ರಾಜ್ಯ

35 ಸಾವಿರ ಹುದ್ದೆ ಹಂತ ಹಂತವಾಗಿ ಭರ್ತಿ : ಸಿ.ಎಂ ಘೋಷಣೆ

ಬೆಂಗಳೂರು : ವಿದ್ಯುತ್ ಪ್ರಸರಣ ಇಲಾಖೆಯಲ್ಲಿ ಖಾಲಿ ಇರುವ 35000 ಸಾವಿರ ನಿಮ್ಮ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು. ಇಲಾಖೆಯ 532 ಮಂದಿ ಪೌರ ಕಾರ್ಮಿಕರ ಹುದ್ದೆ ಕಾಯಂ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ನೌಕರರ ಸಂಘದ ವಜ್ರ ಮಹೋತ್ಸವವನ್ನು ಉದ್ಘಾಟಿಸಿ, ವಜ್ರಜ್ಯೋತಿ ಸ್ಮರಣ ಸಂಚಿಕೆ ಲೋಕಾರ್ಪಣೆ ಮಾಡಿ ಮಾತನಾಡಿದರು.

ನಮ್ಮದು ನುಡಿದಂತೆ ನಡೆಯುವ ಸರ್ಕಾರ. ನಿಮ್ಮ ಬೇಡಿಕೆಗಳ ಪರಿಶೀಲಿಸಿ ಕ್ರಮ ತೆಗೆದುಕೊಳ್ಳುತ್ತೇವೆ. NPS ಜಾರಿ ಮಾಡಿದ್ದು ಕೇಂದ್ರ ಸರ್ಕಾರ. ನಾವು OPS ಜಾರಿಯನ್ನು ಪ್ರಣಾಳಿಕೆಯಲ್ಲೇ ಘೋಷಿಸಿದ್ದೇವೆ. ಈ ಬಗ್ಗೆ ಚರ್ಚಿಸಿ ಅಗತ್ಯ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಇದೇ ಸಂದರ್ಭದಲ್ಲಿ ಘೋಷಿಸಿದರು.

1964 ರಲ್ಲಿ ಆರಂಭವಾದ ನೌಕರರ ಸಂಘ ಇಷ್ಟು ಮಹತ್ತರ ವರ್ಷಗಳ ಕಾಲ ನಿರಂತರವಾಗಿ ನೌಕರರ ಕಷ್ಟ ಸುಖಗಳಿಗೆ ಸ್ಪಂದಿಸಿ, ಪ್ರಾಮಾಣಿಕ ಹೋರಾಟ ನಡೆಸುತ್ತಿದೆ. ಜೊತೆಗೆ ಗ್ರಾಹಕರಿಗೆ ಸಮರ್ಪಕ ವಿದ್ಯುತ್ ಪೂರೈಸುವ ಹೊಣೆಗಾರಿಕೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ್ದೀರಿ. ಇದಕ್ಕೆ ನೀವೆಲ್ಲರೂ ಅಭಿನಂದನಾರ್ಹರು ಎಂದು ಶ್ಲಾಘಿಸಿದರು.

ಇಡೀ ಏಷ್ಯಾದಲ್ಲಿ ಮೊದಲಿಗೆ ವಿದ್ಯುತ್ ಉತ್ಪಾದನೆ ಆಗಿದ್ದು 1902 ರಲ್ಲಿ ಕರ್ನಾಟಕದಲ್ಲಿ. 1905 ರಲ್ಲಿ ಬೆಂಗಳೂರಿನಲ್ಲಿ ಪ್ರಥಮ ವಿದ್ಯುತ್ ಸರಬರಾಜು ಕಂಪನಿ ಆರಂಭಿಸಲಾಯಿತು. 1908 ರಲ್ಲಿ ಮೊದಲ ಬಾರಿ ಅರಮನೆಗೆ ವಿದ್ಯುತ್ ಬಂತು. ಅಲ್ಲಿಂದ ಇಲ್ಲಿವರೆಗೆ ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆಯಲ್ಲಿ ನಾವು 34000 ಮೆಘಾ ವ್ಯಾಟ್ ಉತ್ಪಾದನೆ ಮಾಡುತ್ತಿರುವ ರಾಜ್ಯ ಎನ್ನುವ ಹೆಗ್ಗಳಿಕೆ ಕೇವಲ ನಮ್ಮ ರಾಜ್ಯದ್ದಾಗಿದೆ ಎಂದರು.

ಆಹಾರ ಉತ್ಪಾದನೆಯಲ್ಲಿ ನಾವು ಸ್ವಾವಲಂಬಿಗಳಾಗುತ್ತಿರುವುದು ವಿದ್ಯುತ್ ಉತ್ಪಾದನೆಯಲ್ಲಿ ಸ್ವಾವಲಂಬಿಗಳಾಗಿರುವ ಕಾರಣಕ್ಕೆ ಎಂದು ವಿಶ್ಲೇಷಿಸಿದರು.

ರೈತರಿಗೆ, ಕೃಷಿಗೆ, ಪಂಪ್ ಸೆಟ್ ಗಳಿಗೆ ಹಗಲಲ್ಲೂ 7 ಗಂಟೆ ಅಗತ್ಯ ವಿದ್ಯುತ್ ಸರಬರಾಜು ಮಾಡಲು ಶಕ್ತರಾಗುತ್ತೇವೆ. ಈ ಗುರಿ ಇಟ್ಟುಕೊಂಡು ಕೆಲಸಗಳು ನಡೆಯುತ್ತಿವೆ. 60000 ಮೆಘಾ ವ್ಯಾಟ್ ಉತ್ಪಾದನೆ ಗುರಿ ನಾವು ತಲುಪಿದ ತಕ್ಷಣ ಇದು ಸಾಧ್ಯವಗಲಿದೆ. ವಿದ್ಯುತ್ ಪ್ರಮುಖ ಕಚ್ಛಾವಸ್ತು ಎನ್ನುವುದನ್ನು ನಾವು ಮರೆಯಬಾರದು ಎಂದರು.

ನೌಕರರು ಮತ್ತು ಕಾರ್ಮಿಕರು ಬಹಳ ಶ್ರಮ ವಹಿಸಿ ಕೆಲಸ ನಿರ್ವಹಿಸುತ್ತಿದ್ದೀರಿ. ನಿಮ್ಮ ಎಲ್ಲಾ ಬೇಡಿಕೆಗಳನ್ನೂ ಈಡೇರಿಸಲು ನಮ್ಮ ಸರ್ಕಾರ ಸಿದ್ಧವಿದೆ. ನಾವು ನಿಮ್ಮ ಜೊತೆಗೆ ಇದ್ದೇವೆ. ನೀವು ನಮ್ಮ ಜೊತೆಗೆ ಇರಿ ಎಂದು ಕರೆ ನೀಡಿದರು.

ಆಂದೋಲನ ಡೆಸ್ಕ್

Recent Posts

ಗಣೇಶ ಮೆರವಣಿಗೆಗೆ ಮುಸ್ಲಿಮರ ಸಾರಥ್ಯ ; ನಾಗಮಂಗಲದಲ್ಲಿ ಕೋಮು ಸೌಹಾರ್ದದ ಮೆರವಣಿಗೆ

ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…

3 hours ago

ಇ-ಕೆವೈಸಿಗೆ ಗಡುವು ವಿಸ್ತರಣೆ

ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…

16 hours ago

ಯುಪಿಐ ಶುಲ್ಕ | ನಮ್ಮ ಕಿಸೆಯೊಳಗೆ ಸರ್ಕಾರದ ಕೈ

ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…

16 hours ago

ಓದಗರ ಪತ್ರ | ಮರಳಿಗೆ ಮೊಳೆ ಹೊಡೆಯದೇ ದೀಪಾಲಂಕಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಿ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…

17 hours ago

ಓದುಗರ ಪತ್ರ | ಮುಷ್ಕರದ ಉದ್ದೇಶವೇ ಭಂಗಗೊಳಿಸುವುದಲ್ಲವೇ ?

ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…

17 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಅನಂತ್‌ಗೆ ಫಾಲ್ಕೆ : ಕನ್ನಡ ಚಿತ್ರರಂಗಕ್ಕೆ ಅತ್ಯುನ್ನತ ಗೌರವ

ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…

17 hours ago