ಕರ್ನಾಟಕದಲ್ಲಿ ಕೊನೆಯ 24 ಗಂಟೆಗಳಲ್ಲಿ ಒಟ್ಟು 296 ಹೊಸ ಕೊವಿಡ್ ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಹಂಚಿಕೊಂಡಿದೆ. 50 ಜನ ಡಿಸ್‌ಚಾರ್ಜ್ ಆಗಿದ್ದು, ಸದ್ಯ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1245 ಮುಟ್ಟಿದೆ. ಕೊನೆಯ 24 ಗಂಟೆಗಳಲ್ಲಿ 5021 ಟೆಸ್ಟ್‌ಗಳು ನಡೆದಿವೆ, 4036 ಆರ್‌ಟಿಪಿಸಿಆರ್ ಟೆಸ್ಟ್‌ಗಳು ನಡೆದಿವೆ ಹಾಗೂ 985 ರ್ಯಾಟ್ ಟೆಸ್ಟ್‌ಗಳು ನಡೆದಿವೆ. ರಾಜ್ಯದಲ್ಲಿ ಪಾಸಿಟಿವಿಟಿ ದರ 5.89% ಇದೆ. ಕಳೆದ 24 ಗಂಟೆಗಳಲ್ಲಿ ಮೈಸೂರಿನಲ್ಲಿ 55 ವರ್ಷದ ಸೋಂಕಿತ ಮೃತಪಟ್ಟಿದ್ದಾರೆ.
ಒಟ್ಟು 1245 ಸಕ್ರಿಯ ಪ್ರಕರಣಗಳ ಪೈಕಿ 1179 ಸೋಂಕಿತರನ್ನು ಹೋಮ್ ಐಸೋಲೇಷನ್ ಮಾಡಲಾಗಿದ್ದು, 66 ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರ ಪೈಕಿ 20 ಸೋಂಕಿತರು ಐಸಿಯುನಲ್ಲಿದ್ದು, 46 ಸೋಂಕಿತರು ಸಾಮಾನ್ಯ ವಾರ್ಡ್‌ನಲ್ಲಿದ್ದಾರೆ.
ಕಳೆದ 24 ಗಂಟೆಗಳಲ್ಲಿ ಮೈಸೂರಿನಲ್ಲಿ 29, ಮಂಡ್ಯದಲ್ಲಿ 9 ಹಾಗೂ ಚಾಮರಾಜನಗರದಲ್ಲಿ 5 ಪ್ರಕರಣಗಳು ಪತ್ತೆಯಾಗಿವೆ. ಮೈಸೂರಿನಲ್ಲಿ ಒಟ್ಟು 109, ಮಂಡ್ಯದಲ್ಲಿ 46, ಕೊಡಗಿನಲ್ಲಿ 3 ಹಾಗೂ ಚಾಮರಾಜನಗರದಲ್ಲಿ 30 ಸಕ್ರಿಯ ಪ್ರಕರಣಗಳಿವೆ.
ಹನೂರು: ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ 9 ಜನರು ಗಾಯಗೊಂಡಿರುವ ಘಟನೆ ಹನೂರು ಪಟ್ಟಣದ ಹೊರವಲಯದ ಮಹದೇಶ್ವರ ಐಟಿಐ ಕಾಲೇಜು…
ಹನೂರು : ಕ್ಷೇತ್ರದ ಅಧಿದೇವತೆ ಮಲೆ ಮಾದೇಶ್ವರ ಸ್ವಾಮಿ ಕೃಪೆಯಿಂದಲೇ ಈ ಬಾರಿ ಉತ್ತಮ ಮಳೆಯಾಗಿ, ಬರಗಾಲದಿಂದ ಕಂಗೆಟ್ಟಿದ್ದ ರೈತರ…
‘ಜಗವೆ ಕೊಂಡಾಡುವ ಹಾಗೆ’ ಕರುನಾಡ ಕಂಬನಿ, ಜನಮನದ ನಾಡಿ ಅರ್ಜುನನಿಗೆ ಅಶ್ರುತರ್ಪಣೆ ಅಭಿಮಾನದ ಅಭಿಮನ್ಯುಗೆ ಹೃದಯದ ಅಭಿನಂದನೆ ಅಂಬಾರಿಯ ಹೊತ್ತು…
ಪರೀಕ್ಷಾ ಸಮಯದಲ್ಲಿ ಬಹುತೇಕ ಜೆರಾಕ್ಸ್ ಅಂಗಡಿಗಳ ಮುಂದೆ ವಿದ್ಯಾರ್ಥಿಗಳ ದಂಡೇ ನೆರೆದಿರುತ್ತದೆ. ಪರೀಕ್ಷಾ ಸಮಯದಲ್ಲಿ ನೋಟ್ಸ್‌ಗಳನ್ನು ಜೆರಾಕ್ಸ್ ಮಾಡಿಸಲು ಬರುವವರಿಗಿಂತ…
ಮೈಸೂರು ವಿಶ್ವವಿದ್ಯಾಲಯದ ಮಾನಸಗಂಗೋತ್ರಿ ಆವರಣದಲ್ಲಿ ಕಳೆದ ಕೆಲವು ದಿನಗಳಿಂದ ೨೦೨೬ರ ದಸರಾ ಮಹೋತ್ಸವದ ಕಾರ್ಯಕ್ರಮದಲ್ಲಿ ಪ್ರಮುಖವಾಗಿ ಗುರುತಿಸಿಕೊಂಡಿರುವ ಯುವ ಸಂಭ್ರಮ…
ಸಾಮಾಜಿಕ ಭದ್ರತೆಯ ಒಂದು ಭಾಗವಾದ ನೌಕರರ ಭವಿಷ್ಯ ನಿಧಿ ವ್ಯಾಪ್ತಿಗೆ ಒಳಪಡುವ ನೌಕರರ ವೇತನ ಮಿತಿಯನ್ನು ೧೫ ಸಾವಿರ ರೂಪಾಯಿಗಳಿಂದ…