ರಾಜ್ಯ

ಕೆಮ್ಮಿನ ಸಿರಪ್‌ನ 390 ಸ್ಯಾಂಪಲ್‌ ತಪಾಸಣೆ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಕೆಮ್ಮಿನ ಸಿರಪ್‌ ಔಷಧಗಳ 390 ಸ್ಯಾಂಪಲ್‌ ತಪಾಸಣೆ ಮಾಡಲಾಗುತ್ತಿದೆ. ಈವರೆಗೂ ವರದಿಯಲ್ಲಿ ಯಾವುದೇ ನೆಗೆಟಿವ್‌ ಬಂದಿಲ್ಲ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 390 ಸ್ಯಾಂಪಲ್‌ ತಪಾಸಣೆ ಮಾಡಿಸುತ್ತಿದ್ದೇವೆ. ವರದಿಯ ಯಾವುದರಲ್ಲೂ ನೆಗೆಟಿವ್‌ ಬಂದಿಲ್ಲ. ಎಲ್ಲಾ ಕಡೆ ಪರಿಶೀಲನೆ ನಡೆಸುತ್ತಿದ್ದೇವೆ. ಅವ್ಯವಸ್ಥೆ ಇರಬಾರದು. ನಿಮಯಗಳ ಪ್ರಕಾರ ಔಷಧ ತಯಾರು ಮಾಡಬೇಕು. ಹಾಗಾಗಿ ಅದನ್ನೆಲ್ಲಾ ಪರಿಶೀಲನೆ ನಡೆಸುತ್ತಿದ್ದೇವೆ ಎಂದು ಸ್ಪಷ್ಟನೆ ನೀಡಿದರು.

ಇನ್ನು ಸಂಪುಟ ಪುನಾರಚನೆ ಬಗ್ಗೆ ಮಾತನಾಡಿದ ಅವರು, ನಮಗಂತೂ ಈ ಬಗ್ಗೆ ಯಾವ ಮಾಹಿತಿಯೂ ಇಲ್ಲ. ಸಿಎಂ ಊಟಕ್ಕೆ ಕರೆದಿರೋದು ಅವರಿಗಷ್ಟೇ ಗೊತ್ತಿರುತ್ತದೆ. ನಮ್ಮ ಅಧ್ಯಕ್ಷರು ಹೇಳಿದ ಮೇಲೆ ಅದೇ ಸ್ಪಷ್ಟನೆ. ಪುನಾರಚನೆ ಬಗ್ಗೆ ಪಕ್ಷದ ವರಿಷ್ಠರು ಚರ್ಚೆ ಮಾಡುತ್ತಾರೆ. ಅಧ್ಯಕ್ಷರೇ ಹೇಳಿದ ಮೇಲೆ ಇನ್ನೇನು, ಗಾಳಿ ಸುದ್ದಿಗೆಲ್ಲಾ ಹೈಕಮಾಂಡ್‌ ಉತ್ತರ ಕೊಡಲು ಆಗಲ್ಲ ಎಂದು ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ʼದಳಪತಿʼ ವಿಜಯ್‌ ಸೆಳೆಯಲು ಬಿಜೆಪಿ ತಂತ್ರ : ಡಿಸಿಎಂ ಸ್ಥಾನದ ಜತೆಗೆ 80 ಸ್ಥಾನದ ಆಫರ್‌!

ಚೆನ್ನೈ : ತಮಿಳುನಾಡು ರಾಜಕಾರಣದಲ್ಲಿ ತಮ್ಮದೇ ಆದ ಕ್ರೇಜ್‌ ಸೃಷ್ಟಿಸಿಕೊಂಡಿರುವ ಟಿವಿಕೆ ಪಕ್ಷದ ಅಧ್ಯಕ್ಷ, ನಟ ʼದಳಪತಿʼ ವಿಜಯ್ ಅವರನ್ನು…

6 hours ago

ತಂಪೆರೆದ ಮಳೆ ; ಕೊಡಗು ಸೇರಿದಂತೆ ರಾಜ್ಯದ ಹಲವೆಡೆ ಮಳೆ

ಮೈಸೂರು : ಜನರು ವಿಪರೀತ ಸೆಕೆಯಿಂದಾಗಿ ತತ್ತರಿಸಿ ಹೋಗಿರುವ ನಡುವೆ ಕೆಲ ಜಿಲ್ಲೆಗಳಲ್ಲಿ ಇಂದು(ಮಾರ್ಚ್.‌15) ಸಂಜೆ ಅಕಾಲಿಕವಾಗಿ ಮಳೆ ಸುರಿದು…

6 hours ago

ಮಂಡ್ಯ | ನಾಲೆ ಅಭಿವೃದ್ಧಿಗೆ 100 ಕೋಟಿ ಅನುದಾನ ; ಶಾಸಕ ರವಿಕುಮಾರ್‌

ಮಂಡ್ಯ : ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಗೆ ಸಮಗ್ರ ಯೋಜನೆ ರೂಪಿಸಲಾಗಿದ್ದು, ಬಸರಾಳು ಭಾಗದ ಹೇಮಾವತಿ ನಾಲೆ ಅಭಿವೃದ್ಧಿಗೆ 350…

7 hours ago

ಆದಿಚುಂಚನಗಿರಿ ಶ್ರೀಗಳ ನಡೆ ದಾರಿ ತಪ್ಪುತ್ತಿದೆ ಹೇಳಿಕೆ : ಕ್ಷೆಮೆಯಾಚಿಸಿದ ಶಾಸಕ ರಮೇಶ್‌ ಬಂಡಿಸಿದ್ದೇಗೌಡ

ಮಂಡ್ಯ : ನಾನು ಯಾವಾಗ ಮಾತನಾಡಿದರೂ ವಿವಾದ ಆಗುತ್ತೆ. ನನ್ನ ಮಾತಿನಿಂದ ನೋವಾಗಿದ್ದರೆ, ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ ಕ್ಷಮೆ ಯಾಚಿಸುತ್ತೇನೆ…

7 hours ago

ಎಚ್‌.ಡಿ.ಕೋಟೆ | ಬೈಕುಗಳ ನಡುವೆ ಡಿಕ್ಕಿ : ಓರ್ವ ಸಾವು

ಎಚ್.ಡಿ.ಕೋಟೆ : ಎರಡು ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವಿಗೀಡಾಗಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ ಹೆರಿಗೆ…

7 hours ago

ಭೀಕರ ಅಪಘಾತ : ಮೂವರು ಪೊಲೀಸ್ ಅಧಿಕಾರಿಗಳು ಸಾವು ; ಸ್ಥಳಕ್ಕೆ ಗೃಹ ಸಚಿವರ ಭೇಟಿ

ಚಿತ್ರದುರ್ಗ : ಚಳ್ಳಕೆರೆ ಸಮೀಪದ ಹೆಗ್ಗೆರೆ ಗೇಟ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಪೊಲೀಸ್ ಅಧಿಕಾರಿಗಳು ಮೃತಪಟ್ಟಿದ್ದಾರೆ. ಇಬ್ಬರು…

7 hours ago