ರಾಜ್ಯ

ಬೆಳ್ಳಂಬೆಳಿಗ್ಗೆ ಜೆಸಿಬಿ ಗರ್ಜನೆ ; 27 ಎಕರೆ ಅರಣ್ಯ ಭೂಮಿ ಒತ್ತುವರಿ ತೆರವು

ಹಾಸನ : ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚನೆ ಹಿನ್ನೆಲೆಯಲ್ಲಿ, ಇಂದು ಬೆಳಗ್ಗೆ ಅರಣ್ಯಾಧಿಕಾರಿಗಳು ಹಾಸನ ಜಿಲ್ಲೆ,  ಚನ್ನರಾಯಪಟ್ಟಣ ತಾಲೂಕು ಬಾಗೂರು ಹೋಬಳಿಯ ಮಡಬ ಗ್ರಾಮದಲ್ಲಿ 27 ಎಕರೆ ಅರಣ್ಯ ಒತ್ತುವರಿ ತೆರವು ಮಾಡಿಸಿದ್ದಾರೆ.

ಮಡಬ ಗ್ರಾಮದ ಸರ್ವೆ ನಂ. 27ರಲ್ಲಿ ಸುಮಾರು 10-15 ಕೋಟಿ ರೂ. ಬೆಲೆ ಬಾಳುವ 26 ಎಕರೆ 33 ಗುಂಟೆ ಅರಣ್ಯ ಜಮೀನನ್ನು ಕೆಲವರು ಒತ್ತುವರಿ ಮಾಡಿ, ಇಲ್ಲಿದ್ದ ಮರಗಳನ್ನು ಕಡಿದು ತೋಟ ಮಾಡುವ ದುಸ್ಸಾಹಸ ಮಾಡಿದ್ದರು. ಈ ಬಗ್ಗೆ ಕಚೇರಿಗೆ ಬಂದ ದೂರು ಆಧರಿಸಿ ಈಶ್ವರ ಖಂಡ್ರೆ, ಕಾನೂನು ರೀತ್ಯ ಕ್ರಮ ಜರುಗಿಸುವಂತೆ ಕಳೆದ ಅಕ್ಟೋಬರ್ 23ರಂದು ಸ್ಪಷ್ಟ ಸೂಚನೆ ನೀಡಿದ್ದರು.

ಸದರಿ ಜಮೀನು ಮೀಸಲು ಅರಣ್ಯವಾಗಿದ್ದು, ಅರಣ್ಯ ಒತ್ತುವರಿ ಮಾಡಿ ಮರ, ಗಿಡ ನಾಶ ಮಾಡಿ, ತೋಟ ಮಾಡಿದವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಅರಣ್ಯ ಇಲಾಖೆ, ಇಂದು ಬೆಳಗ್ಗೆ ಜೆಸಿಬಿಯೊಂದಿಗೆ ಸ್ಥಳಕ್ಕೆ ತೆರಳಿ, ಅರಣ್ಯ ಭೂಮಿ ತೆರವು ಮಾಡಿ, ಸ್ಥಳೀಯ ಪ್ರಬೇಧದ ಸಸಿಗಳನ್ನು ನೆಟ್ಟು, ಫಲಕ ಹಾಕಿದ್ದಾರೆ.

ಖಂಡ್ರೆ ಕ್ರಮಕ್ಕೆ ಗ್ರಾಮಸ್ಥರ ಮೆಚ್ಚುಗೆ:
ಕೆಲವು ವರ್ಷಗಳಿಂದ ಜಿಲ್ಲೆಯಲ್ಲಿ ಶುಂಠಿ ಬೆಳೆಯುವ ಹೆಸರಲ್ಲಿ ಕೆಲವರು ನಕಲಿ ದಾಖಲೆ ಸೃಷ್ಟಿಸಿಕೊಂಡು, ಅರಣ್ಯ ಭೂಮಿ ಕಬಳಿಸಿ, ಬೆಲೆ ಬಾಳುವ ಮರ ಕಡಿದು ನಂತರ ತೋಟ ಮಾಡುತ್ತಿದ್ದಾರೆ. ಕಂದಾಯ ಇಲಾಖೆಯ ಕೆಲವು ಅಧಿಕಾರಿಗಳು ಅರಣ್ಯ ಭೂಮಿಯನ್ನು ಅಕ್ರಮ ಮಂಜೂರಾತಿ ಮಾಡುತ್ತಿದ್ದಾರೆ. ಈಶ್ವರ ಖಂಡ್ರೆ ಅವರು ಅರಣ್ಯ ಸಚಿವರಾದ ಮೇಲೆ ಇಂತಹ ಅಕ್ರಮಗಳಿಗೆ ಕಡಿವಾಣ ಬಿದ್ದಿದೆ ಎಂದು ತಿಳಿಸಿದ್ದಾರೆ.

ಎಚ್ಚರಿಕೆಯ ಗಂಟೆ:
ಅರಣ್ಯ ಭೂಮಿಯನ್ನು ಮನಸೋ ಇಚ್ಛೆ ಒತ್ತುವರಿ ಮಾಡಿ ತೆಂಗು, ಕಾಫಿ ಮತ್ತು ಅಡಿಕೆ ತೋಟ ಮಾಡುತ್ತಿದ್ದವರಿಗೆ ಮಡಬ ಅರಣ್ಯ ತೆರವು ಎಚ್ಚರಿಕೆಯ ಗಂಟೆಯಾಗಿದೆ. ಇಂದಿನ ಒತ್ತುವರಿ ತೆರವು ಕಾರ್ಯಾಚರಣೆಯಲ್ಲಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಏಳುಕೊಂಡಲ, ಉಪ ಅರಣ್ಯ ಸಂರಕ್ಷಣಾಧಿಕಾರಿ ಸೌರಭ್ ಮತ್ತಿತರರು ಭಾಗಿಯಾಗಿದ್ದರು.

ಆಂದೋಲನ ಡೆಸ್ಕ್

Recent Posts

ರೋಹಿತ್‌ ಬ್ಯಾಟಿಂಗ್‌ ಅಬ್ಬರ : ಭರ್ಜರಿ ಗೆಲುವು ದಾಖಲಿಸಿದ ಮುಂಬೈ

ಮುಂಬೈ : 13 ವರ್ಷಗಳ ಸೋಲಿನ ಓಟಕ್ಕೆ ಬ್ರೇಕ್‌ ಹಾಕಿದ ಮುಂಬೈ ಇಂಡಿಯನ್ಸ್‌ ಕೊನೆಗೂ ಐಪಿಎಲ್‌ನ ಮೊದಲ ಪಂದ್ಯವನ್ನು ಭರ್ಜರಿಯಾಗಿ…

38 mins ago

ಷೇರುಪೇಟೆ ವಹಿವಾಟಿನಲ್ಲಿ ಇಳಿಕೆ ; ಟಾಪ್-10 ಕಂಪನಿಗಳಲ್ಲಿ 7ಕ್ಕೆ ಭಾರೀ ನಷ್ಟ

ಹೊಸದಿಲ್ಲಿ : ಕಳೆದ ವಾರ ನಡೆದ ಷೇರುಪೇಟೆ ವಹಿವಾಟಿನಲ್ಲಿ ಸೂಚ್ಯಂಗಳು ಇಳಿಕೆ ಕಂಡಿದ್ದರಿಂದ ದೇಶದ ಪ್ರಮುಖ 10 ಕಂಪನಿಗಳ ಪೈಕಿ…

4 hours ago

ಎಲ್‌ಪಿಜಿ ಹೊತ್ತ ಮತ್ತೆರಡು ಹಡಗು ಭಾರತದತ್ತ

ಮುಂಬೈ : ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಭಾಗಶಃ ಅನುಮತಿ ನೀಡಿದ ನಂತರ ಭಾರತ ಧ್ವಜ ಹೊತ್ತ ಎರಡು ಎಲ್‌ಪಿಜಿ (ದ್ರವೀಕೃತ…

4 hours ago

ಮೇಲುಕೋಟೆ ಜಾತ್ರೆ | ವೈರಮುಡಿ ಕಿರೀಟಧಾರಣಾ ಮಹೋತ್ಸವದಲ್ಲಿ 2 ಲಕ್ಷ ಜನರು ಭಾಗಿ

ಮೇಲುಕೋಟೆ : ವೈಷ್ಣವ ಪರಂಪರೆಯ ಅತ್ಯಂತ ಪ್ರಸಿದ್ಧ ಮತ್ತು ವಿಶ್ವವಿಖ್ಯಾತ ವೈರಮುಡಿ ಬ್ರಹ್ಮೋತ್ಸವ ಶನಿವಾರ ರಾತ್ರಿಯಿಡಿ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ…

4 hours ago

ಅಸ್ಸಾಂ ಚುನಾವಣೆ | ಪಂಚ ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್‌

ಗುವಾಹಟಿ : ಅಸ್ಸಾಂ ವಿಧಾನಸಭಾ ಚುನಾವಣೆಗೆ ರಾಜಕೀಯ ಕಾರ್ಯತಂತ್ರ ರೂಪಿಸಿರುವ ಕಾಂಗ್ರೆಸ್ ಪಕ್ಷವೂ ಪಂಚ ಗ್ಯಾರಂಟಿಗಳನ್ನು ಘೋಷಿಸಿದೆ. ಎಐಸಿಸಿ ಅಧ್ಯಕ್ಷ…

4 hours ago

ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ : ​ಆಹಾರ,ನಾಗರಿಕ ಸರಬರಾಜು ಇಲಾಖೆ ಸ್ಪಷ್ಟನೆ

ಬೆಂಗಳೂರು : ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ‌ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ ಆಟೋ‌ ಎಲ್.ಪಿ.ಜಿಗೆ ಯಾವುದೇ…

4 hours ago