ಬೆಂಗಳೂರು: ರಾಜ್ಯದಲ್ಲಿ ಶೀಘ್ರದಲ್ಲೇ 32 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುತ್ತೇವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು, ರಾಜ್ಯಾದ್ಯಂತ 51 ಸಾವಿರ ಶಿಕ್ಷಕರ ಕೊರತೆ ಇದೆ. ಆದ್ದರಿಂದ ಶೀಘ್ರದಲ್ಲೇ 32 ಸಾವಿರ ಶಿಕ್ಷಕರನ್ನು ನೇಮಕಾಯಿ ಮಾಡಲಾಗುತ್ತದೆ ಎಂದು ಹೇಳಿದರು.
ಇನ್ನು ರಾಜ್ಯದಲ್ಲಿ 1ನೇ ತರಗತಿ ಮಕ್ಕಳಿಗೆ ಗಣಕಯಂತ್ರ ನೀಡಲಿದ್ದೇವೆ. ವಿಶೇಷವಾಗಿ ಗ್ರಾಮೀಣ ಭಾಗದ ಮಕ್ಕಳಿಗೆ ಅವಕಾಶ ನೀಡಬೇಕಿದೆ. ಸರ್ಕಾರಿ ಶಾಲೆಗಳಲ್ಲಿ ಸಂಜೆ ವಿಶೇಷ ತರಗತಿ ಮಾಡಲಾಗುತ್ತಿದೆ. ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್‌ನಿಂದ ಅನುಕೂಲವಾಗಿದೆ ಎಂದು ಹೇಳಿದರು.





