Mysore
21
overcast clouds

Social Media

ಸೋಮವಾರ, 10 ಆಗಸ್ಟ್ 2026
Light
Dark

ಇಂದಿನಿಂದ ಮೂರು ದಿನಗಳ ಕಾಲ ಭಾರೀ ಮಳೆ ಮುನ್ಸೂಚನೆ: ಇಂದು ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

yellow rain alert

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಮತ್ತಷ್ಟು ಚುರುಕು ಪಡೆದುಕೊಂಡಿದ್ದು, ಇಂದಿನಿಂದ ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

ನಾಳೆ ಬೀದರ್‌, ಕಲಬುರ್ಗಿ, ವಿಜಯಪುರ, ಯಾದಗಿರಿ, ಬಾಗಲಕೋಟೆ, ಕೊಪ್ಪಳ, ಗದಗ, ಬೆಳಗಾವಿ, ಹಾವೇರಿ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, ತುಮಕೂರು, ಮೈಸೂರು, ಮಂಡ್ಯ, ಚಾಮರಾಜನಗರ, ಚಿಕ್ಕಬಳ್ಳಾಪುರ, ರಾಮನಗರ, ಕೋಲಾರ, ಬೆಂಗಳೂರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಮುಂದಿನ ಎರಡು ದಿನಗಳ ಕಾಲ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

Tags:
error: Content is protected !!