ಬೆಂಗಳೂರು: ಎಲ್ಲಾ ಸಮುದಾಯಗಳಿಗೂ ಅವಕಾಶ ಸಿಗಬೇಕೆಂಬ ದೃಷ್ಠಿಯಿಂದ ಹೆಚ್ಚುವರಿ ಮೂರು ಉಪಮುಖ್ಯಮಂತ್ರಿ ಹುದ್ದೆ ಕೇಳಿದರೆ ತಪ್ಪಿಲ್ಲ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಸಿ ಮಹದೇವಪ್ಪ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
೨೦೨೪ರ ಲೋಕಸಭಾ ಚುನಾವಣೆಗು ಮುನ್ನ ಹೆಚ್ಚುವರಿ ಡಿಸಿಎಂ ಹುದ್ದೆಗಳ ಬಗ್ಗೆ ಕೆ.ಎನ್ ರಾಜಣ್ಣ ಮಾತನಾಡಿದ್ದು, ಇದರ ಸಂಬಂಧ ಸಚಿವ ಎಚ್.ಸಿ ಮಹೇವಪ್ಪ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.
ಹಿರಿಯ ನಾಯಕರಾದ ಕೆ.ಎನ್ ರಾಜಣ್ಣ ಅವರು ರಾಜಕೀಯ ವಿಶ್ಲೇಷಣೆ ಮಾಡಿ ಹೀಗೆ ಹೇಳಿದ್ದಾರೆ. ಆದರೆ ಇದರ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡಲಿದೆ. ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಜನವರಿ ೧೦ ರಂದು ಎಐಸಿಸಿಯಿಂದ ವೀಕ್ಷಕರು ಬರಲಿದ್ದಾರೆ. ಅವರು ಹೆಚ್ಚುವರಿ ಡಿಸಿಎಂ ಹುದ್ದೆಗಳ ಬಗ್ಗೆ ತೀರ್ಮಾನ ಮಾಡಲಿದ್ದಾರೆ ಎಂದು ಮಹದೇವಪ್ಪ ಹೇಳಿದರು.
ಜೊತೆಗೆ ಲೋಕಸಭಾ ಚುನಾವಣೆಯಲ್ಲಿ ಸಚಿವರನ್ನು ಅಖಾಡಕ್ಕೆ ಇಳಿಸುವ ಬಗ್ಗೆ ಸದ್ಯಕ್ಕೆ ಯಾವುದೇ ಚರ್ಚೆಯಾಗಿಲ್ಲ. ಮುಂದಿನ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲುವತ್ತಾ ಹೈಕಮಾಂಡ್ ಏನು ನಿರ್ಧಾರ ಮಾಡಲಿದೆ ಎಂಬುದನ್ನು ಕಾದುನೋಡಬೇಕಿದೆ ಎಂದರು.