ರಾಜ್ಯ

ಬೆಂಗಳೂರಿನಲ್ಲಿ 2500 ಕೋಟಿ ರೂ. ಮೌಲ್ಯದ 103 ಎಕರೆ ಅರಣ್ಯ ಒತ್ತುವರಿ ತೆರವು

ಮಾರಸಂದ್ರದಲ್ಲಿ 40 ಕೋಟಿ ರೂ. ಮೌಲ್ಯದ ಅರಣ್ಯ ಭೂಮಿ ಮರು ವಶ
ಬೆಂಗಳೂರಲ್ಲಿ ಮತ್ತೆರೆಡು ಎಕರೆ ಅರಣ್ಯ ಒತ್ತುವರಿ ತೆರವು
ಬೆಂಗಳೂರು: ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವರ ಸ್ಪಷ್ಟ ಸೂಚನೆ ಹಿನ್ನೆಲೆಯಲ್ಲಿ ರಾಜ್ಯ ರಾಜಧಾನಿಯಲ್ಲಿ ಅರಣ್ಯ ಭೂಮಿ ಒತ್ತುವರಿ ತೆರವು ಕಾರ್ಯಾಚರಣೆ ಮುಂದುವರಿದಿದ್ದು ಮತ್ತೆರೆಡು ಎಕರೆ ಅರಣ್ಯ ಭೂಮಿ ಮರು ವಶಕ್ಕೆ ಪಡೆಯಲಾಗಿದೆ.

ಯಲಹಂಕ ಬಳಿಯ ಮಾರಸಂದ್ರದ ಗಸ್ತು ಸರ್ವೆ ನಂ.182ರಲ್ಲಿ ಒತ್ತುವರಿ ಮಾಡಲಾಗಿದ್ದ 2 ಎಕರೆ 10 ಗುಂಟೆ ಅರಣ್ಯ ಜಮೀನನ್ನು ತೆರವು ಮಾಡಿ ಅಲ್ಲಿ ಸ್ಥಳೀಯ ಜಾತಿಯ ಸಸಿಗಳನ್ನು ನೆಟ್ಟು ಅರಣ್ಯ ಬೆಳೆಸುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ.

ಭೈರಾರೆಡ್ಡಿ ಎಂಬುವವರು ಮಾರಸಂದ್ರದ ಮೀಸಲು ಅರಣ್ಯ ಸರ್ವೆ ನಂ182ರಲ್ಲಿ ಅರಣ್ಯ ಇಲಾಖೆಗೆ ಸೇರಿದ 2.10 ಎಕರೆ ಜಮೀನು ಒತ್ತುವರಿ ಮಾಡಿದ್ದರು. ಈ ಸಂಬಂಧ ಎಫ್.ಐ.ಆರ್. ದಾಖಲಿಸಿಕೊಂಡಿದ್ದ ಬೆಂಗಳೂರು ನಗರ ಜಿಲ್ಲೆಯ ಅರಣ್ಯಾಧಿಕಾರಿಗಳು ಜೆಸಿಬಿಗಳೊಂದಿಗೆ ಕಾರ್ಯಾಚರಣೆ ನಡೆಸಿ ಭೂಮಿಯನ್ನು ವಶಕ್ಕೆ ಪಡೆದಿದ್ದಾರೆ. ಇದರ ಮಾರುಕಟ್ಟೆ ಮೌಲ್ಯ ಸುಮಾರು 40 ಕೋಟಿ ರೂ.ಗೂ ಅಧಿಕ ಎಂದು ಹೇಳಲಾಗಿದೆ.

ಬೆಂಗಳೂರಿನಲ್ಲಿ 1 ವರ್ಷದಲ್ಲಿ 103 ಎಕರೆ ಅರಣ್ಯ ಒತ್ತುವರಿ ತೆರವು:
ಬೆಂಗಳೂರಿನಲ್ಲಿ ಭೂಮಿಗೆ ಬಂಗಾರದ ಬೆಲೆ ಇದ್ದು, ರಾಜಧಾನಿಯಲ್ಲಿ ಒತ್ತುವರಿ ಮಾಡಿರುವ ಅರಣ್ಯ ಭೂಮಿಯ ಒತ್ತುವರಿಗೆ ಕ್ರಮ ವಹಿಸುವಂತೆ ಅರಣ್ಯ ಸಚಿವರು ಸ್ಪಷ್ಟ ಸೂಚನೆ ನೀಡಿದ್ದು, ಅಧಿಕಾರಿಗಳು ಈವರೆಗೆ 103 ಎಕರೆಗೂ ಹೆಚ್ಚು ಒತ್ತುವರಿ ತೆರವುಗೊಳಿಸಿದ್ದಾರೆ.

ಕಗ್ಗಲಿಪುರ ವಲಯದ ಬಿಎಂ ಕಾವಲಿನಲ್ಲಿ 27.2 ಎಕರೆ, ತುರಹಳ್ಳಿ ಅರಣ್ಯ ವ್ಯಾಪ್ತಿಯ ಮೈಲಸಂದ್ರ, ಬಿ.ಎಂ. ಕಾವಲ್ ಮತ್ತು ಕೆಂಚೇನಹಳ್ಳಿಯಲ್ಲಿ 16.9 ಎಕರೆ, ಸೂಲಿಕೆರೆ ಮೀಸಲು ಅರಣ್ಯ ಪ್ರದೇಶದ ಸೂಲಿಕೆರೆಯಲ್ಲಿ 2.5 ಎಕರೆ, ಯು.ಎಂ. ಕಾವಲ್ ನಲ್ಲಿ 1 ಎಕರೆ, ಆನೆಕಲ್ ವಲಯದ ಭೂತನಹಳ್ಳಿ, ರಾಗಿಹಳ್ಳಿಯಲ್ಲಿ 14.4 ಎಕರೆ, ಬೆಂಗಳೂರು, ಜಾರಕಬಂಡೆ ಕಾವಲು, ಪೀಣ್ಯದಲ್ಲಿ 18 ಎಕರೆ, ಯಲಹಂಕ ವಲಯದ ಕೊತ್ತನೂರಿನಲ್ಲಿ 17.3 ಎಕರೆ, ಮಾರಸಂದ್ರದಲ್ಲಿ 2.10 ಎಕರೆ, ಇತರೆ 3 ಎಕರೆ 6 ಗುಂಟೆ ಒತ್ತುವರಿ ತೆರವು ಮಾಡಲಾಗಿದೆ.

ತೆರವು ಮಾಡಲಾಗಿರುವ ಭೂಮಿಯ ಒಟ್ಟು ಮೌಲ್ಯ 3000 ಸಾವಿರ ಕೋಟಿ ರೂ.ಗೂ ಅಧಿಕವಾಗಿದೆ. ಇದಲ್ಲದೆ ಕೊತ್ತನೂರಿನಲ್ಲಿ ಇನ್ನೂ48ರಲ್ಲಿ ಸುಮಾರು 700 ಕೋಟಿ ರೂ. ಬೆಲೆ ಬಾಳುವ 22 ಎಕರೆ 08 ಗುಂಟೆ ಅರಣ್ಯ ಭೂಮಿ ಒತ್ತುವರಿಯಾಗಿದ್ದು, ಇದನ್ನು ತೆರವು ಮಾಡಲು ಕಾನೂನು ಕ್ರಮಕ್ಕ ಮುಂದಾಗುವಂತೆ ಕೂಡ ಈಶ್ವರ ಖಂಡ್ರೆ ಈಗಾಗಲೇ ಸೂಚನೆ ನೀಡಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಭಾರತ-ಕೆನಡಾ ನಡುವೆ ಎಲೆಕ್ಟ್ರಿಕ್ ವಾಹನ ಒಪ್ಪಂದ : ಎಚ್‌ಡಿಕೆ ನೇತೃತ್ವದಲ್ಲಿ ದ್ವಿಪಕ್ಷೀಯ ಚರ್ಚೆ

ಹೊಸದಿಲ್ಲಿ : ನಿರ್ಣಾಯಕ ಅಪರೂಪದ ಖನಿಜಗಳು, ಇವಿ ಚಲನಶೀಲತೆ, ಉತ್ಪಾದನೆ ಮತ್ತು ಸುಸ್ಥಿರ ಕೈಗಾರಿಕಾ ಅಭಿವೃದ್ಧಿ ಕ್ಷೇತ್ರಗಳಲ್ಲಿನ ಸಹಕಾರವನ್ನು ಬಲಪಡಿಸಲು…

1 min ago

ಮುಡಾ ಕೇಸ್‌ನಲ್ಲಿ ಸಿಎಂʼಗೆ ನಿರಾಳ : ʻಸತ್ಯ ಮೇವ ಜಯತೆʻ ಫ್ಲೇ ಕಾರ್ಡ್‌ ಹಿಡಿದು ಕಾಂಗ್ರೆಸ್‌ ಸಂಭ್ರಮ

ಮೈಸೂರು : ಮುಡಾ ಹಗರಣದಲ್ಲಿ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಮತ್ತು ಇತರರ ಮೇಲೆ ಬಿ ರಿಪೋರ್ಟ್…

14 mins ago

ಕೆ.ಜೆ.ಜಾರ್ಜ್‌ ರಾಜೀನಾಮೆ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಇಂಧನ ಇಲಾಖೆಯಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಹಸ್ತಕ್ಷೇಪಕ್ಕೆ ಬೇಸತ್ತು ಇಂಧನ ಸಚಿವ ಕೆ.ಜೆ.ಜಾರ್ಜ್‌ ರಾಜೀನಾಮೆ ನೀಡಿದ್ದರು ಎಂಬ…

2 hours ago

ವಿಕಲಚೇತನರಿಗಾಗಿಯೇ ಬೃಹತ್‌ ಉದ್ಯೋಗ ಮೇಳ ಆಯೋಜನೆ: ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್‌

ಬೆಂಗಳೂರು: ವಿಕಲಚೇತನರಿಗಾಗಿಯೇ ಮುಂದಿನ ಮೂರು ತಿಂಗಳಲ್ಲಿ ನಗರದ ಕಂಠೀರವ ಕ್ರೀಡಾಂಗಣದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗುವುದು ಎಂದು ಸಚಿವ ಡಾ.ಶರಣಪ್ರಕಾಶ್…

2 hours ago

ಕೊಡಗಿನಲ್ಲಿ ಮುಂದುವರೆದ ಆನೆ–ಮಾನವ ಸಂಘರ್ಷ: ಕಾಡಾನೆ ದಾಳಿಗೆ ವ್ಯಕ್ತಿ ದಾರುಣ ಸಾವು

ಕೊಡಗು: ಜಿಲ್ಲೆಯಲ್ಲಿ ಆನೆ–ಮಾನವ ಸಂಘರ್ಷ ಮತ್ತೆ ಜೀವ ಬಲಿ ಪಡೆದಿದೆ. ಸಿದ್ದಾಪುರ ಸಮೀಪದ ಗೌರಿ ಬೆಟ್ಟ ಬಳಿ ಕಾಡಾನೆ ದಾಳಿಗೆ…

3 hours ago

ವಿಮಾನ ದುರಂತದಲ್ಲಿ ಅಜಿತ್‌ ಪವಾರ್‌ ಸಾವು ಪ್ರಕರಣ: ದುರಂತದ ಸಂಪೂರ್ಣ ತನಿಖೆಯಾಗಲಿದೆ ಎಂದ ಯದುವೀರ್‌ ಒಡೆಯರ್‌

ಮಡಿಕೇರಿ: ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಮತಾ ಬ್ಯಾನರ್ಜಿ ಕತೆ ಕಟ್ಟುತ್ತಿದ್ದಾರೆ ಎಂದು…

3 hours ago