Mysore
23
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಉಪ ಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ನಾವೇ ಗೆಲ್ಲುತ್ತೇವೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ವಿಶ್ವಾಸ

ಬೆಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆದಿದ್ದು, ಮೂರಕ್ಕೆ ಮೂರೂ ಕ್ಷೇತ್ರಗಳಲ್ಲಿ ನಾವೇ ಗೆಲ್ಲುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಇಂದು(ನ.21) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿಯ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಮೂರು ಕ್ಷೇತ್ರಗಳಲ್ಲಿ ವಿಜಯ ಸಾಧಿಸುವ ವಾತಾವರಣವಿದೆ. ಕಳೆದ ಬಾರಿ ಶಿಗ್ಗಾಂವಿ ಕ್ಷೇತ್ರದಲ್ಲಿ ಬಸವರಾಜ ಬೊಮ್ಮಾಯಿ 36 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಆದರೆ ಆ ಕ್ಷೇತ್ರದಲ್ಲಿ ಈ ಬಾರಿ ಮತಗಳ ಅಂತರ 10 ಸಾವಿರಕ್ಕೆ ಕುಸಿದಿದೆ. ಹೀಗಾಗಿ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ನಾವೇ ಗೆಲ್ಲುತ್ತೇವೆ ಎಂದು ಹೇಳಿದ್ದಾರೆ.

 

Tags: