Mysore
23
clear sky

Social Media

ಗುರುವಾರ, 26 ಮಾರ್ಚ್ 2026
Light
Dark

ಗೌರಿ ಲಂಕೇಶ್‌ ಪ್ರಕರಣ: ನಾಲ್ವರು ಆರೋಪಿಗಳಿಗೆ ಜಾಮೀನು

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ನಾಲ್ಕು ಆರೋಪಿಗಳಿಗೆ ಹೈಕೋರ್ಟ್‌ನ ಏಕಸದಸ್ಯ ಪೀಠ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಪ್ರಕರಣಕ್ಕೆ ಸಂಬಂಧಪಟ್ಟ ಆರೋಪಿಗಳು ಜಾಮೀನಿಗಾಗಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಗಳನ್ನು ಹೈಕೋರ್ಟ್‌ನ ನ್ಯಾಯಮೂರ್ತಿ ಎಸ್‌.ವಿಶ್ವಜಿತ್‌ ಅವರ ಏಕಸದಸ್ಯ ನ್ಯಾಯಪೀಠ ಸ್ವೀಕರಿಸಿ ಜಾಮೀನನ್ನು ಕೇವಲ ನಾಲ್ವರು ಆರೋಪಿಗಳಿಗೆ ಮಂಜೂರು ಮಾಡಿದೆ.

ಆರೋಪಿಗಳಾದ ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದ ಶ್ರೀಕಾಂತ್‌ ಪಂಗಾರ್ಕರ್‌(48), ಹುಕ್ಕೇರಿಯ ಭರತ್‌ ಜಯವಂತ ಕುರಾನೆ(42), ಮಹಾರಾಷ್ಟ್ರದ ಸತಾರದ ಸುಧನ್ವ ಗೋಂದಲೇಕರ್‌(43) ಹಾಗೂ ಶಿಕಾರಿಪುರದ ಸುನಿತ್‌ ಕುಮಾರ್‌(42) ಅವರಿಗೆ ಷರತ್ತುಬದ್ಧ ಜಾಮೀನುನ್ನು ಮಂಜೂರು ಮಾಡಲಾಗಿದೆ.

Tags:
error: Content is protected !!