ಬೆಂಗಳೂರು: ರಾಜ್ಯದಲ್ಲಿ ಆನ್‌ಲೈನ್ ಬೆಟ್ಟಿಂಗ್ ಹಾವಳಿ ತೀವ್ರಗೊಂಡಿದೆ. ಕಳೆದ 4 ವರ್ಷದಲ್ಲಿ 35 ಮಂದಿ ಆನ್ ಲೈನ್ ಬೆಟ್ಟಿಂಗ್ ದಂಧೆಗೆ ಬಲಿಯಾಗಿದ್ದಾರೆ. ಆತಂಕಕಾರಿ ವಿಚಾರ ಏನಂದ್ರೆ ಮಕ್ಕಳು, ವಿದ್ಯಾರ್ಥಿಗಳು ಕೂಡಾ ಆನ್ ಲೈನ್ ಬೆಟ್ಟಿಂಗ್ ನಿಂದ ಪ್ರಾಣ ಕಳೆದುಕೊಳ್ಳುವಂತಾಗಿದೆ.
ಕ್ರಿಕೆಟ್, ಫುಟ್ ಬಾಲ್, ಟಿನ್ನಿಸ್, ಕುದುರೆ ರೇಸಿಂಗ್ ಮತ್ತು ಇ- ಸ್ಫೋಟ್ಸ್‌ಗಳಲ್ಲಿ ಹಣ ಹೂಡಲಾಗುತ್ತಿದೆ. ಅಲ್ಲದೆ, ಕ್ಯಾಸಿನೊ ಆಟಗಳಾದ ಸ್ಲಾಟ್ ಮಷೀನ್ಗಳು, ಬ್ಲ್ಯಾಕ್ ಜಾಕ್ ಮತ್ತು ಲೈವ್ ಕ್ಯಾಸಿನೋಗಳು ಇವೆ. ಇಷ್ಟೇ ಅಲ್ಲದೆ, ಫ್ಯಾಂಟಸಿ ಗೇಮ್ಸ್ ಡ್ರೀಮ್ 11, ಎಂಪಿಎಲ್ ನಂತಹ ಪ್ಲಾಟ್ ಫಾರ್ಮ್‍ಗಳು ಇವೆ. ಜೊತೆಗೆ ರಮ್ಮಿ, ಲಾಟರಿ ಆಟಗಳು ಇವೆ.
ಕಳೆದ ಐದು ವರ್ಷಗಳಲ್ಲಿ ಒಟ್ಟು 468 ಪ್ರಕರಣಗಳನ್ನು ದಾಖಲು ಮಾಡಿಕೊಳ್ಳಲಾಗಿದೆ. 4 ವಿದ್ಯಾರ್ಥಿಗಳು ಮತ್ತು ಮಕ್ಕಳು ಆನ್ ಲೈನ್ ಬೆಟ್ಟಿಂಗ್ ಗೆ ಬಲಿಯಾದರೆ, 31 ಇತರರು ಪ್ರಾಣಕಳೆದುಕೊಂಡಿದ್ದಾರೆ. ರಾಜ್ಯದಲ್ಲಿ ಆನ್‍ಲೈನ್ ಗೇಮ್‍ನಿಂದ ವಿದ್ಯಾರ್ಥಿಗಳು ಯುವಕರು, ಮಕ್ಕಳು ಹಾಗೂ ಸಾರ್ವಜನಿಕರನ್ನು ರಕ್ಷಿಸಲು ಕಠಿಣ ಕ್ರಮಗಳನ್ನು ಅನುಸರಿಸಲಾಗುತ್ತಿದೆ ಎಂದು ಗೃಹ ಇಲಾಖೆ ತಿಳಿಸಿದೆ.
ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳು ಶಾಲಾ-ಕಾಲೇಜುಗಳಿಗೆ ಭೇಟಿ ನೀಡಿ ಅರಿವು ಮೂಡಿಸುವ ಪ್ರೋಗ್ರಾಮ್ ಅನ್ನು ನಡೆಸಲಾಗುತ್ತಿದೆ. ಆನ್‍ಲೈನ್ ಗೇಮ್ಸ್‌ನಿಂದ ಆಗುವ ದುಷ್ಪರಿಣಾಮದ ಬಗ್ಗೆ ಉಪನ್ಯಾಸ, ದೃಶ್ಯರೂಪಕಗಳ ಮೂಲಕ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಗೃಹ ಇಲಾಖೆ ತಿಳಿಸಿದೆ.
ಬೀಟ್‍ಗಳಲ್ಲಿ ಯುವಕರು ಹಾಗೂ ಸಾರ್ವಜನಿಕರೊಂದಿಗೆ ಸಭೆ ನಡೆಸಿ ಯಾವುದೇ ತರಹದ ಆನ್‍ಲೈನ್ ಗೇಮ್ಸ್ ಮತ್ತು ಆನ್‍ಲೈನ್ ಜೂಜುಗಳ ಚಟಕ್ಕೆ ಒಳಗಾಗದಂತೆ ಎಚ್ಚರಿಕೆ ನೀಡಲಾಗುತ್ತಿದೆ. ಅಲ್ಲದೆ ಆನ್ ಲೈನ್ ಗೇಮ್ಸ್ ಮತ್ತು ಜೂಜಿನಲ್ಲಿ ತೊಡಗಿಸಿಕೊಂಡವರ ಮೇಲೆ ದಾಳಿ ನಡೆಸಿ ಪ್ರಕರಣಗಳನ್ನು ದಾಖಲು ಮಾಡಲಾಗುತ್ತಿದೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಕೆಎಸ್‌ಆರ್‌ಟಿಸಿ ಸೌಲಭ್ಯ ಕಲ್ಪಿಸಲು ತಾಲೂಕು ಕೇಂದ್ರದಲ್ಲಿ…
ಶ್ರೀರಂಗಪಟ್ಟಣ: ವಿದ್ಯುತ್ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್‌ಮ್ಯಾನ್ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಹೆಬ್ಬಾಡಿ ಗ್ರಾಮದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಹಲವೆಡೆ ಇಂದು ಧಾರಾಕಾರ ಮಳೆಯಾಗಿದ್ದು, ಭಾರೀ ಅವಾಂತರ ಸೃಷ್ಟಿ ಮಾಡಿದೆ. ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವೆಡೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಟಳ್ಳಿ, ಕೌದಳ್ಳಿ, ಶೆಟ್ಟಳ್ಳಿ, ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ…
ಮೈಸೂರು: ಅರಮನೆಗಳ ನಗರಿ ಮೈಸೂರಿನಲ್ಲಿ ಅವೈಜ್ಞಾನಿಕವಾಗಿ ಟ್ರಾಫಿಕ್ ಸಿಗ್ನಲ್ ಅಳವಡಿಸಲಾಗಿದೆ ಎಂದು ಸಾರ್ವಜನಿಕರು ಕಿಡಿಕಾರುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಮಹದೇವಪ್ಪ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಕೇಂದ್ರ ಗೃಹ ಸಚಿವ…