ರಾಜ್ಯ

ದ್ವಿದಳ ಧಾನ್ಯ ಬೆಳೆಯಲು 35 ಸಾವಿರ ಕೋಟಿ ಕೇಂದ್ರ ಅನುದಾನ : ಎಚ್‌ಡಿಕೆ

ಬೆಂಗಳೂರು : ದ್ವಿದಳ ಧಾನ್ಯ ಬೆಳೆಯಲು ರೈತರಿಗೆ ಉತ್ತೇಜನ ನೀಡುವ ಯೋಜನೆಗೆ ಕೇಂದ್ರ ಸರ್ಕಾರದಿಂದ 35 ಸಾವಿರ ಕೋಟಿ ರೂ.ನಷ್ಟು ಅನುದಾನ ಒದಗಿಸಲಾಗಿದೆ ಎಂದು ಕೇಂದ್ರ ಬೃಹತ್‍ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.

ಯಲಹಂಕದಲ್ಲಿ ರಾಷ್ಟ್ರೀಯ ಕೃಷಿ ಕೀಟ ಸಂಪನೂಲ ಬ್ಯೂರೋದ 33ನೇ ಸಂಸ್ಥಾಪನಾ ದಿನಾಚರಣೆ ಹಾಗೂ 3ನೇ ಕೃಷಿಕೀಟ ಜೈವಿಕ ನಿಯಂತ್ರಣದ ಪ್ರದರ್ಶನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬೇಳೆಕಾಳುಗಳನ್ನು ಬೆಳೆಯಲು ರೈತರು ಮುಂದಾಗಬೇಕೆಂದು ಪ್ರಧಾನಿ ನರೇಂದ್ರಮೋದಿ ಅವರು ಸಲಹೆ ಮಾಡಿದ್ದಾರೆ. ಅಕ್ಕಿಯಿಂದಲೇ ಪೌಷ್ಠಿಕತೆ ಸಾಧ್ಯವಿಲ್ಲ. ಹೀಗಾಗಿ ದ್ವಿದಳ ಧಾನ್ಯ ಪೌಷ್ಟಿಕತೆ ಹೆಚ್ಚಳಕ್ಕೆ ಸಹಕಾರಿಯಾಗಿದೆ ಎಂದು ಹೇಳಿದರು.

ಇದನ್ನು ಓದಿ: ಅ.31 ರವರೆಗೆ ಸಮೀಕ್ಷೆ ವಿಸ್ತರಣೆ

ಪ್ರಧಾನಿಯವರು ಕೃಷಿಗೆ ಹೆಚ್ಚು ಒತ್ತು ನೀಡಿದ್ದಾರೆ. ರಾಷ್ಟ್ರವು ಕೃಷಿ ಕ್ಷೇತ್ರದಲ್ಲಿ ದೊಡ್ಡ ಸಾಧನೆಗಳನ್ನು ಮಾಡುತ್ತಿದೆ. ರೈತರ ಬಗ್ಗೆ ಕಳಕಳಿ ಹೊಂದಿರುವ ಮೋದಿಯವರು ರೈತರಿಗೆ ಆರ್ಥಿಕಶಕ್ತಿ ತುಂಬಲು ಪ್ರಯತ್ನ ಮಾಡುತ್ತಿದ್ದಾರೆ ಎಂದು ತಿಳಿಸಿದರು.

ಕಳಪೆ ರಸಗೊಬ್ಬರ ಮಾರಾಟವಾಗುತ್ತಿದೆ. ಇದರಿಂದ ಭೂಮಿಯ ಫಲವತ್ತತೆ ನಾಶವಾಗುವುದಲ್ಲದೆ, ಆಹಾರದ ಉತ್ಪಾದನೆಯಲ್ಲು ಕುಂಠಿತವಾಗುತ್ತದೆ. ಕಪ್ಪು ತಲೆ ಹುಳುವಿನ ಬಾಧೆಯಿಂದ ತೆಂಗು ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹುಳುಗಳ ಬಾಧೆಗೆ ನನ್ನ ತೆಂಗಿನ ತೋಟವು ಒಳಗಾಗಿದೆ. ತೆಂಗಿನ ಮರದ ಗರಿಗಳು ಒಣಗುತ್ತಿವೆ. ಕ್ರಿಮಿನಾಶಕವನ್ನು ಅನಿಯಂತ್ರಿತವಾಗಿ ಬಳಸುವುದರಿಂದ ರೈತರ ಬದುಕು ಹಾಳಾಗುತ್ತಿದೆ ಎಂದು ಅವರು ಹೇಳಿದರು.

ಇದೇ ಸಂದರ್ಭದಲ್ಲಿ ಉತ್ತಮ ಸಾಧನೆ ಮಾಡಿದ ರೈತರನ್ನು ಸನಾನಿಸಲಾಯಿತು. ಕಾರ್ಯಕ್ರಮದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಂಸದ ಡಾ.ಸಿ.ಎನ್.ಮಂಜುನಾಥ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಎಲ್‌ಪಿಜಿ ಕೊರತೆ | ಕೇಂದ್ರದಿಂದ 1955ರ ಕಾಯ್ದೆ ಜಾರಿ ; ಏನಿದು ಅಗತ್ಯ ಸರಕು ಕಾಯ್ದೆ?

ಹೊಸದಿಲ್ಲಿ : ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ಇಂಧನ ಪೂರೈಕೆಯ ಮೇಲೆ ಹೆಚ್ಚುತ್ತಿರುವ ಒತ್ತಡದ ನಡುವೆ, ದೇಶೀಯ ಇಂಧನ ಮಾರುಕಟ್ಟೆಯನ್ನು…

2 mins ago

ನ್ಯಾಯಾಂಗ ಭ್ರಷ್ಟಾಚಾರ ಕುರಿತ ಅಧ್ಯಾಯ ವಿವಾದ ; ಸಾರ್ವಜನಿಕ ಕ್ಷಮೆ ಯಾಚಿಸಿದ ಎನ್‌ಸಿಇಆರ್‌ಟಿ

ಹೊಸದಿಲ್ಲಿ : ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ (ಎನ್‌ಸಿಇಆರ್‌ಟಿ) ಇತ್ತೀಚೆಗೆ ಪ್ರಕಟಿಸಿದ್ದ 8ನೇ ತರಗತಿಯ ಸಮಾಜ ವಿಜ್ಞಾನ…

17 mins ago

ಟಿ.20 ವಿಶ್ವಕಪ್‌ | ವೀಕ್ಷಕರ ಸಂಖ್ಯೆಯಲ್ಲಿ ದಾಖಲೆ ; 82.1 ಕೋಟಿ ಮಂದಿ ವೀಕ್ಷಣೆ

ಅಹ್ಮದಾಬಾದ್ : ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟಿ-20 ವಿಶ್ವಕಪ್ ಫೈನಲ್ ಪಂದ್ಯ…

24 mins ago

17ಬಾರಿ ಬಜೆಟ್‌ ಮಂಡಿಸಿ ಮೈಸೂರಿಗೆ ಏನು ಮಾಡಿದ್ದೀರಿ? ; ಸಿಎಂಗೆ ಪ್ರತಾಪ್‌ ಸಿಂಹ ಪ್ರಶ್ನೆ

ಮೈಸೂರು : 17 ಬಾರಿ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿಗೆ ಏನು ಮಾಡಿದ್ದಾರೆ ಎಂದು ಮಾಜಿ ಸಂಸದ…

33 mins ago

ವಿದ್ಯಾರ್ಥಿಗಳೇ ಮಾದಕ ವಸ್ತುಗಳಿಂದ ದೂರವಿರಿ : ಕಮಿಷನರ್‌ ಸೀಮಾ ಲಾಟ್ಕರ್‌

ಮೈಸೂರು : ವಿದ್ಯಾರ್ಥಿಗಳು ಮಾದಕ ವಸ್ತುಗಳಿಂದ ದೂರವಿದ್ದು, ಶಿಕ್ಷಣಕ್ಕೆ ಹೆಚ್ಚು ಮಹತ್ವ ಕೊಟ್ಟು ಉತ್ತಮ ಭವಿಷ್ಯ ರೂಪಿಸಿಕೊಳ್ಳಿ ಎಂದು ನಗರ…

56 mins ago

ಜಾಗತಿಕ ಇಂಧನ ಬಿಕ್ಕಟು ಸೃಷ್ಟಿ : ಯುದ್ಧ ಕೊನೆಗೊಳಿಸಲು ಅಮೆರಿಕಾ ಮೇಲೆ ಒತ್ತಡ

ಟೆಹ್ರಾನ್‌ : ಅಮೆರಿಕ-ಇಸ್ರೇಲ್-ಇರಾನ್ ನಡುವಿನ ಘರ್ಷಣೆ 11ನೇ ದಿನಕ್ಕೆ ಕಾಲಿಟ್ಟಿದೆ. ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಪಡೆಗಳು…

2 hours ago