ನವದೆಹಲಿ: ಗಣರಾಜ್ಯೋತ್ಸವ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ 2025ನೇ ಸಾಲಿನ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರ ಪಟ್ಟಿ ಬಿಡುಗಡೆ ಮಾಡಿದೆ. ರಾಜ್ಯದ ಮೂವರು ಸಾಧಕರು ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಕರ್ನಾಟಕ ರಾಜ್ಯದ ಡಾ. ವಿಜಯಲಕ್ಷ್ಮಿ ದೇಶಮಾನೆ, ವೆಂಕಪ್ಪ ಅಂಬಾಜೀ ಸುಗಟ್ಕೇರ್ ಹಾಗೂ ಭೀಮವ್ವ ದೊಡ್ಡ ಬಾಲಪ್ಪಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ.
ಡಾ. ವಿಜಯಲಕ್ಷ್ಮಿ ದೇಶಮಾನೆ:
ಸಾಕ್ಷಾತ್ ಧನ್ವಂತರಿ ಎಂದೇ ಹೆಸರುವಾಸಿಯಾಗಿರುವ ಡಾ. ವಿಜಯಲಕ್ಷ್ಮಿ ದೇಶಮಾನೆ, ಕಲಬುರಗಿ ಮೂಲದ ದೇಶದ ಹೆಸರಾಂತ ಕ್ಯಾನ್ಸರ್ ತಜ್ಞೆಯಾಗಿದ್ದಾರೆ.
ವೆಂಕಪ್ಪ ಅಂಬಾಜೀ ಸುಗಟ್ಕೇರ್:
81 ವರ್ಷದ ವೆಂಕಪ್ಪ ಅಂಬಾಜೀ ಕರ್ನಾಟಕದ ಪ್ರಸಿದ್ಧ ಜಾನಪದ ಗಾಯಕರಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮನ್‌ಕಿಬಾತ್‌ನಲ್ಲಿ ವೆಂಕಪ್ಪನ ಹೆಸರು ಉಲ್ಲೇಖಿಸಿದ್ದರು.
ಭೀಮವ್ವ ದೊಡ್ಡಬಾಳಪ್ಪ ಶಿಳ್ಳೆಕ್ಯಾತ;
ತೊಗಲುಬೊಂಬೆಯಾಟದ ಹಿರಿಯ ಕಲಾವಿದರಾಗಿರುವ ಭೀಮವ್ವ ಕೊಪ್ಪಳ ಮೂಲದವರಾಗಿದ್ದಾರೆ.