ರಾಜ್ಯ

2ನೇ ವಿಮಾನ ನಿಲ್ದಾಣ | ಏ.7-9ರ ನಡುವೆ ಕೇಂದ್ರ ತಂಡದ ಆಗಮನ

ಮೂರು ಸ್ಥಳಗಳ ಪರಿಶೀಲನೆಗೆ ಕ್ಷಣಗಣನೆ: ಎಂ ಬಿ ಪಾಟೀಲ

ಬೆಂಗಳೂರು:  ರಾಜ್ಯ ರಾಜಧಾನಿಯಲ್ಲಿ 2ನೇ ಅಂತಾರಾಷ್ಟ್ರೀಯ ಹಸಿರು ವಿಮಾನ ನಿಲ್ದಾಣಕ್ಕೆ ಮೂರು ಸ್ಥಳಗಳನ್ನು ಆಖೈರು ಮಾಡಲಾಗಿದೆ. ಈ ಜಾಗಗಳ ಪೂರ್ವಕಾರ್ಯ ಸಾಧ್ಯತಾ ಅಧ್ಯಯನಕ್ಕೆಂದು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ (ಎಎಐ) ಬಹುಶಿಸ್ತೀಯ ತಂಡವು ಏ.7 ರಿಂದ 9ರೊಳಗೆ ರಾಜ್ಯಕ್ಕೆ ಆಗಮಿಸಲಿದೆ. ಈ ಸಂಬಂಧ ಈಗಾಗಲೇ ಪ್ರಾಧಿಕಾರಕ್ಕೆ ಕೆಎಸ್ಐಐಡಿಸಿ ವತಿಯಿಂದ ₹1.21 ಕೋಟಿ ಶುಲ್ಕವನ್ನು ಪಾವತಿಸಲಾಗಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ಶನಿವಾರ ತಿಳಿಸಿದ್ದಾರೆ.

ಸದಾಶಿವನಗರದ ತಮ್ಮ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಕನಕಪುರ ರಸ್ತೆಯಲ್ಲಿ ಎರಡು ಮತ್ತು ನೆಲಮಂಗಲ- ಕುಣಿಗಲ್ ರಸ್ತೆಯಲ್ಲಿ ಒಂದು ಜಾಗವನ್ನು ಗುರುತಿಸಲಾಗಿದೆ ಎಂದರು.

ಉದ್ದೇಶಿತ ವಿಮಾನ ನಿಲ್ದಾಣಕ್ಕೆ ಅಂತಿಮಪಡಿಸಿರುವ ತಾಣಗಳನ್ನು ಬಂದು ಪರಿಶೀಲಿಸುವಂತೆ ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ ನಮ್ಮ ಇಲಾಖೆಯಿಂದ ಈ ತಿಂಗಳ 5ರಂದು ಪತ್ರ ಬರೆಯಲಾಗಿತ್ತು. ಅದರಂತೆ ತಂಡವು ಬರುತ್ತಿದೆ. ತಂಡದ ಸೂಚನೆಯಂತೆ ನಾವು ಈ ತಾಣಗಳ ಕಂದಾಯ ನಕಾಶೆ, 10 ವರ್ಷಗಳ ಹವಾಮಾನ ವರದಿ, ಈ ಜಾಗಗಳ ಜಾಮಿತೀಯ ಲಕ್ಷಣಗಳನ್ನು ವಿವರಿಸುವ ಚಿತ್ರ, ಭಾರತೀಯ ಸರ್ವೇ ಇಲಾಖೆಯ ನಕಾಶೆ, ಉದ್ದೇಶಿತ ನಿಲ್ದಾಣದಲ್ಲಿನ ಕಾರ್ಯಾಚರಣೆ ಸ್ವರೂಪ (ವಿಎಫ್ಆರ್/ಐಎಫ್ಆರ್) ತಿಳಿಸುವ ವಿವರ ಮುಂತಾದವನ್ನು ಸಿದ್ಧಪಡಿಸಿಕೊಂಡಿದ್ದೇವೆ ಎಂದು ಅವರು ವಿವರಿಸಿದ್ದಾರೆ.

ಬೆಂಗಳೂರಿನಲ್ಲಿ ಈಗ ಇರುವ ವಿಮಾನ ನಿಲ್ದಾಣದ ಮೇಲೆ ಅತೀವ ಒತ್ತಡವಿದೆ. ಇನ್ನೊಂದೆಡೆಯಲ್ಲಿ, 2033ಕ್ಕೆ ಸರಿಯಾಗಿ 150 ಕಿ.ಮೀ ವ್ಯಾಪ್ತಿಯಲ್ಲಿ ಮತ್ತೊಂದು ವಿಮಾನ ನಿಲ್ದಾಣ ಹೊಂದುವಂತಿಲ್ಲ ಎನ್ನುವ ಷರತ್ತು ಕೊನೆಗೊಳ್ಳಲಿದೆ. ಇವೆಲ್ಲವನ್ನೂ ದೃಷ್ಟಿಯಲ್ಲಿ ಇಟ್ಟುಕೊಂಡು ಎರಡನೆಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಈಗಿನಿಂದಲೇ ಮುಂದಡಿ ಇಡಲಾಗುತ್ತಿದೆ. ಹೀಗೆಯೇ ಮುಂದುವರಿದರೆ 2033ರ ಹೊತ್ತಿಗೆ ಅದು ಬಳಕೆಗೆ ಸಿದ್ಧವಾಗಬಹುದು ಎಂದು ಪಾಟೀಲ ಹೇಳಿದ್ದಾರೆ.

`ಕೆಲವರು ತುಮಕೂರಿನ ಶಿರಾ ಸಮೀಪ ಉದ್ದೇಶಿತ ವಿಮಾನ ನಿಲ್ದಾಣ ನಿರ್ಮಾಣ ಮಾಡಬೇಕೆಂದು ಆಗ್ರಹಿಸುತ್ತಿದ್ದಾರೆ. ಆದರೆ ಈ ಕಾರ್ಯಬೇಡಿಕೆ ಸಾಧುವಲ್ಲ. ಶಿರಾದಲ್ಲಿ ವಿಮಾನ ನಿಲ್ದಾಣ ಮಾಡಿದರೆ ಶಿವಮೊಗ್ಗ, ವಿಜಯಪುರದಲ್ಲಿ ಇರುವಂತೆ ಅದೇನಿದ್ದರೂ ಜಿಲ್ಲಾ ಮಟ್ಟದ್ದಾಗುತ್ತದೆ ಅಷ್ಟೆ. ಬೆಂಗಳೂರಿನ ಜನರಿಗೆ‌ ಅನುಕೂಲ ಆಗಬೇಕಾದರೆ ಅದು ಬೆಂಗಳೂರಿಗೆ ಸನಿಹದಲ್ಲೇ ಇರಬೇಕು. ಆಗ ಮಾತ್ರ ಹೂಡಿಕೆದಾರ ಸಂಸ್ಥೆಗಳು ವಿಮಾನ ನಿಲ್ದಾಣ ನಿರ್ಮಾಣಕ್ಕೆ ಬರುತ್ತಾರೆ. ಇಲ್ಲದಿದ್ಧರೆ ಯೋಜನೆಯೇ ಕಾರ್ಯಸಾಧುವಾಗುವುದಿಲ್ಲ’ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಬಲ್ದೋಟ ಮಾಲಿನ್ಯ: ಸೂಕ್ತ ಕ್ರಮ

ಕೊಪ್ಪಳದಲ್ಲಿ ಬಲ್ದೋಟ ಸಮೂಹವು 54 ಸಾವಿರ ಕೋಟಿ ರೂ. ಹೂಡಿಕೆ ಮಾಡಿ, ಬಹುದೊಡ್ಡ ಉಕ್ಕು ತಯಾರಿಕೆ ಕಾರ್ಖಾನೆ ಸ್ಥಾಪಿಸಲು ಮುಂದಾಗಿದೆ. ಇದರಿಂದ ಮಾಲಿನ್ಯ ಉಂಟಾಗಲಿದೆ ಎಂದು ಗವಿಮಠದ ಸ್ವಾಮೀಜಿಗಳ ನೇತೃತ್ವದಲ್ಲಿ ಹೋರಾಟ ನಡೆಯುತ್ತಿದೆ. ಮಾಲಿನ್ಯದ ಬಗ್ಗೆ ಐಐಎಸ್ಸಿಯಂತಹ ತಟಸ್ಥ ಸಂಸ್ಥೆಯಿಂದ ಅಧ್ಯಯನ ನಡೆಸಲಾಗುತ್ತಿದೆ. ಅದರ ವರದಿಗೆ ಅನುಗುಣವಾಗಿ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಒಬ್ಬ ಸಚಿವನಾಗಿ ನನಗೆ ಉದ್ಯಮಗಳು ಬೆಳೆಯಬೇಕಾದ ಅನಿವಾರ್ಯತೆ ಮತ್ತು ಸಾರ್ವಜನಿಕರ ಧ್ವನಿ ಎರಡೂ ಅರ್ಥವಾಗುತ್ತವೆ. ಇದರಲ್ಲಿ ರಾಜಕೀಯವೇನೂ ಇಲ್ಲ ಎಂದು ಪಾಟೀಲ ಭರವಸೆ ನೀಡಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

4 hours ago

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್!

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…

4 hours ago

ಎಸ್‌ಐಆರ್‌ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…

5 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…

6 hours ago

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

9 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

10 hours ago