Mysore
25
overcast clouds

Social Media

ಶುಕ್ರವಾರ, 12 ಡಿಸೆಂಬರ್ 2025
Light
Dark

ಸಕ್ರೆಬೈಲು ಶಿಬಿರದಲ್ಲಿ 4 ಆನೆಗಳಿಗೆ ಗಾಯ: ಸಚಿವ ಈಶ್ವರ್‌ ಖಂಡ್ರೆ ಹೇಳಿದ್ದಿಷ್ಟು.!

ಬೆಂಗಳೂರು: ಸಕ್ರಬೈಲು ಆನೆ ಶಿಬಿರದಲ್ಲಿ ನಾಲ್ಕು ಆನೆಗಳು ಗಾಯದಿಂದ ಬಳಲುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಪ್ರತಿಕ್ರಿಯೆ ನೀಡಿದ್ದಾರೆ.

ಈ ಸಂಬಂಧ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗೆ ಪತ್ರ ಬರೆದಿರುವ ಸಚಿವ ಈಶ್ವರ್‌ ಖಂಡ್ರೆ ಅವರು, ಸಕ್ರೆಬೈಲು ಆನೆ ಶಿಬಿರದಲ್ಲಿರುವ ಬಾಲಣ್ಣ ಎಂಬ ಆನೆಯನ್ನು ಶಿವಮೊಗ್ಗ ದಸರಾಗೆ ಕಳುಹಿಸಲಾಗಿತ್ತು. ಆ ವೇಳೆ ಗಾಯಗೊಂಡಿದ್ದ ಆನೆಗೆ ಚುಚ್ಚುಮದ್ದು ನೀಡುವ ಸಂದರ್ಭದಲ್ಲಿ ಆಗಿರುವ ನಿರ್ಲಕ್ಷ್ಯದಿಂದ ಸೋಂಕು ಆಗಿ ನರಳುತ್ತಿದೆ. ಜೊತೆಗೆ ಶಿಬಿರದಲ್ಲಿರುವ ಮತ್ತೊಂದು ಆನೆ ಸಾಗರ್ ಸೇರಿದಂತೆ 4 ಆನೆಗಳಿಗೆ ಗಾಯದಿಂದ ಬಳಲುತ್ತಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಜಾನುವಾರುಗಳ ಅಕ್ರಮ ಸಾಗಾಟ: 20 ಕರುಗಳನ್ನು ರಕ್ಷಿಸಿದ ಪೊಲೀಸರು

ಇಲ್ಲಿ ಪಶುವೈದ್ಯರ ಕೊರತೆ ಇದೆ ಎಂದು ವರದಿಯಾಗಿದೆ. ಇದನ್ನು ಸರ್ಕಾರ ಗಂಭೀರವಾಗಿ ಪರಗಣಿಸಿದೆ. ರಾಜ್ಯದಲ್ಲಿರುವ ಎಲ್ಲಾ ಆನೆ ಶಿಬಿರಗಳಲ್ಲಿ ಮತ್ತು ಮೃಗಾಲಯದಲ್ಲಿ ಸಮರ್ಪಿತ ವೈದ್ಯಾಧಿಕಾರಿ ಇರಬೇಕು ಎಂದು ಈ ಹಿಂದೆ ಹಲವು ಸಭೆಗಳಲ್ಲಿ ತಿಳಿಸಲಾಗಿದೆ ಎಂದು ತಿಳಿಸಿದ್ದಾರೆ.

ಒಂದು ವೇಳೆ ಆನೆಗೆ ಚುಚ್ಚುಮದ್ದು ನೀಡುವ ವೇಳೆ ವೈದ್ಯಾಧಿಕಾರಿ, ಅಧಿಕಾರಿ ಹಾಗೂ ಸಿಬ್ಬಂದಿಯ ನಿರ್ಲಕ್ಷ್ಯ ಇದ್ದಲ್ಲಿ ಅವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಸೂಚನೆ ನೀಡಿದರು.

Tags:
error: Content is protected !!