Mysore
24
overcast clouds

Social Media

ಗುರುವಾರ, 01 ಮೇ 2025
Light
Dark

ಬೆಂಗಳೂರಿಗೆ 2ನೇ ಏರ್‌ಪೊರ್ಟ್:‌ ಸಚಿವ ಎಂ.ಬಿ ಪಾಟೀಲ್‌ ಹೇಳಿದ್ದೇನು?

ಬೆಂಗಳೂರು: ವೇಗವಾಗಿ ಬೆಳೆಯುತ್ತಿರುವ ನಗರಗಳಲ್ಲಿ ಬೆಂಗಳೂರು ಮೊದಲನೇ ಸಾಲಿನಲ್ಲಿದೆ. ಜೊತೆಗೆ ಜಾಗತಿಕ ಮಟ್ಟದಲ್ಲೂ ಕೂಡ ಗಮನ ಸೆಳೆದಿದೆ. ಈ ಕಾರಣಕ್ಕೆ ಬೆಂಗಳೂರಿಗೆ ಮುಂಬರುವ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಎರಡನೇ ವಿಮಾನ ನಿರ್ಮಿಸುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ.

ಈ ಬಗ್ಗೆ ವಿಧಾನಸೌಧ ಸಮಿತಿ ಕೊಠಡಿಯಲ್ಲಿ ಸಚಿವ ಎಂ.ಬಿ ಪಾಟೀಲ್‌ ಅವರು ಗುರುವಾರ(ಜೂ.20) ಅಧಿಕಾರಿಗಳೊಂದಿಗೆ ಸಭೆ ನಡೆಸಿ ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣದ ಬಗ್ಗೆ ಚರ್ಚಿಸಿ, ಡಿಪಿಆರ್‌ ಸಿದ್ಧಪಡಿಸಲು ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಶುಕ್ರವಾರ(ಜೂ.21) ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವರು, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೂ, ರಾಜ್ಯ ಸರ್ಕಾರಕ್ಕೂ ಒಪ್ಪಂದ ಇದೆ. ಆ ಒಪ್ಪಂದ ಪ್ರಕಾರ 2033ರವರೆಗೆ ಬೇರೊಂದು ವಿಮಾನ ನಿಲ್ದಾಣ ಮಾಡುವುದಕ್ಕೆ ಅವಕಾಶ ಇಲ್ಲ. ಆ ಒಪ್ಪಂದ ಮುಗಿದಾಗ. ನಾವು ಎರಡನೇ ವಿಮಾನ ನಿಲ್ದಾಣ ಮಾಡಬೇಕಾಗುತ್ತದೆ ಎಂದು ಹೇಳಿದರು.

ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಲೋಡ್‌ ಬಗ್ಗೆ ಗುರುವಾರ ಅಧಿಕಾರಗಳೊಂದಿಗೆ ಚರ್ಚೆ ಮಾಡಿದ್ದೇವೆ. 2032ರ ಹೊತ್ತಿಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಜನಸಂದಣಿ ಆಗಿಬಿಡುತ್ತದೆ. ಬೆರೊಂದು ವಿಮಾನ ನಿಲ್ದಾಣ ಅವಶ್ಯಕತೆ ಇದೆ. ಈಗಾಗಲೇ ಮುಂಬೈ, ಗೋವಾ ಹಾಗೂ ದೆಹಲಿಯಲ್ಲಿ ಹೊಸ ವಿಮಾನ ನಿಲ್ದಾಣ ಇವೆ. ಮುಂದಿನ ದಿನಗಳು ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ ಬೇಕೇ ಬೇಕು ಎಂದು ಸ್ಪಷ್ಟಪಡಿಸಿದ ಅವರು, ನಿನ್ನೆ ಪ್ರಾಥಮಿಕವಾಗಿ ಚರ್ಚೆ ಮಾಡಿದ್ದೀವಿ ಅಷ್ಟೆ. ಎಷ್ಟು ಎಕರೆ ಜಾಗದಲ್ಲಿ ನಿರ್ಮಾಣ ಮಾಡಬೇಕು ಎಂದು ನಿರ್ಧಾರ ಮಾಡಿಲ್ಲ ಎಂದರು.

ಇನ್ನೂ 9 ವರ್ಷಗಳಲ್ಲಿ ಬಿಐಎಎಲ್‌ ಷರತ್ತು ಅಂತ್ಯ:
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ನಿರ್ಮಿಸುವಾಗ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಂಸ್ಥೆಯು ಮುಂದಿನ 25 ವರ್ಷಗಳವರೆಗೆ 150 ಕಿ.ಮೀ ವ್ಯಾಪ್ತಿಯಲ್ಲಿ ಹೊಸ ವಿಮಾನ ನಿಲ್ದಾಣ ನಿರ್ಮಿಸುವುದಿಲ್ಲ ಎಂದು ರಾಜ್ಯ ಸರ್ಕಾರದೊಂದಿಗೆ ಷರತ್ತು ಮಾಡಿಕೊಂಡಿತ್ತು. ಈ ಷರತ್ತು ಮುಗಿಯಲು ಇನ್ನೂ 9 ವರ್ಷಗಳು ಬೇಕಾಗಿದೆ.  ಆಗಾಗಿ ಈಗಿನಿಂದಲೇ ಇನ್ನೊಂದು ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸರ್ಕಾರ ಚಿಂತನೆ ನಡೆಸಿದೆ.

Tags: