದಕ್ಕೂ ಅವಕಾಶ ಕೊಡುತ್ತೇವೆ ಎಂದು ಭರವಸೆ ನೀಡಿದರು.

Tags:
error: Content is protected !!