45 ವರ್ಷದ ವ್ಯಕ್ತಿಯನ್ನು ಮದುವೆಯಾದ 25ರ ಯುವತಿ; ಫೋಟೊ ವೈರಲ್

ತುಮಕೂರು: ಜಿಲ್ಲೆಯ ಕುಣಿಗಲ್‌ ತಾಲ್ಲೂಕಿನ ಚೌಡನಕುಪ್ಪೆ ಗ್ರಾಮದಲ್ಲಿ 45 ವರ್ಷದ ವ್ಯಕ್ತಿಯ ಜೊತೆ 25ರ ಯುವತಿ ಮದುವೆಯಾಗಿದ್ದು, ಫೋಟೊ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಶಂಕರಣ್ಣ ಮತ್ತು ಮೇಘನಾ ವೈವಾಹಿಕ ಜೀವನಕ್ಕೆ ಕಾಲಿಟ್ಟ ಜೋಡಿಗಳು. ಮೇಘನಾ ಸಂತೆಮಾವತ್ತೂರು ಗ್ರಾಮದ ನಿವಾಸಿಯಾಗಿದ್ದು, ಈಕೆಗೆ ಬೇರೆಯವರ ಜೊತೆ ಮೊದಲೇ ಮದುವೆಯಾಗಿದೆ ಎಂದು ಹೇಳಲಾಗುತ್ತಿದೆ. ಆದರೆ ಪತಿ ಕಳೆದ ಎರಡು ವರ್ಷಗಳಿಂದ ಕಾಣೆಯಾಗಿದ್ದು, 45 ವರ್ಷದ ವ್ಯಕ್ತಿಯನ್ನು ಮದುವೆಯಾಗಿದ್ದಾಳೆ ಎನ್ನಲಾಗುತ್ತಿದೆ.

ಮೇಘನಾ ಸ್ವತಃ ಶಂಕರಣ್ಣ ಬಳಿ ಹೋಗಿ ಮದುವೆಯಾಗಿ ಅಂತಾ ಕೇಳಿಕೊಂಡಿದ್ದಾಳೆ. ಈ ವೇಳೆ ಇದುವರೆಗೂ ಮದುವೆಯಾಗದ ಶಂಕರಣ್ಣ ಯುವತಿಯನ್ನು ಒಪ್ಪಿ ಸಮೀಪದ ದೇವಾಲಯದಲ್ಲಿ ಮದುವೆಯಾಗಿದ್ದಾರೆ. ಇವರಿಬ್ಬರ ವಯಸ್ಸಿನ ಅಂತರದ ಮದುವೆ ವಿಚಾರ ಈಗ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಗ್ರಾಸವಾಗಿದೆ.

× Chat with us