Mysore
18
broken clouds

Social Media

ಶನಿವಾರ, 31 ಜನವರಿ 2026
Light
Dark

ಗೃಹ ಬಳಕೆ, ಕೈಗಾರಿಕೆಗೆ ದಿನದ 24 ಗಂಟೆಯೂ ವಿದ್ಯುತ್

ಬೆಳಗಾವಿ : ಮುಂದಿನ ಮಾರ್ಚ್‌ನಿಂದ ಎರಡೂವರೆ ಸಾವಿರ ಮೆಗಾ ವ್ಯಾಟ್ ಸೌರಶಕ್ತಿ ವಿದ್ಯುತ್ ಸೇರ್ಪಡೆಯಾಗುತ್ತಿದ್ದು, ಗೃಹ ಬಳಕೆ ಹಾಗೂ ಕೈಗಾರಿಕೆಗಳಿಗೆ ದಿನದ 24 ಗಂಟೆಯೂ ವಿದ್ಯುತ್ ಪೂರೈಸಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಚಾರ್ಜ್ ಹೇಳಿದ್ದಾರೆ.

ವಿಧಾನಸಭೆಯ ಪ್ರಶ್ನೋತ್ತರದ ಅವಧಿಯಲ್ಲಿ ಆನೇಕಲ್ ಕ್ಷೇತ್ರದ ಶಾಸಕ ಬಿ.ಶಿವಣ್ಣ ಅವರು, ಕೃಷಿ ಪಂಪ್ ಸೇಟ್‌ಗಳಿಗೆ ನಿರಂತರವಾಗಿ ಹಗಲಿನ ವೇಳೆ 7 ಗಂಟೆ ವಿದ್ಯುತ್ ಪೂರೈಸುವುದಾಗಿ ಸರ್ಕಾರ ಹೇಳಿದೆ. ಆದರೆ, ವಿದ್ಯುತ್ ಪೂರೈಕೆ ಸಮರ್ಪಕವಾಗಿಲ್ಲ. ನಮ್ಮಲ್ಲಿ ಹೆಚ್ಚು ವಿದ್ಯುತ್ ಇದೆ. ಏಳು ಗಂಟೆ ಬದಲಾಗಿ ಕೃಷಿ ಪಂಪ್ ಸೆಟ್‌ಗಳಿಗೆ ೧೦ ಗಂಟೆ ಪೂರೈಸಬೇಕು ಎಂದು ಒತ್ತಾಯಿಸಿದರು.

ಸಚಿವ ಕೆ.ಜೆ.ಜಾರ್ಜ್ ಉತ್ತರ ನೀಡಿ, ಆನೇಕಲ್ ತಾಲ್ಲುಕಿನಲ್ಲಿ ೨೨ ಕೃಷಿ ಫೀಡರ್‌ಗಳಿವೆ. ಹಗಲಿನ ವೇಳೆ ನಿರಂತರವಾಗಿ ಏಳು ಗಂಟೆ ವಿದ್ಯುತ್ ಪೂರೈಕೆಯಾಗುತ್ತಿದೆ. ಸರ್ಜಾಪುರ ಮತ್ತು ಅತ್ತಿಬೆಲೆಯಲ್ಲಿ ಕಾಮಗಾರಿ ನಡೆಯುತ್ತಿರುವುದರಿಂದಾಗಿ ಒಂದಿಷ್ಟು ವ್ಯತ್ಯಯವಾಗಿದೆ. ರೈತರಿಗೆ ಏಳು ಗಂಟೆ ನಿರಂತರ ವಿದ್ಯುತ್ ಪೂರೈಸಲು ೨೦ ಸಾವಿರ ಕೋಟಿ ರೂಪಾಯಿ ಸಬ್ಸಿಡಿ ನೀಡಲಾಗುತ್ತಿದೆ ಎಂದರು.

ಕುಸುಮ್-ಸಿ ಯೋಜನೆಯಡಿ ೨,೫೦೦ ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆಯಾಗುತ್ತಿದ್ದು, ಮಾರ್ಚ್ ವೇಳೆಗೆ ಲಭ್ಯವಾಗಲಿದೆ. ಸ್ಥಳೀಯವಾಗಿಯೇ ವಿದ್ಯುತ್ ಉತ್ಪಾದಿಸಿ, ಅಲ್ಲಿಯೇ ಪೂರೈಸಲಾಗುತ್ತದೆ. ಗೃಹ ಬಳಕೆ ಮತ್ತು ಕೈಗಾರಿಕೆಗಳಿಗೆ ದಿನದ ೨೪ ಗಂಟೆಯೂ ವಿದ್ಯುತ್ ಪೂರೈಸುವುದಾಗಿ ಸಚಿವರು ತಿಳಿಸಿದರು.

Tags:
error: Content is protected !!