ಬೆಂಗಳೂರು: ವಿಧಾನಸೌಧದ ಆವರಣದಲ್ಲಿ ಮೊದಲ ಬಾರಿಗೆ 4 ದಿನಗಳ ಕಾಲ ಪುಸ್ತಕ ಮೇಳವನ್ನು ಆಯೋಜಿಸಲಾಗಿದೆ ಎಂದು ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್ ತಿಳಿಸಿದರು.
ಇಂದು ಫೆ.24 ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಫೆ.27 ರಿಂದ ಮಾ.2 ರವರೆಗೆ 4 ದಿನಗಳ ಕಾಲ ಪುಸ್ತಕ ಮೇಳ ನಡೆಯಲಿದೆ. ಜೊತೆಗೆ ಸಂಜೆಯ ವೇಳೆ ಸಾಧುಕೋಕಿಲ ನೇತೃತ್ವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು, ಕವಿಗೋಷ್ಠಿಗಳು ನಡೆಯುತ್ತವೆ ಎಂದು ತಿಳಿಸಿದರು.
ಲೇಖಕರು ಪುಸ್ತಕ ಬಿಡುಗಡೆ ಮಾಡುತ್ತಾರೆ. ಸರ್ಕಾರದ ಎಲ್ಲ ಭಾಷಾ ಆಕಾಡೆಮಿಗಳಿಗೆ ಒಂದೊಂದು ಪುಸ್ತಕ ಸ್ಟಾಲ್ ಮೀಸಲು ಕೊಡುತ್ತೇವೆ ಎಂದರು.
ಸುಮಾರು 15 ವಿಷಯಗಳಲ್ಲಿ ಸಂವಾದ ಕಾರ್ಯಕ್ರಮ ಇರಲಿದ್ದು, ನಿತ್ಯ 4 ವಿಷಯಗಳ ಮೇಲೆ ಸಂವಾದಗಳು ನಡೆಯಲಿವೆ. ಸಂವಿಧಾನ, ಕ್ರೀಡೆ, ಕನ್ನಡ, ಸಾಹಿತ್ಯ, ಮಕ್ಕಳ ಸಾಹಿತ್ಯ, ಚಲನಚಿತ್ರ ಸೇರಿದಂತೆ ಹಲವು ವಿಷಯಗಳ ಬಗ್ಗೆ ಸಂವಾದ ನಡೆಯಲಿದೆ ಎಂದು ತಿಳಿಸಿದರು.
ವಿವಿಧ ಶಾಲೆಗಳಿಂದ ಬರುವ ಮಕ್ಕಳಿಗೆ ಅಸೆಂಬ್ಲಿ ನೋಡಲು ಅವಕಾಶವಿರುತ್ತದೆ. ಆಯ್ಕೆ ಸಮಿತಿಯ ಆಯ್ಕೆ ಮಾಡಿದ 5 ಜನರಿಗೆ ಪ್ರತಿಭಾ ಪುರಸ್ಕಾರ ನೀಡಲಾಗುತ್ತದೆ. ಸಾರ್ವಜನಿಕರಿಗೆ ಮಾ.2ರವರೆಗೆ ಮುಕ್ತ ಅವಕಾಶವಿದ್ದು, ಮಾ.3 ರಂದು ಶಾಸಕರಿಗೆ ಪುಸ್ತಕ ಮೇಳ ಇರಲಿದೆ. ಪುಸ್ತಕಮೇಳಕ್ಕೆ ರಾಜ್ಯಪಾಲರಿಗೂ ಆಹ್ವಾನ ನೀಡಲಾಗಿದೆ ಎಂದು ಮಾಹಿತಿ ನೀಡಿದರು.
‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…
ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…
ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…
ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್ ಅಕಾಡೆಮಿ ಮೈಸೂರು ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…
ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…