Mysore
18
broken clouds

Social Media

ಮಂಗಳವಾರ, 23 ಡಿಸೆಂಬರ್ 2025
Light
Dark

ಏಪ್ರಿಲ್‌ನೊಳಗೆ 3 ಸಾವಿರ ಲೈನ್‌ಮೆನ್‌ಗಳ ನೇಮಕ: ಇಂಧನ ಸಚಿವ ಕೆ.ಜೆ.ಜಾರ್ಜ್‌

ಹಾವೇರಿ: ರಾಜ್ಯದಲ್ಲಿ ಖಾಲಿ ಇರುವ 3 ಸಾವಿರ ಲೈನ್‌ಮೆನ್‌ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಏಪ್ರಿಲ್‌ ತಿಂಗಳೊಳಗಾಗಿ ಪೂರ್ಣಗೊಳ್ಳಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್‌ ಹೇಳಿದ್ದಾರೆ.

ಈ ಬಗ್ಗೆ ಹಾವೇರಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಲೈನ್‌ಮೆನ್‌ಗಳ ನೇಮಕ ಪ್ರಕ್ರಿಯೆ ಪೂರ್ಣಗೊಳ್ಳಲಿದ್ದು, ಬಳಿಕ ಸಮಸ್ಯೆ ಬಹುತೇಕ ಬಗೆಹರಿಯಲಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಕಳೆದ ವರ್ಷ ತೀವ್ರ ಬರಗಾಲವಿದ್ದರಿಂದ ವಿದ್ಯುತ್‌ ಕೊರತೆಯಿದ್ದರೂ ಕೇವಲ ಒಂದು ತಿಂಗಳು ಮಾತ್ರ ಸಮಸ್ಯೆಯಾಗಿತ್ತು. ಉಳಿದ 11 ತಿಂಗಳಿನಲ್ಲಿ ಸಮರ್ಪಕವಾಗಿ ವಿದ್ಯುತ್‌ ಪೂರೈಸಲಾಗಿದೆ. ಪ್ರಸಕ್ತ ವರ್ಷ 19 ಸಾವಿರ ಮೆಗಾ ವ್ಯಾಟ್‌ ವಿದ್ಯುತ್‌ ಬೇಡಿಕೆ ಇದ್ದು, ಗ್ರಾಹಕರಿಗೆ ಸಮರ್ಪಕ ವಿದ್ಯುತ್‌ ಪೂರೈಕೆಗೆ ಇಂಧನ ಇಲಾಖೆ ಸನ್ನದ್ಧವಾಗಿದೆ. ರಾಜ್ಯದಲ್ಲಿ ಯಾವುದೇ ವಿದ್ಯುತ್‌ ಕೊರತೆಯಿಲ್ಲ ಎಂದು ಸ್ಪಷ್ಟನೆ ನೀಡಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್‌ ಸಮಸ್ಯೆ ಆಗಬಾರದು ಎಂಬ ಕಾರಣಕ್ಕೆ ಸೋಲಾರ್‌ ಪಂಪ್‌ಸೆಟ್‌ ಒದಗಿಸುವ ಕುಸುಮ್‌ ಬಿ ಯೋಜನೆಗೆ ಸರ್ಕಾರ ಆದ್ಯತೆ ನೀಡುತ್ತಿದೆ ಎಂದು ಹೇಳಿದರು.

 

Tags:
error: Content is protected !!